ಬಡ ಜನರಿಂದ ಹಣ ಪಡೆಯುವ ದಾರಿದ್ರ್ಯ ನನಗಿಲ್ಲ: ಜಮೀರ್ ಅಹ್ಮದ್ ಖಾನ್

Date:

ಬಡವರಿಂದ ಹಣ ಪಡೆಯುವಷ್ಟು ದಾರಿದ್ರ್ಯ ನನಗೆ ಬಂದಿಲ್ಲ. ಬಡ ಜನರಿಂದ ದುಡ್ಡು ಪಡೆದವರು, ಪಡೆಯುವವರು ಹುಳ ಬಿದ್ದು ಸಾಯುತ್ತಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

- Advertisement -

ವಸತಿ ಯೋಜನೆಯಡಿ ಮನೆ ಹಂಚಿಕೆಗೆ ಲಂಚ ಪಡೆಯಲಾಗಿದೆ ಎಂಬ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಅವರ ಆರೋಪವನ್ನು ಜಮೀರ್ ನಿರಾಕರಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಬಿ.ಆರ್ ಪಾಟೀಲ್ ಅವರು ತುಂಬಾ ಹಿರಿಯರು. ಬಡವರ ಬಗ್ಗೆ ಕಾಳಜಿ ಇರುವವರು. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ನನಗೆ ಅರ್ಥವಾಗಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

“ಪಾಟೀಲ್ ಅವರು ನನ್ನ ಬಗ್ಗೆ ಮಾತನಾಡಿದ್ದಾರಾ? ಸಚಿವರು ಅಂತ ಹೇಳಿದ್ದಾರಾ? ಯಾವ ಇಲಾಖೆ ಎಂದೇನಾದರೂ ಹೇಳಿದ್ದಾರೆಯೇ? ಲಂಚ ಪಡೆದವರು ಯಾರು ಅಂತ ಅವರು ಹೇಳಬೇಕಲ್ಲವೇ? ಆಗ ಮಾತ್ರವೇ ತಾನೇ ಏನಾದರೂ ಕ್ಲಾರಿಟಿ ಸಿಗೋದು. ಈ ಬಗ್ಗೆ ತನಿಖೆ ಆಗಬೇಕು. ತನಿಖೆಯನ್ನು ಸಿಬಿಐಗೆ ಕೊಡಲಿ” ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಇಸ್ರೇಲ್-ಇರಾನ್ ಸಂಘರ್ಷ | ಭಾರತಕ್ಕೆ ಗಂಭೀರ ಸವಾಲುಗಳು, ಪರಿಣಾಮಗಳು

“ನಾನು ಮಂತ್ರಿ ಆದಮೇಲೆ ಇಲಾಖೆಯಿಂದ 36,000 ಮನೆ ಕಟ್ಟಿದ್ದೇನೆ. ಜನರಿಗೆ ಬಿಜೆಪಿ, ಜೆಡಿಎಸ್‌ನವರು ಒಂದೇ ಒಂದು ಮನೆ ಕಟ್ಟಿದ್ದಾರೆಯೇ? ಕೊಟ್ಟಿದ್ದರೆ ಅವರು ಹೇಳಲಿ. ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ” ಎಂದಿದ್ದಾರೆ.

“ಶಾಸಕರು ನೀಡಿದ ಪತ್ರದ ಮೇಲೆಯೇ ನಾವು ಮನೆ ಹಂಚಿಕೆ ಮಾಡಿದ್ದೇವೆ. 42,300 ಮನೆಗಳನ್ನು ಕೊಡಲು ನಾವು ನಿರ್ಧರಿಸಿದ್ದೆವು. ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ 14 ಲಕ್ಷ ಮನೆ ಕೊಟ್ಟಿದ್ದರು. ನಂತರ ಬಂದ ಸರ್ಕಾರ 5.8 ಲಕ್ಷ ಮನೆಗಳನ್ನು ನೀಡಿದೆ. ಬಿಜೆಪಿಯವರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ₹135.95 ಕೋಟಿ ಸಂಸದರ ನಿಧಿಯಲ್ಲಿ ಬಳಕೆಯಾಗಿದ್ದು ಕೇವಲ ಶೇ.18 ಮಾತ್ರ

ಉತ್ತರಾಖಂಡದ ಲೋಕಸಭೆ ಮತ್ತು ರಾಜ್ಯಸಭೆಯ ಹಾಲಿ ಸಂಸದರು ತಮಗೆ ಅಭಿವೃದ್ಧಿ ಕಾಮಗಾರಿಗಳಿಗಾಗಿ...

SIR ವಿವಾದ | ಕೊಪ್ಪದಲ್ಲಿ 243 ಮತದಾರರ ಹೆಸರು ಡಿಲೀಟ್‌ಗೆ ನೀಡಿದ್ದ ಅರ್ಜಿ ಹಿಂಪಡೆದ ಬಿಜೆಪಿ ಮುಖಂಡ

ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಮತ್ತು...