ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವದ ವ್ಯವಸ್ಥೆ ಇದೆ. ಬಿಜೆಪಿ ಅಧ್ಯಕ್ಷ ಯಾರು ಎಂಬುದಕ್ಕೆ ಒಂದು ವಾರದ ಬಳಿಕ ಉತ್ತರ ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ
ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವ್ಯವಸ್ಥಿತವಾಗಿ ಸಂಘಟನೆ, ಚುನಾವಣೆ ನಡೆಯುವುದು ಬಿಜೆಪಿಯಲ್ಲಿ ಮಾತ್ರ. ಮಂಡಲ ಮಟ್ಟದಿಂದ ರಾಜ್ಯಮಟ್ಟದವರೆಗೂ ಚುನಾವಣೆ ನಡೆಯುತ್ತದೆ. ರಾಜ್ಯ, ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ವ್ಯವಸ್ಥಿತವಾಗಿ ನಡೆಯುತ್ತಿದೆ. ಪಕ್ಷದ ಕಾರ್ಯಕರ್ತರು ಹೋರಾಟ ಮಾಡಿಕೊಂಡು ಬಂದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಭ್ರಷ್ಟ ಸರ್ಕಾರದ ವಿರುದ್ಧ ನಿರಂತರ ಹೋರಾಟ ಮಾಡುತ್ತಿದ್ದೇವೆ. ನಾನು ಅಧ್ಯಕ್ಷನಾಗಿ ಕೆಲಸ ಮಾಡಿದ ರೀತಿ ಕಾರ್ಯಕರ್ತರಿಗೆ ಗೊತ್ತಿದೆ. ನಾನು ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷನಾಗುತ್ತೇನೆಂಬ ಪೂರ್ಣ ವಿಶ್ವಾಸವಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಜಿಲ್ಲಾಧ್ಯಕ್ಷ ಚುನಾವಣೆಗೂ ಪೈಪೋಟಿ ಇತ್ತು. ರಾಜ್ಯಾಧ್ಯಕ್ಷ ಸ್ಥಾನಕ್ಕೂ ಅದೇ ರೀತಿ ಪೈಪೋಟಿ ಇದೆ. ಎಲ್ಲವನ್ನು ಕೇಂದ್ರದ ವರಿಷ್ಠರು ಗಮನಿಸುತ್ತಿದ್ದಾರೆ. ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ವಿಶ್ವಾಸವಿದೆ ಎಂದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ: ಸಬಲಾ ಸಂಸ್ಥೆ
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯಿಂದ ಪಕ್ಷಕ್ಕೆ ಹಾನಿಯಾಗಿದೆ ಎಂಬ ಸದಾನಂದಗೌಡ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಈಗಾಗಲೇ ಏನೇನು ಹಾನಿ ಆಗಬೇಕು ಎಲ್ಲವೂ ಆಗಿ ಹೋಗಿದೆ. ಒಂದು ವಾರದಲ್ಲಿ ಯಾರು ಅಧ್ಯಕ್ಷರಾಗುತ್ತಾರೆ ಎಂಬ ಉತ್ತರ ಸಿಗುತ್ತದೆ. ಅದಾದ ನಂತರ ಎಲ್ಲವೂ ಸರಿಯಾಗಲಿದೆ ಎಂದು ಹೇಳಿದರು.
ಕಳೆದ ವರ್ಷದಿಂದ ನಾನು ಯಾರು ಏನೇ ಹೇಳಿದರೂ ಯಾರ ವಿರುದ್ಧವೂ ಬಹಿರಂಗ ಹೇಳಿಕೆ ಕೊಟ್ಟಿಲ್ಲ. ಪಕ್ಷದ ವಿರುದ್ಧವೂ ಹೇಳಿಕೆ ಕೊಟ್ಟಿಲ್ಲ. ರಾಜ್ಯದ ಅಧ್ಯಕ್ಷನಾಗಿ ಕರ್ತವ್ಯದ ಅರಿವು ನನಗಿದೆ. ಬಹಳ ದೊಡ್ಡ ಜವಾಬ್ದಾರಿಯನ್ನು ಕಳೆದೊಂದು ವರ್ಷದಿಂದ ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೆನೆ. 8-10 ದಿನಗಳಲ್ಲಿ ರಾಜ್ಯದ ಅಧ್ಯಕ್ಷ ಯಾರೆಂಬುದಕ್ಕೆ ಉತ್ತರ ಸಿಗಲಿದೆ. ಬಳಿಕ ಎಲ್ಲ ಸಮಸ್ಯೆಗಳು ಬಗೆ ಹರಿಯಲಿವೆ ಎಂದರು.

ಲಿಂಗಾಯತರ ಮೇಲೆ ಲಿಂಗಾಯತ ವಕ್ಕಲಿಗರ ಮೇಲೆ ವಕ್ಕಲಿಗ ಹಿಂದುಳಿದವರ ಮೇಲೆ ಹಿಂದುಳಿದವರನ್ನು ದಲಿತರ ಮೇಲೆ ದಲಿತರನ್ನು ಎತ್ತಿ ಕಟ್ಟಿ,, ತಾವು ಮಾತ್ರ ಕುಂಭಮೇಳದಲ್ಲಿ ಡುಮ್ಕಿ ಹೊಡೆದು ಹಳೆ ಪಾಪಗಳನ್ನು ಗಂಗಾ ಮಾತೆಯ ಒಡಲಲ್ಲಿ ಬಿಟ್ಟು ಮುಂದಿನ ದಿನಗಳಲ್ಲಿ ಅಧಿಕಾರಕ್ಕಾಗಿ ಇನ್ನಷ್ಟು ಹೊಸಾ ಹೊಸಾ ಪಾಪ ಮಾಡಲು ಆಶೀರ್ವಾದ ಪಡೆದು ಬಂದವ್ನೆ,,ಬುದ್ಧಿವಂತರಾಗರೋ ಶೂದ್ರ ಶಿಖಾಮಣಿಗಳಾ