ನಾನಿನ್ನು ಸತ್ತಿಲ್ಲ, ಬದುಕಿದ್ದೇನೆ: ಡಿಕೆ ಶಿವಕುಮಾರ್

Date:

ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ವೇಳೆ ಬಿಜೆಪಿಗರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಬಿಜೆಪಿ ಪ್ರತಿಭಟನೆಗೆ ನಾವು ಹೆದರುವುದಿಲ್ಲ. ನಾನಿನ್ನು ಸತ್ತಿಲ್ಲ, ಬದುಕಿದ್ದೇನೆ. ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

- Advertisement -

1924ರಲ್ಲಿ ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷಗಳಾಗಿದ್ದು, ಡಿಸೆಂಬರ್ 27ರಂದು ಶತಮಾನೋತ್ಸವ ಕಾರ್ಯಕ್ರಮ ನಡೆಸಲು ಕಾಂಗ್ರೆಸ್‌ ತಯಾರಿ ಮಾಡುತ್ತಿದೆ. ಸಿದ್ದತೆಗಳ ಬಗ್ಗೆ ಅವಲೋಕನ ನಡೆಸಿರುವ ಡಿ.ಕೆ ಶಿವಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿದ್ದು, “ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿ, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಗಾಂಧೀಜಿ ಅವರನ್ನು ದಿನನಿತ್ಯ ನೆನೆಯಬೇಕೆಂಬ ಕಾರಣಕ್ಕೆ ಅವರ ಭಾವಚಿತ್ರವನ್ನು ನೋಟುಗಳ ಮೇಲೆ ಮುದ್ರಣ ಮಾಡಲಾಗುತ್ತಿದೆ. ಅವರ ಸ್ಮರಣೆಗಾಗಿ ನಡೆಯುವ ಕಾರ್ಯಕ್ರಮದ ವೇಳೆ ಪ್ರತಿಭಟನೆ ಮಾಡುತ್ತೇವೆ ಎಂದರೆ, ನಾವು ಹೆದರುವುದಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಬಿಜೆಪಿಗರು ಸಿ.ಟಿ ರವಿ ಅವರನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಆದರೆ, ಮಹಿಳೆಯರ ಬಗ್ಗೆ ಅವರ ಆಡಿರುವ ಮಾತುಗಳನ್ನು ಬಿಜೆಪಿಗರು ಪ್ರಶ್ನಿಸುತ್ತಿಲ್ಲ. ಈ ಬಗ್ಗೆ ಮಾಧ್ಯಮಗಳು ಪ್ರಶ್ನೆ ಮಾಡಬೇಕು” ಎಂದಿದ್ದಾರೆ.

ಈ ವರದಿ ಓದಿದ್ದೀರಾ?: ಅದಾನಿ ಸೋಲಾರ್ ಒಪ್ಪಂದದ ಹಿಂದಿದೆ ಕೇಂದ್ರ-ಆಂಧ್ರ ಸರ್ಕಾರಗಳ ಚಮತ್ಕಾರ

ಸಿ.ಟಿ ರವಿ ಅವರನ್ನು ಫೇಕ್‌ ಎನ್‌ಕೌಂಟರ್ ಮಾಡಲು ಹುನ್ನಾರ ನಡೆದಿತ್ತು ಎಂದು ಪ್ರಹ್ಲಾದ್ ಜೋಶಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, “ಜೋಶಿ ಅವರ ಆರೋಪಕ್ಕೆ ಗೃಹಸಚಿವರು, ಪೊಲೀಸರು ಉತ್ತರ ನೀಡುತ್ತಾರೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...