ಗೊಂದಲಗಳಿಗೆ ಒಂದು ವಾರದಲ್ಲಿ ಉತ್ತರ, ಪುನಃ ನಾನೇ ರಾಜ್ಯಾಧ್ಯಕ್ಷ: ಬಿ ವೈ ವಿಜಯೇಂದ್ರ

Date:

ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವದ ವ್ಯವಸ್ಥೆ ಇದೆ. ಬಿಜೆಪಿ ಅಧ್ಯಕ್ಷ ಯಾರು ಎಂಬುದಕ್ಕೆ ಒಂದು ವಾರದ ಬಳಿಕ ಉತ್ತರ ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ

- Advertisement -

ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವ್ಯವಸ್ಥಿತವಾಗಿ ಸಂಘಟನೆ, ಚುನಾವಣೆ ನಡೆಯುವುದು ಬಿಜೆಪಿಯಲ್ಲಿ ಮಾತ್ರ. ಮಂಡಲ ಮಟ್ಟದಿಂದ ರಾಜ್ಯಮಟ್ಟದವರೆಗೂ ಚುನಾವಣೆ ನಡೆಯುತ್ತದೆ. ರಾಜ್ಯ, ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ವ್ಯವಸ್ಥಿತವಾಗಿ ನಡೆಯುತ್ತಿದೆ. ಪಕ್ಷದ ಕಾರ್ಯಕರ್ತರು ಹೋರಾಟ ಮಾಡಿಕೊಂಡು ಬಂದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಭ್ರಷ್ಟ​ ಸರ್ಕಾರದ ವಿರುದ್ಧ ನಿರಂತರ ಹೋರಾಟ ಮಾಡುತ್ತಿದ್ದೇವೆ. ನಾನು ಅಧ್ಯಕ್ಷನಾಗಿ ಕೆಲಸ ಮಾಡಿದ ರೀತಿ ಕಾರ್ಯಕರ್ತರಿಗೆ ಗೊತ್ತಿದೆ. ನಾನು ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷನಾಗುತ್ತೇನೆಂಬ ಪೂರ್ಣ ವಿಶ್ವಾಸವಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

OBC ಮೀಸಲಾತಿಗೆ ಮತಾಂತರದ ಬೇಲಿ: ಸುಪ್ರೀಂ ಹೊಸ ಆದೇಶದಲ್ಲಿ...

ಧರ್ಮ ಬದಲಾದರೆ ಸಾಮಾಜಿಕ ಹಿಂದುಳಿದಿರುವಿಕೆಯೂ ಅಳಿಸಿಹೋಗುತ್ತದೆಯೇ? ಮಂಡಲ್ ಆಯೋಗದ 11 ಮಾನದಂಡಗಳಲ್ಲಿ ಧರ್ಮಕ್ಕೆ ಸ್ಥಾನವಿಲ್ಲದಿದ್ದರೂ, ಮತಾಂತರವನ್ನು ಮೀಸಲಾತಿಯ ಅರ್ಹತೆಗೆ ಜೋಡಿಸಿರುವುದೇಕೆ? ಇಂದಿರಾ ಸಾಹ್ನಿ ತೀರ್ಪಿಗೆ ವಿರೋಧಾಭಾಸವಾಗಿದೆ ಸುಪ್ರೀಂ ಕೋರ್ಟ್‌ನ ಹೊಸ ತೀಪು! 1992ರಲ್ಲಿ ಸುಪ್ರೀಂ...

