ನಾನು ರಾಜೀನಾಮೆ ಕೊಡಲು ಸಿದ್ಧ, ಅಮಿತ್‌ ಶಾ ಕೊಡುತ್ತಾರಾ: ಸಿದ್ದರಾಮಯ್ಯ ಸವಾಲು

Date:

“ದೇಶದ ಗೃಹ ಸಚಿವ ಅಮಿತ್‌ ಶಾ ಸುಳ್ಳು ಹೇಳುವುದಕ್ಕೂ ಒಂದು ಮಿತಿ ಬೇಡವೇ? ಸತ್ಯದ ತಲೆ ಮೇಲೆ ಒಡೆದಂತೆ ಸುಳ್ಳು ಹೇಳುತ್ತಾರೆ. ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿರುವುದು ಸುಳ್ಳಾದರೆ ನಾನು ರಾಜೀನಾಮೆ ಕೊಡಲು‌ ಸಿದ್ಧ, ಅದು ಸತ್ಯವಿದ್ದರೆ ಅಮಿತ್ ಶಾ ರಾಜೀನಾಮೆ ಕೊಡುತ್ತಾರಾ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.

- Advertisement -

ಮೈಸೂರಿನ ಸುತ್ತೂರು ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, “ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಅಲ್ಲಿಂದ ತಂಡವೂ ಬಂದು ಅಧ್ಯಯನ ಮಾಡಿ ವರದಿ ಸಲ್ಲಿಸಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ ಅದು ಬಹುಪಾಲು ಯಶಸ್ಸನ್ನೂ ಸಾಧಿಸಿದೆ. ಬೃಹತ್ ನೀರಾವರಿ ಯೋಜನೆಗಳಿಗೆ ಕೊಡುವ ಆದ್ಯತೆ ಮತ್ತು ಮಹತ್ವವನ್ನು ಸಣ್ಣ ನೀರಾವರಿ ಯೋಜನೆಗಳಿಗೂ ನೀಡಬೇಕೆನ್ನುವುದೇ...

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

“ಅಕ್ಟೋಬರ್‌ನಲ್ಲೇ ಮೂರು ಮನವಿ ಸಲ್ಲಿಸಿದ್ದೇವೆ. ಇದಾದ ಮೇಲೆ ಕೇಂದ್ರದ ಅಧಿಕಾರಿಗಳ ತಂಡ ಬಂದು,  ಪರಿಶೀಲನೆ ನಡೆಸಿ ವರದಿ ಕೊಟ್ಟಿದೆ. ನಾನು ಡಿಸೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮನವಿ ಕೊಟ್ಟಿದ್ದೆ. ಅಮಿತ್ ಶಾ ಅವರನ್ನೂ ಭೇಟಿಯಾಗಿದ್ದೆ. ಇದಾಗಿ ನಾಲ್ಕು ತಿಂಗಳಾದರೂ ಪರಿಹಾರ ಬಂದಿಲ್ಲ” ಎಂದು ಕಿಡಿಕಾರಿದರು.

“ನಾವ್ಯಾಕೆ ಸುಳ್ಳು ಹೇಳೋಣ? ನಾವು ಕೇಂದ್ರಕ್ಕೆ ಮನವಿ ಕೊಟ್ಟಿದ್ದು, ಭೇಟಿ ಆಗಿದ್ದೆಲ್ಲವೂ ಸತ್ಯವಲ್ಲವೇ? ಡಿಸೆಂಬರ್ 23ಕ್ಕೆ ಸಭೆ ಕರೆದಿದ್ದೇನೆ, ಅಂದು ತೀರ್ಮಾನ ಮಾಡುತ್ತೇನೆ ಎಂದಿದ್ರಲ್ಲಾ ಅಮಿತ್‌ ಶಾ ಅವರು ಮಾಡಿದ್ರಾ? ಅನುದಾನ ಕೊಟ್ಟಿದ್ದೀರಾ? ಅದನ್ನೆಲ್ಲ ಸಾಬೀತುಪಡಿಸಲು ಸಿದ್ಧವಿದ್ದೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರಗಾಲಕ್ಕೆ ಬರಲಿಲ್ಲ, ಪರಿಹಾರ ಕೊಡಲಿಲ್ಲ, ಓಡೋಡಿ ಬರುತ್ತಿದ್ದಾರೆ ಓಟಿಗಾಗಿ!

“ಈಗಾಗಲೇ ಎಲ್ಲ ದಾಖಲೆಗಳನ್ನು ಸುಪ್ರೀಂ ಕೋರ್ಟ್‌ಗೇ ಕೊಟ್ಟಿದ್ದೇವೆ. ದಾಖಲೆಗಳು ಇಲ್ಲದಿದ್ದರೆ ಕೋರ್ಟ್‌ಗೆ ಹೋಗಲು ಆಗುತ್ತಾ? ಎನ್.ಡಿ.ಆರ್.ಎಫ್. ಅಡಿ ಬರ ಪರಿಹಾರ ಹಣ ಕೊಡಲೇಬೇಕು. ಇದು ಕೇಂದ್ರ ಸರ್ಕಾರದ ಹಣ ಅಲ್ಲ; ನಮ್ಮ ರಾಜ್ಯದ್ದು. ಆ ಹಣವನ್ನು ಈವರೆಗೂ ಕೊಡದ ಬಿಜೆಪಿಯವರಿಗೆ ಮತದಾರರು ಮತ ಹಾಕಬಾರದು” ಎಂದು ಕರೆ ನೀಡಿದರು.

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ‌‌.ಲಕ್ಷ್ಮಣ, ಪಕ್ಷದ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಆರ್.ಮೂರ್ತಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಂಡವಾರ ಬಳಿ ಭೂಕಂಪ; ಸ್ಥಳೀಯರು ಆತಂಕಪಡುವ ಅಗತ್ಯವಿಲ್ಲ: KSNDMC ಅಧಿಕಾರಿಗಳು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬೃಹತ್ ಸುಧಾರಣೆ: ಮೂರು ಉನ್ನತ ಮಟ್ಟದ ತಜ್ಞರ ಸಮಿತಿ ರಚಿಸಿದ ಸರ್ಕಾರ!

ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಆಧುನಿಕಗೊಳಿಸಲು, ಸಾರ್ವಜನಿಕರಿಗೆ ನೀಡಲಾಗುವ ಸೇವೆಗಳನ್ನು ಇನ್ನಷ್ಟು ಸಶಕ್ತಗೊಳಿಸಲು...