ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ, ಜನರ ಕೆಲಸ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ

Date:

“ನಾನು ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಸಮಾಜದಲ್ಲಿ ಇಂದಿಗೂ ಅಸಮಾನತೆ ಜೀವಂತವಾಗಿದೆ. ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ನಾನು ಹೋರಾಟ ಮುಂದುವರೆಸುತ್ತೇನೆ. ಜನರ ಕೆಲಸ ಮಾಡುತ್ತಲೇ ಇರುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ರಾಜ್ಯದಲ್ಲಿ ಸುದೀರ್ಘ ಕಾಲ ಮುಖ್ಯಮಂತ್ರಿಯಾಗಿದ್ದವರು ಎಂಬ ಹೆಗ್ಗಳಿಕೆ ಹೊಂದಿದ್ದ ದೇವರಾಜ​ ಅರಸು ಅವರ​ ದಾಖಲೆಯನ್ನು ಜನವರಿ 6ರಂದು ಸಿದ್ದರಾಮಯ್ಯ ಸರಿಗಟ್ಟಿದ್ದಾರೆ. ಈ ಬಗ್ಗೆ ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಿಎಂ, “ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ದೇವರಾಜ​ ಅರಸು ದಾಖಲೆ ಸರಿಗಟ್ಟಿದ ಸಿಎಂ ಸಿದ್ದರಾಮಯ್ಯ

“ದಾಖಲೆಗಳನ್ನು ಮುರಿದಿರುವುದು ಕಾಕತಾಳೀಯವಾಗಿ ನಡೆದಿದೆ. ನನಗೆ ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ ಮಾಡಿದ್ದಾರೆ ಎಂಬುದು ತಿಳಿದಿರಲಿಲ್ಲ. ದೇವರಾಜ ಅರಸು ಅವರ ದಾಖಲೆ ಮುರಿಯಲು ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ” ಎಂದು ತಿಳಿಸಿದರು.

“ದೇವರಾಜ ಅರಸು ಹಾಗೂ ನಾನು ಇಬ್ಬರೂ ಮೈಸೂರಿನವರೇ ಆಗಿದ್ದೇವೆ. ಇಬ್ಬರೂ ದೀರ್ಘಾವಧಿಯ ಮುಖ್ಯಮಂತ್ರಿಗಳಾಗಿದ್ದು ಕಾಲಘಟ್ಟ ಬೇರೆ ಬೇರೆ. ಅವರು 1972ರಿಂದ 80ವರೆಗೆ ಮುಖ್ಯಮಂತ್ರಿಯಾಗಿದ್ದರು. ನಾನು ಎರಡು ಅವಧಿಗೆ ಆಗಿದ್ದೇನೆ” ಎಂದರು.

“ರಾಜಕಾರಣ ಎಂದರೆ ಬಡವರು, ದಲಿತರು, ಹಿಂದುಳಿದವರ ಕೆಲಸ ಮಾಡುವುದು. ಹೆಚ್ಚೆಂದರೆ ಶಾಸಕನಾಗಬೇಕೆಂದು ಅಂದುಕೊಂಡಿದ್ದೆ. ಶಾಸಕನಾದೆ, ಮಂತ್ರಿ, ಉಪಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಯೂ ಆದೆ. ಅವಕಾಶಗಳು ಸಿಕ್ಕಿದ್ದರಿಂದ ಇವೆಲ್ಲ ಆಗಲು ಸಾಧ್ಯವಾಯಿತು” ಎಂದು ಹೇಳಿದರು.

ಇದೇ ಅವಧಿಯಲ್ಲಿ ಸಂಪೂರ್ಣ ಐದು ವರ್ಷ ತಾವೇ ಮುಖ್ಯಮಂತ್ರಿಯಾಗಿರುವ ಬಗ್ಗೆ ಮಾತನಾಡಿ, “ಆ ಕುರಿತು ಪಕ್ಷದ ವರಿಷ್ಠರು ತೀರ್ಮಾನಿಸಬೇಕು. ಆದರೆ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ” ಎಂದರು. ಹಾಗೆಯೇ ಸಂಪುಟ ಪುನರ್ ರಚನೆಯ ಬಗ್ಗೆ ದೆಹಲಿಯಿಂದ ಕರೆ ಬಂದಾಗ ಮಾತನಾಡುವುದಾಗಿ ಸಿಎಂ ತಿಳಿಸಿದರು.

ಇದನ್ನು ಓದಿದ್ದೀರಾ? ದೀರ್ಘಾವಧಿ ಸಿಎಂ ಆದ ಸಂಭ್ರಮ: ಸಿದ್ದರಾಮಯ್ಯ ಅಭಿಮಾನಿ ಬಳಗದಿಂದ ಜ.6ರಂದು ನಾಟಿ ಕೋಳಿ ಔತಣಕೂಟ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀರ್ಘಾವಧಿ ಸಿಎಂ ಆಗಿರುವುದನ್ನು ಸಂಭ್ರಮಿಸುತ್ತಿರುವ ಸಿದ್ದರಾಮಯ್ಯ ಅಭಿಮಾನಿ ಬಳಗವು ಜನವರಿ 6ರಂದು ನಾಟಿ ಕೋಳಿ ಔತಣಕೂಟವನ್ನು ಏರ್ಪಡಿಸಿದೆ. ನಾಟಿ ಕೋಳಿ ಪಲಾವ್ ಹಂಚಿದ್ದಾರೆ. ಈ ಬಗ್ಗೆಯೂ ಸಿಎಂ ಉತ್ತರಿಸಿದ್ದು, “ನನಗೆ ಈ ಬಗ್ಗೆ ತಿಳಿದಿಲ್ಲ. ಸಾಮಾನ್ಯವಾಗಿ ಹಳ್ಳಿಗಳಲ್ಲಿ ನೆಂಟರು ಬಂದಾಗ ಮಾತ್ರ ನಾಟಿ ಕೋಳಿ ಅಡುಗೆ ಮಾಡುತ್ತಾರೆ. ನಾನೂ ಹಳ್ಳಿಯವನಾಗಿರುವುದರಿಂದ ಸಹಜವಾಗಿ ನಾಟಿ ಕೋಳಿ, ರಾಗಿ ಮುದ್ದೆ ತಿನ್ನುತ್ತಿದ್ದೆ. ಹಳ್ಳಿಯವರ ಊಟದ ಕ್ರಮ ಇದಾಗಿದ್ದು, ನಾನು ಮುಖ್ಯಮಂತ್ರಿಯಾಗಿರುವುದರಿಂದ ಸ್ವಲ್ಪ ಪ್ರಚಾರ ಸಿಗುತ್ತಿದೆ” ಎಂದರು.

ಈ ಬಾರಿಯ ಬಜೆಟ್‌ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಬಜೆಟ್ ಆಗುವವರೆಗೂ ಕಾದು ನೋಡಿ ಎಂದರು. ಈ ವೇಳೆಗೆ ಬಳ್ಳಾರಿ ಘಟನೆ ಬಗ್ಗೆ ಗೃಹ ಸಚಿವರೊಂದಿಗೆ ಮಾತನಾಡುತ್ತೇನೆ. ತನಿಖೆ ನಡೆಯುತ್ತಿದ್ದು, ಕೆಲವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...