ಜಿಲ್ಲಾಧ್ಯಕ್ಷ ಚುನಾವಣೆಗೂ ಪೈಪೋಟಿ ಇತ್ತು. ರಾಜ್ಯಾಧ್ಯಕ್ಷ ಸ್ಥಾನಕ್ಕೂ ಅದೇ ರೀತಿ ಪೈಪೋಟಿ ಇದೆ. ಎಲ್ಲವನ್ನು ಕೇಂದ್ರದ ವರಿಷ್ಠರು ಗಮನಿಸುತ್ತಿದ್ದಾರೆ. ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ವಿಶ್ವಾಸವಿದೆ ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ: ಸಬಲಾ ಸಂಸ್ಥೆ

ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಹೇಳಿಕೆಯಿಂದ ಪಕ್ಷಕ್ಕೆ ಹಾನಿಯಾಗಿದೆ ಎಂಬ ಸದಾನಂದಗೌಡ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಈಗಾಗಲೇ ಏನೇನು ಹಾನಿ ಆಗಬೇಕು ಎಲ್ಲವೂ ಆಗಿ ಹೋಗಿದೆ. ಒಂದು ವಾರದಲ್ಲಿ ಯಾರು ಅಧ್ಯಕ್ಷರಾಗುತ್ತಾರೆ ಎಂಬ ಉತ್ತರ ಸಿಗುತ್ತದೆ. ಅದಾದ ನಂತರ ಎಲ್ಲವೂ ಸರಿಯಾಗಲಿದೆ ಎಂದು ಹೇಳಿದರು.

ಕಳೆದ ವರ್ಷದಿಂದ ನಾನು ಯಾರು ಏನೇ ಹೇಳಿದರೂ ಯಾರ ವಿರುದ್ಧವೂ ಬಹಿರಂಗ ಹೇಳಿಕೆ ಕೊಟ್ಟಿಲ್ಲ. ಪಕ್ಷದ ವಿರುದ್ಧವೂ ಹೇಳಿಕೆ ಕೊಟ್ಟಿಲ್ಲ. ರಾಜ್ಯದ ಅಧ್ಯಕ್ಷನಾಗಿ ಕರ್ತವ್ಯದ ಅರಿವು ನನಗಿದೆ. ಬಹಳ ದೊಡ್ಡ ಜವಾಬ್ದಾರಿಯನ್ನು ಕಳೆದೊಂದು ವರ್ಷದಿಂದ ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೆನೆ. 8-10 ದಿನಗಳಲ್ಲಿ ರಾಜ್ಯದ ಅಧ್ಯಕ್ಷ ಯಾರೆಂಬುದಕ್ಕೆ ಉತ್ತರ ಸಿಗಲಿದೆ. ಬಳಿಕ ಎಲ್ಲ ಸಮಸ್ಯೆಗಳು ಬಗೆ ಹರಿಯಲಿವೆ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಪರಿಷತ್ ಚುನಾವಣೆ: NDAಯಲ್ಲಿ ಬಂಡಾಯದ ಬಿಸಿ; ಸಿಎಂ ಚೌಧರಿ ನಾಯಕತ್ವಕ್ಕೆ ಅಗ್ನಿಪರೀಕ್ಷೆ!

ಬಿಹಾರ ವಿಧಾನ ಪರಿಷತ್ತಿನ ನಾಲ್ಕು ಪದವೀಧರ ಮತ್ತು ನಾಲ್ಕು ಶಿಕ್ಷಕರ ಕ್ಷೇತ್ರಗಳು...

ಕಲಬುರಗಿ | ಕ್ಷೇತ್ರಗಳ ಮರುವಿಂಗಡಣೆ ಇಲ್ಲದೆ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಮಲ್ಲಿಕಾರ್ಜುನ ಖರ್ಗೆ

ಕ್ಷೇತ್ರಗಳ ಮರುವಿಂಗಡಣೆ ಮಾಡದೆಯೇ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸಬೇಕು. ಈ ವಿಚಾರದಲ್ಲಿ...

ಶಿವಮೊಗ್ಗ ಜಂಬೂ ಸವಾರಿ ವೇಳೆ ಭಾರೀ ಅನಾಹುತ: ಅಂಬಾರಿ ಹೊತ್ತು ಅಡ್ಡಾದಿಡ್ಡಿ ಓಡಿದ ಆನೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಅದ್ಧೂರಿ ಚಾಲನೆ ಸಿಕ್ಕು ಅಲ್ಲಿನ...