ಲಕ್ಷ್ಮೀ ಹೆಬ್ಬಾಳ್ಕರ್‌ ಪುತ್ರ ಸೋಲಲು ನಾನು ಕಾರಣವಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Date:

Advertisements

ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಲು ನಾನು ಕಾರಣವಲ್ಲ. 5 ಲಕ್ಷ ಲಿಂಗಾಯತ ಮತದಾರರಿದ್ದಾರೆ. ಅವರು ನನ್ನ ಮಾತು ಕೇಳುತ್ತಾರಾ? ಮತದಾರರನ್ನು ಸೆಳೆಯುವಲ್ಲಿ ಸಚಿವೆ ಹೆಬ್ಬಾಳ್ಕರ್ ವಿಫಲರಾಗಿದ್ದಾರೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮ ನಾಯಕರ ಅತಿಯಾದ ವಿಶ್ವಾಸವೇ ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿ ತಲುಪದೇ ಇರಲು ಕಾರಣ” ಎಂದು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

“ನಾವು ಗೆಲ್ಲುವ‌ ನಿಟ್ಟಿನಲ್ಲಿ ಕೆಲಸ ಮಾಡಿದ್ದೇವೆ, ಸೋಲಿಸಲು ಅಲ್ಲ. ಬೆಳಗಾವಿ ಗ್ರಾಮೀಣ ‌ಕ್ಷೇತ್ರದಲ್ಲೇ ಮೃಣಾಲ್‌ಗೆ ಹಿನ್ನಡೆ ಆಗಿದೆ. ಲಿಂಗಾಯತ, ಮರಾಠ ಮತ ಸೆಳೆಯಲು ವಿಫಲವಾಗಿದ್ದರಿಂದ ಸೋಲಾಗಿದೆ” ಎಂದು ತಿಳಿಸಿದರು.

Advertisements

“ಅಥಣಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಕಡಿಮೆ‌ ಲೀಡ್ ಸಿಕ್ಕಿದೆ. ನಮ್ಮವರೇ ನಮಗೆ ಮೋಸ ಮಾಡಿದ್ದಾರೆ. ಅಥಣಿಯಲ್ಲಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ಬಂದವರಿಂದ ಚುನಾವಣೆಯಲ್ಲಿ ಮೋಸ ಆಗಿದೆ. ಮೊದಲೇ ಅವರು ಮೈಂಡ್ ಸೆಟ್ ಮಾಡಿಕೊಂಡಿದ್ದರು. ನಮ್ಮ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನಮ್ಮ ಪರವಾಗಿ ಇದ್ದರು” ಎಂದು ಪರೋಕ್ಷವಾಗಿ ಲಕ್ಷ್ಮಣ ಸವದಿ ವಿರುದ್ಧ ಅಸಮಾಧಾನ ಹೊರಹಾಕಿದರು.

“ಡೈರೆಕ್ಟರ್, ಪ್ರೊಡ್ಯೂಸರ್ ಫೇಲ್ ಆದರೆ ಈ ರೀತಿಯ ಫಲಿತಾಂಶ ನಿರೀಕ್ಷಿತ. ಚುನಾವಣೆಗೆ ಸಮಯ ಕಡಿಮೆ ಇರುತ್ತದೆ. ಆ ಸಮಯದಲ್ಲಿ ಅಲರ್ಟ್ ಇರಬೇಕು. ಇಲ್ಲವಾದರೆ ಚುನಾವಣೆ ಬಂದು ಹೋಗುತ್ತದೆ, ಆಗಲೇ ನಾವು ಕೆಲಸ ಮಾಡಬೇಕು. ನಮ್ಮ ನಾಯಕರು ಹಲವು ಕ್ಷೇತ್ರಗಳನ್ನು ನಿರ್ಲಕ್ಷಿಸಿದ್ದೂ ನಮ್ಮ ಹಿನ್ನಡೆಗೆ ಕಾರಣ. ಗೆಲ್ಲುವ ವಿಶ್ವಾಸದ ಕಾರಣಕ್ಕೆ ಇನ್ನೂ ಹಲವು ಕ್ಷೇತ್ರಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಚಾರ ಆಗಲಿಲ್ಲ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X