ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ: ಡಿಸಿಎಂ ಡಿ ಕೆ ಶಿವಕುಮಾರ್ ಮತ್ತೆ ಉಚ್ಚಾರ

Date:

ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭ್ಯರ್ಥಿ ಯಾರಗಲಿದ್ದಾರೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ನೆಲಮಂಗಲದ ವೀರಭದ್ರೇಶ್ವರ ದೇವಾಲಯದ ಬಳಿ ಡಿಸಿಎಂ ಡಿ ಕೆ ಶಿವಕುಮಾರ್‌ ಉತ್ತರಿಸಿ, “ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ” ಎಂದು ಹೇಳಿದರು.

ಈ ಹಿಂದೆ ಚನ್ನಪಟ್ಟಣದಲ್ಲಿ ಸ್ಥಳೀಯ ಶಾಸಕರು ಧ್ವಜಾರೋಹಣ ನೆರವೇರಿಸಿಲ್ಲ ಎನ್ನುವ ಬಗ್ಗೆ ಕೇಳಿದಾಗ, “ನಾನು ಕಳೆದ ಐದು ವರ್ಷಗಳಿಂದ ರಾಮನಗರದಲ್ಲಿ ಧ್ವಜಾರೋಹಣ ಮಾಡಿದ್ದೇನೆ. ಚನ್ನಪಟ್ಟಣದ ಬಗ್ಗೆ ಅಧಿಕಾರಿಗಳ ಬಳಿ ಕೇಳಿದಾಗ ಆರು ವರ್ಷಗಳಿಂದ ಯಾರು ಬಂದು ಧ್ವಜಾರೋಹಣ ನಡೆಸಿಲ್ಲ ಎಂದರು. ಅವರಿಗೆ ದೇಶದ ಮೇಲೆ ವಿಶ್ವಾಸವಿಲ್ಲ ಎಂದೆನಿಸುತ್ತದೆ. ಅವರು ಏನಾದರು ಮಾಡಿಕೊಳ್ಳಲಿ, ನಾನು ನನ್ನ ಕರ್ತವ್ಯ ಮಾಡಿದ್ದೇನೆ” ಎಂದು ಪರೋಕ್ಷವಾಗಿ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.

ಪಂಚ ಗ್ಯಾರಂಟಿಗಳನ್ನು ನಿಲ್ಲಿಸುವ ಬಗ್ಗೆ ಒಂದಷ್ಟು ಸಚಿವರು ಹೇಳಿಕೆ ನೀಡುತ್ತಿದ್ದಾರೆ ಎಂದು ಕೇಳಿದಾಗ, “ನಿಲ್ಲಿಸುವ ಬಗ್ಗೆ ಯಾವ ಸಚಿವರು ಮಾತನಾಡುತ್ತಿಲ್ಲ. ಆದರೆ ಅನುಕೂಲ ಇರುವವರು ಬೇಡ ಎಂದು ಹೇಳುತ್ತಿದ್ದಾರೆ. ಅವರಿಗೂ ಸೌಲಭ್ಯ ನೀಡಲಾಗುತ್ತಿದೆ ಎನ್ನುವ ಬಗ್ಗೆ ಅಭಿಪ್ರಾಯ ಬರುತ್ತಿದೆ. ಇದರಬಗ್ಗೆ ಆನಂತರ ಯೋಚನೆ ಮಾಡುತ್ತೇವೆ. ಗ್ಯಾರಂಟಿಗಳಲ್ಲಿ ಯಾವುದೇ ಬದಲಾವಣೆಯಿಲ್ಲ” ಎಂದು ಸ್ಪಷ್ಟ ಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪ್ರಯತ್ನಕ್ಕಿಂತ ಪ್ರಾರ್ಥನೆಗೆ ಕಾರ್ಯಗಳು ಬೇಗ ಸಿದ್ದಿಸುತ್ತವೆ. ಈ ವರ್ಷ ದೇಶ, ರಾಜ್ಯಕ್ಕೆ ಉತ್ತಮ, ಮಳೆ ಬೆಳೆಯಾಗಲಿ, ಶಾಂತಿ ನೆಲೆಸಲಿ ಎಂದು ಪ್ರಾರ್ಥನೆ ಮಾಡುತ್ತೇನೆ” ಎಂದರು.

ಈ ಹಿಂದೆಯೂ ಕೂಡ ಡಿ ಕೆ ಶಿವಕುಮಾರ್‌ ಅವರು ಅಗತ್ಯ ಬಿದ್ದರೆ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವೆ ಎಂದಿದ್ದನ್ನು ಇಲ್ಲಿ ಗಮನಿಸಬಹುದು. ಡಿ ಕೆ ಸುರೇಶ್‌ ಕೂಡ ಈ ಬಾರಿ ಚನ್ನಪಟ್ಟಣಕ್ಕೆ ಅಚ್ಚರಿ ಅಭ್ಯರ್ಥಿ ಹೆಸರು ಘೋಷಣೆಯಾಗಲಿದೆ ಎಂದಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಲವರ ಪಾಲಿಗೆ ಕರಾಳ ದಿನವಾದ ಗಣೇಶ ಚತುರ್ಥಿ; ಜೂನ್‌, ಜುಲೈ, ಆಗಸ್ಟ್‌ನಲ್ಲೇ ಹೆಚ್ಚು ರಸ್ತೆ ಅಪಘಾತ

ರಾಜ್ಯದಲ್ಲಿ ರಸ್ತೆ ಅಪಘಾತಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇದರಿಂದ ಅಪಘಾತಗಳಲ್ಲಿ ಸಾವನ್ನಪ್ಪುವವರ...

ಜೈವಿಕ ತಂತ್ರಜ್ಞಾನ ನೀತಿ 2024-2029 ಅನಾವರಣ; 1,000ಕ್ಕೂ ಹೆಚ್ಚು ನವೋದ್ಯಮ ಸ್ಥಾಪನೆಯ ಗುರಿ

ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ...

ಬೆಂಗಳೂರು, ಮಂಗಳೂರು, ಮೈಸೂರಿನಲ್ಲಿ ಗಾಳಿ ಕಲುಷಿತ : ಎಚ್ಚರಿಕೆ ನೀಡಿದ ಗ್ರೀನ್ ಪೀಸ್ ವರದಿ

ಕರ್ನಾಟಕ ರಾಜ್ಯದ ಮೂರು ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರು ಹಾಗು ಮೈಸೂರಿನ...

ಹರಿಯಾಣ ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ಗೆ ಸೇರಿದ ದಿನವೇ ವಿನೇಶ್ ಫೋಗಟ್‌ಗೆ ಟಿಕೆಟ್

ಹರಿಯಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಶುಕ್ರವಾರ ರಾತ್ರಿ ತನ್ನ...