ನನ್ನ ರಕ್ಷಣೆಗೆ, ಮನಸ್ಸಿನ ನೆಮ್ಮದಿಗೆ ಹೋಮ ಮಾಡಿಸುವೆ: ಡಿಸಿಎಂ ಡಿ ಕೆ ಶಿವಕುಮಾರ್

Date:

ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿಗೆ, ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

- Advertisement -

ವೈಕುಂಠ ಏಕಾದಶಿಯ ಪ್ರಯುಕ್ತ ಮಲ್ಲೇಶ್ವರದ ವೆಂಕಟೇಶ್ವರ ದೇಗುಲದಲ್ಲಿ ದೇವರ ದರ್ಶನದ ಬಳಿಕ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿ, “ದೇವರ ಮೇಲೆ ನಂಬಿಕೆಯಿಟ್ಟಿರುವ ವ್ಯಕ್ತಿ ನಾನು. ನನಗೆ ಧರ್ಮ, ದೇವರು, ನಮ್ಮ ಆಚರಣೆಗಳ ಮೇಲೆ ನಂಬಿಕೆಯಿದೆ. ಇದರಲ್ಲಿ ಯಾವುದೇ ವಿಶೇಷವಿಲ್ಲ. ನಾನು ಪ್ರತಿದಿನ ದೇವರಿಗೆ ನಮಸ್ಕಾರ ಮಾಡದೇ ಮನೆಯಿಂದ ಹೊರಗೆ ಬರುವುದಿಲ್ಲ. ನಾನು ಯಾವ ಶಕ್ತಿಯನ್ನು ನಂಬುತ್ತೇನೆಯೊ ಅದರ ಮೇಲೆ ಭಕ್ತಿ, ಪ್ರೀತಿ ಇದ್ದೇ ಇರುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶತ್ರುಗಳ ನಾಶಕ್ಕೆ ಶಿವಕುಮಾರ್ ಹೋಮ ಮಾಡಿಸಿದ್ದಾರೆ ಎನ್ನುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಪ್ರತಿ ದಿನವೂ ನನಗೆ ಒಳ್ಳೆಯದಾಗಲಿ ಎಂದು ಪೂಜೆ ಮಾಡುತ್ತಿರುತ್ತೇನೆ. ನನಗೆ ಯಾರ್ಯಾರು ತೊಂದರೆ ಕೊಡುತ್ತಾರೆಯೋ ಅವರಿಂದ ನನಗೆ ರಕ್ಷಣೆ ಸಿಗಲಿ ಎಂದು ಪ್ರಾರ್ಥನೆ ಮಾಡುತ್ತಿರುತ್ತೇನೆ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ‘ಜೈ ಭೀಮ್’ ಪದದ ಸ್ವಾರಸ್ಯಕರ ಇತಿಹಾಸ ಬಲ್ಲಿರಾ?

“ನೀವು (ಮಾಧ್ಯಮ)ಗಳು ಸಹ ನನಗೆ ಬೇಕಾದಷ್ಟು ತೊಂದರೆ ಕೊಡುತ್ತಿರುತ್ತೀರಿ. ಇಲ್ಲದೇ ಇರುವ ಹೊಸ ಸುದ್ದಿಗಳನ್ನು ಸೃಷ್ಟಿ ಮಾಡುತ್ತಾ ಇರುತ್ತೀರಿ. ಅದಕ್ಕಾಗಿ ನಿಮ್ಮಿಂದಲೂ ನಮಗೆ ರಕ್ಷಣೆ ಸಿಗಲಿ ಎಂದು ಪ್ರಾರ್ಥನೆ ಮಾಡುತ್ತಿರುತ್ತೇನೆ” ಎಂದು ಹೇಳಿದರು.

“ವೆಂಕಟೇಶ್ವರನ ಜೊತೆ ಲಕ್ಷ್ಮಿ ಸೇರಿದಂತೆ ವೈಕುಂಠ ಏಕಾದಶಿಯ ದಿನದಂದು ಈ ರಾಜ್ಯದ ಎಲ್ಲರ ಮನೆಯಲ್ಲೂ ಐಶ್ವರ್ಯ ಹೆಚ್ಚಾಗಲಿ ಎಂದು ಪ್ರಾರ್ಥಿಸುತ್ತೇನೆ. ಇದು ನಮ್ಮ ನಂಬಿಕೆ, ಆಚಾರ ವಿಚಾರ. ಧರ್ಮೋ ರಕ್ಷತಿ ರಕ್ಷಿತಃ ಅಂದರೆ ಧರ್ಮವನ್ನು ನಾವು ಉಳಿಸಿದರೆ ಧರ್ಮವು ನಮ್ಮನ್ನು ಉಳಿಸುತ್ತದೆ. ವಿಷ್ಣುವಿನ ಸ್ವರೂಪವಾದ ವೆಂಕಟೇಶ್ವರನ ದರ್ಶನವನ್ನು ರಾಜ್ಯದ ನಾನಾ ಕಡೆಗಳಲ್ಲಿ ಜನರು ಮಾಡುತ್ತಿದ್ದಾರೆ. ಎಲ್ಲರಿಗೂ ದೇವರ ಅನುಗ್ರಹ ದೊರೆಯಲಿ ಎಂದು ಪ್ರಾರ್ಥಿಸುವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು....

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...