ಎಸ್‍ಐಟಿ ವಶದಲ್ಲಿರುವ ವ್ಯಕ್ತಿಗಳ ಮುಖವನ್ನೇ ನಾನು ನೋಡಿಲ್ಲ, ಮುಕ್ತ ತನಿಖೆಗೆ ಸಿದ್ಧ: ಶರಣಪ್ರಕಾಶ್ ಪಾಟೀಲ

Date:

Advertisements

ಎಸ್‍ಐಟಿ ವಶದಲ್ಲಿರುವ ವ್ಯಕ್ತಿಗಳ ಮುಖವನ್ನೇ ನಾನು ನೋಡಿಲ್ಲ. ನನಗೂ, ಅವರಿಗೂ ಯಾವುದೇ ಸಂಬಂಧ ಇಲ್ಲ. ಎಸ್‍ಐಟಿ ಅಧಿಕಾರಿಗಳ ಮುಂದೆ ಆತ ಏನು ಹೇಳಿದ್ದಾನೆ ಎಂಬುದು ನನಗೂ ಗೊತ್ತಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ ಹೇಳಿದರು.

ಮೇ 24ರಂದು ವಿಕಾಸಸೌಧದ ನನ್ನ ಕಚೇರಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ದದ್ದಲ್ ಸೇರಿದಂತೆ ಕೆಲವರ ಜೊತೆ ಸಭೆ ನಡೆಸಿ ಸಾಕ್ಷ್ಯ ನಾಶ ಮಾಡಿರುವ ಆರೋಪ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಊಹಾಪೋಹಗಳಿಗೆ ನಾನೇಕೆ ಉತ್ತರ ಕೊಡಲಿ?” ಎಂದರು.

“ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ನಾನು ಆ ದಿನ ಕಚೇರಿಗೆ ಭೇಟಿ ನೀಡಿರಲಿಲ್ಲ. ಆದರೂ ನಾನು ಕಚೇರಿಯಲ್ಲಿ ಇದ್ದೆ ಎಂದರೆ, ಅದಕ್ಕಿಂತ ಅಪಹಾಸ್ಯ ಇನ್ನೇನಿದೆ” ಎಂದು ಆರೋಪಗಳನ್ನು ತಳ್ಳಿ ಹಾಕಿದರು.

Advertisements

“ವಾಲ್ಮೀಕಿ ಅಭಿವೃದ್ಧಿ ನಿಗಮದ ಸಾಕ್ಷ್ಯ ನಾಶಗಳ ಕುರಿತಾಗಿ ನನ್ನ ಕಚೇರಿಯಲ್ಲಿ ಯಾವುದಾದರೂ ವ್ಯಕ್ತಿಗಳ ಜೊತೆ ನಾನು ಸಭೆ ನಡೆಸಿದ್ದರೆ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆಗೆ ಸಿದ್ಧ. ಸುಳ್ಳು ಆರೋಪಗಳ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ” ಎಂದರು.

“ಅಷ್ಟಕ್ಕೂ ವಿಕಾಸಸೌಧದ ಕೊಠಡಿ ಸರ್ಕಾರ ನೀಡಿರುವ ಕಚೇರಿ. ಅದು ನನ್ನ ಸ್ವಂತ ಮನೆಯೇನೂ ಅಲ್ಲ. ನಾನು ಸಚಿವನಾಗಿರುವುದರಿಂದ ನನ್ನನ್ನು ನೋಡಲು ರಾಜ್ಯದ ವಿವಿಧ ಭಾಗಗಳಿಂದ ನೂರಾರು ಜನ ಬಂದು ಹೋಗುತ್ತಾರೆ. ಬಂದು ಹೋಗುವವರ ಪೂರ್ಣ ವಿವರಗಳನ್ನು ಕಲೆ ಹಾಕಲು ಸಾಧ್ಯವೇ” ಎಂದು ಪ್ರಶ್ನಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

Download Eedina App Android / iOS

X