ಸ್ಪೀಕರ್​ ಒಪ್ಪಿದರೆ ಸದನದಲ್ಲೇ ಪೆನ್​ಡ್ರೈವ್ ಬಿಡುಗಡೆ: ಎಚ್​ ಡಿ ಕುಮಾರಸ್ವಾಮಿ

Date:

Advertisements

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ವರ್ಗಾವಣೆ ದಂಧೆ ನಡೆಸಿರುವ ಬಗ್ಗೆ ತನ್ನ ಬಳಿ ದಾಖಲೆ ಇದ್ದು, ಸ್ಪೀಕರ್​ ಒಪ್ಪಿದರೆ ಸದನದಲ್ಲೇ ಪೆನ್​ಡ್ರೈವ್‌ನಲ್ಲಿರುವ ಆಡಿಯೋ ಕೇಳಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಹೇಳಿದರು.

ವಿಧಾನಸಭೆ ಅಧಿವೇಶನದ ನಾಲ್ಕನೆ ದಿನವಾದ ಗುರುವಾರದ ಕಲಾಪದಲ್ಲಿ, ಮಾಜಿ ಮುಖ್ಯಮಂತ್ರಿ ಎಚ್​ ​ಡಿ ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿದರು, ಇದಕ್ಕೆ ಬಿಜೆಪಿ ಸದಸ್ಯರು ಬೆಂಬಲ ಸೂಚಿಸಿದರು. ಬಳಿಕ ವಿಧಾನಸಭೆಯಲ್ಲಿ ಎಚ್‌ ಡಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್​ ಸದಸ್ಯರ ನಡುವೆ ವಾಗ್ವಾದ ನಡೆಯಿತು.

ವಿಧಾನಸಭೆಯಲ್ಲಿ ಇಂಧನ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆದಿದೆ ಎಂದು ಆರೋಪಿಸುತ್ತಿರುವ ಎಚ್ ಡಿ ಕುಮಾರಸ್ವಾಮಿ ಮತ್ತು ಇಂಧನ ಸಚಿವ ಕೆ ಜೆ ಜಾರ್ಜ್ ಅವರ ನಡುವೆ ತೀವ್ರ ವಾಗ್ವಾದ ನಡೆಯಿತು.

Advertisements

ನನ್ನ ಬಳಿ ಪೆನ್​ಡ್ರೈವ್ ಇದೆ, ಅದರಲ್ಲಿ ಸಾಕ್ಷ್ಯವಿದೆ ಎಂದು ಹೇಳುತ್ತಿದ್ದೀರಿ. ನಿಮ್ಮ ಬಳಿ ಯಾವ ಸಾಕ್ಷ್ಯವಿದೆ, ಅದನ್ನು ಸ್ಪೀಕರ್​ಗೆ ನೀಡಿ, ಅಕ್ರಮ ನಡೆದಿದೆ ಎನ್ನುವುದು ನಿಜವಾದರೆ, ನಿಮ್ಮ ಬಳಿ ಸಾಕ್ಷಿ ಇದ್ದರೂ ಅದನ್ನು ಬಹಿರಂಗಪಡಿಸದೆ ಮುಚ್ಚಿಡುವುದು ಅಪರಾಧ ಅಲ್ಲವೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್‌ ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಪೆನ್​ಡ್ರೈವ್​ನಲ್ಲಿರುವ ಸಾಕ್ಷ್ಯ ವೀಕ್ಷಣೆಗೆ ಸದನದಲ್ಲಿ ವ್ಯವಸ್ಥೆ ಮಾಡಿ. ಸ್ಪೀಕರ್ ಒಪ್ಪಿಗೆ ಕೊಟ್ಟರೆ ಸದನದಲ್ಲೇ ಪೆನ್ ಡ್ರೈವ್ ಪ್ರದರ್ಶನ ಮಾಡುತ್ತೇನೆ ಎಂದು ತಿರುಗೇಟು ನೀಡಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿಯಿಂದ ಸುಪಾರಿ ಪಡೆದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಆರೋಪ: ಎಂ ಲಕ್ಷ್ಮಣ್‌ ವಾಗ್ದಾಳಿ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X