‘ನಾನು ಕ್ಷಮೆ ಕೇಳುತ್ತೇನೆ’: ಒತ್ತೆಯಾಳುಗಳ ಸಾವಿಗೆ ಇಸ್ರೇಲ್ ಪ್ರಧಾನಿ ಪ್ರತಿಕ್ರಿಯೆ

Date:

ಪ್ಯಾಲೆಸ್ತೀನ್‌ನ ಗಾಜಾಪಟ್ಟಿಯ ಸುರಂಗದಲ್ಲಿ ಆರು ಇಸ್ರೇಲಿ ಒತ್ತೆಯಾಳುಗಳ ಶವಗಳು ಪತ್ತೆಯಾಗಿದ್ದು, ಅವರ ಜೀವ ಉಳಿಸಲು ಸಾಧ್ಯವಾಗದ ಕಾರಣಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಪ್ರಜೆಗಳಲ್ಲಿ ಕ್ಷಮೆ ಕೋರಿದ್ದಾರೆ.

- Advertisement -

ದಕ್ಷಿಣ ಗಾಜಾದ ರಾಫಾ ಪ್ರದೇಶದಲ್ಲಿರುವ ಭೂಗತ ಸುರಂಗದಲ್ಲಿ ಆರು ಒತ್ತೆಯಾಳುಗಳ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇಸ್ರೇಲ್ ಮಿಲಿಟರಿ ಶನಿವಾರ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮೃತದೇಹಗಳು ಗಾಜಾ ಗಡಿಯ ಸಮೀಪದಲ್ಲಿರುವ ಕಿಬ್ಬುಟ್ಜ್ ಪ್ರದೇಶದ ನಿವಾಸಿಗಳದ್ದು ಎಂದು ಗುರುತಿಸಲಾಗಿದೆ. ಅವರನ್ನು ಸಂಗೀತ ಉತ್ಸವ ಕಾರ್ಯಕ್ರಮದ ವೇಳೆ ಅಪಹರಿಸಲಾಗಿತ್ತು ಎಂದು ವರದಿಯಾಗಿದೆ.

ಮೃತದೇಹಗಳು ಪತ್ತೆಯಾದ ಬಗ್ಗೆ ಪ್ರತಿಕಾಗೋಷ್ಟಿಯಲ್ಲಿ ಮಾತನಾಡಿರುವ ಪ್ರಧಾನಿ ನೆತನ್ಯಾಹು, “ಅವರನ್ನು ಜೀವಂತವಾಗಿ ಮರಳಿ ತರದಿದ್ದಕ್ಕಾಗಿ ನಾನು ನಿಮ್ಮ ಕ್ಷಮೆಯನ್ನು ಕೇಳುತ್ತೇನೆ” ಎಂದು ಇಸ್ರೇಲಿ ಜನರಿಗೆ ತಿಳಿಸಿದ್ದಾರೆ. “ನಾವು ಅವರನ್ನು ರಕ್ಷಿಸಲು ಹತ್ತಿರದಲ್ಲಿದ್ದೆವು. ಆದರೆ, ಅವರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಲು ಸಾಧ್ಯವಾಗಲಿಲ್ಲ. ಅವರ ಸಾವಿಗೆ ಹಮಾಸ್ ಭಾರೀ ಬೆಲೆ ತೆರಬೇಕಾಗುತ್ತದೆ” ಎಂದು ನೆತನ್ಯಾಹು ಹೇಳಿದ್ದಾರೆ.

ಇಸ್ರೇಲ್‌ ಸೇನಾ ವಕ್ತಾರ ಡೇನಿಯಲ್ ಹಗರಿ, “ಎಲ್ಲ ಆರು ಮಂದಿಯನ್ನು ಅಕ್ಟೋಬರ್ 7ರ ಬೆಳಿಗ್ಗೆ ಜೀವಂತವಾಗಿ ಅಪಹರಿಸಲಾಗಿತ್ತು. ನಾವು ಅವರಿದ್ದ ಸ್ಥಳವನ್ನು ತಲುಪುವ ಸ್ವಲ್ಪ ಸಮಯದ ಮೊದಲು ಅವರನ್ನು ಹಮಾಸ್ ಬರ್ಬರವಾಗಿ ಹತ್ಯೆಗೈದಿದೆ” ಎಂದು ಹೇಳಿದ್ದಾರೆ.

ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ರಾಜಕೀಯ ಲಾಭಕ್ಕಾಗಿ ಯುದ್ಧವನ್ನು ವಿಸ್ತರಿಸುತ್ತಿದ್ದಾರೆ ಎಂದು ಇಸ್ರೇಲ್‌ನ ವಿಮರ್ಶಕರು ಆರೋಪಿಸಿದ್ದಾರೆ. ಯುದ್ಧವನ್ನು ಅಂತ್ಯಗೊಳಿಸುವಂತೆ ಸಾವಿರಾರು ಇಸ್ರೇಲಿಗರು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಕೂಡ ‘ಇದು ಯುದ್ಧ ಕೊನೆಗೊಳ್ಳುವ ಸಮಯ’ ಎಂದು ಹೇಳಿದ್ದಾರೆ. ಪ್ಯಾಲೆಸ್ತೀನ್ ಮತ್ತು ಇಸ್ರೇಲ್‌ ನಡುವೆ ಕದನ ವಿರಾಮ ಘೋಷಿಸಲು ಮಧ್ಯಸ್ಥಿಕೆ ವಹಿಸಲು ಅಮೆರಿಕಾ ಪ್ರಯತ್ನಿಸುತ್ತಿದೆ.

ಕಳೆದ 11 ತಿಂಗಳಿನಿಂದ ಪ್ಯಾಲೆಸ್ತೀನ್ ಮತ್ತು ಇಸ್ರೇಲ್‌ ನಡುವೆ ಯುದ್ಧ ನಡೆಯುತ್ತಿದ್ದು, 40,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಕೊಂದಿದೆ ಎಂದು ವರದಿಯಾಗಿದೆ. ಮಾತ್ರವಲ್ಲದೆ, ಗಾಜಾ ಪಟ್ಟಿಯ ಮೇಲೆ ನಿರಂತರ ದಾಳಿಗಳು ನಡೆಯುತ್ತಿದ್ದು, ಲಕ್ಷಾಂತರ ಪ್ಯಾಲೆಸ್ತೀನಿಯರು ನಿರಾಶ್ರಿತರಾಗಿದ್ದಾರೆ. ತಮ್ಮ ಬದುಕು ಮತ್ತು ಜೀವ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...