ಕಳೆದ 30 ವರ್ಷಗಳಲ್ಲಿ ನಾನು ಒಂದು ದಿನವೂ ರಜೆ ತೆಗೆದುಕೊಂಡಿಲ್ಲ: ಸಿಎಂ ಚಂದ್ರಬಾಬು ನಾಯ್ಡು

Date:

ಕಳೆದ 30 ವರ್ಷಗಳ ರಾಜಕೀಯ ಜೀವನದಲ್ಲಿ ನಾನು ಒಂದು ದಿನವೂ ರಜೆ ತೆಗೆದುಕೊಂಡಿಲ್ಲ. ದಿನನಿತ್ಯ ಯಂತ್ರದಂತೆ ಜನರ ಕಲ್ಯಾಣಕ್ಕಾಗಿ ದುಡಿದಿದ್ದೇನೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿಕೊಂಡಿದ್ದಾರೆ.

- Advertisement -

ಅನ್ನಮಯ್ಯ ಜಿಲ್ಲೆಯ ರಾಜಂಪೇಟೆಯಲ್ಲಿ ನಡೆದ ಪಿಂಚಣಿ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 1995ರ ಸೆಪ್ಟೆಂಬರ್ 1ರಂದು ಅಂದಿನ ಅಖಂಡ ಆಂಧ್ರಪ್ರದೇಶದಲ್ಲಿ ನಾಯ್ಡು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಗದ್ದುಗೆ ಏರಿದ್ದರು. ತಾವು ಮೊದಲ ಬಾರಿಗೆ ಮುಖ್ಯಮಂತ್ರಿಯಾದ ಸಂದರ್ಭವನ್ನು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“30 ವರ್ಷಗಳ ಹಿಂದೆ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗಿನಿಂದ ಈವರೆಗೆ ಜನರ ಜೀವನದಲ್ಲಿ ಬೆಳಕು ತರಲು ಶ್ರಮಿಸುತ್ತಿದ್ದೇನೆ. ನಾನು ರಜೆ ತೆಗೆದುಕೊಳ್ಳುವುದನ್ನು ನೀವು ಎಂದಾದರೂ ನೋಡಿದ್ದೀರಾ? ನಾನು ಎಂದಾದರೂ ಅನಾರೋಗ್ಯಕ್ಕೆ ತುತ್ತಾಗಿರುವುದನ್ನು ಕಂಡಿದ್ದೀರಾ? ನಾನು ಬೆಳಗ್ಗೆಯಿಂದ ರಾತ್ರಿ ಮಲಗುವವರೆಗೂ ಯಂತ್ರದಂತೆ ಕೆಲಸ ಮಾಡುತ್ತೇನೆ” ಎಂದು ಅವರು ಹೇಳಿದ್ದಾರೆ.

“ನಾನು ಕಷ್ಟಪಟ್ಟು ಕೆಲಸ ಮಾಡುತ್ತೇನೆ. ಅಭಿವೃದ್ಧಿಗಾಗಿ ಮತ್ತು ಆದಾಯವನ್ನು ಹೆಚ್ಚಿಸಲು ಆಡಳಿತ ಯಂತ್ರವು ಸಕ್ರಿಯವಾಗಿ ಕೆಲಸ ಮಾಡುವಂತೆ ಮಾಡುತ್ತೇನೆ. ಹೆಚ್ಚಿನ ಆದಾಯದೊಂದಿಗೆ ನಾನು ನಿಮಗಾಗಿ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತೇನೆ. ಇದರಿಂದ ನಿಮ್ಮ ಮಕ್ಕಳು ಉತ್ತಮ ಶಿಕ್ಷಣ ಪಡೆಯುತ್ತಾರೆ., ನಿಮಗೆ ಉದ್ಯೋಗಾವಕಾಶಗಳು ಸಿಗುತ್ತವೆ. ನಿಮಗೆ ಉತ್ತಮ ಭವಿಷ್ಯವಿದೆ” ಎಂದು ನಾಯ್ಡು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಭಾರತ-ಚೀನಾ ‘ಭಾಯಿ ಭಾಯಿ’ ಎನ್ನುತ್ತಿದ್ದಾರೆ ಮೋದಿ; ಇದು ಸಾಧ್ಯವೇ?

ನಾಯ್ಡು ಅವರು ಪತ್ನಿ ನಾರಾ ಭುವನೇಶ್ವರಿ ಅವರು ‘ಎಕ್ಸ್‌’ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದು, “ಶ್ರದ್ಧೆ ಮತ್ತು ಜನರ ಕಲ್ಯಾಣವೇ ಏಕೈಕ ಗುರಿಯಾಗಿಟ್ಟುಕೊಂಡು ನಡೆಸಿದ ಈ ಪ್ರಯಾಣವು ಅನೇಕರಿಗೆ ಸ್ಫೂರ್ತಿ ನೀಡಿದೆ. ನೀವು ತೆಗೆದುಕೊಂಡ ಪ್ರತಿಯೊಂದು ಹೆಜ್ಜೆ ಮತ್ತು ನೀವು ತೆಗೆದುಕೊಂಡ ಪ್ರತಿಯೊಂದು ನಿರ್ಧಾರವು ಜನರ ಭವಿಷ್ಯವನ್ನು ಸುಧಾರಿಸುವ ನಿಮ್ಮ ಬದ್ಧತೆಗೆ ಸಾಕ್ಷಿಯಾಗಿದೆ. ಈ ಅಪರೂಪದ ಮೈಲಿಗಲ್ಲನ್ನು ತಲುಪಿದ್ದಕ್ಕಾಗಿ ನಾನು ನಿಮ್ಮನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ನಿಮ್ಮ ದೃಷ್ಟಿಕೋನ ಮತ್ತು ದೃಢಸಂಕಲ್ಪದೊಂದಿಗೆ ಯಾವಾಗಲೂ ನಿಮ್ಮೊಂದಿಗೆ ನಿಲ್ಲುವುದು ನನ್ನ ಅದೃಷ್ಟ” ಎಂದು ನಾಯ್ಡುಗೆ ಅಭಿನಂದನೆ ಸಲ್ಲಿಸಿದ್ದಾರೆ.

ಸದ್ಯ, ರಾಜಕೀಯ ಜೀವನದಲ್ಲಿ ರಜೆಯನ್ನೇ ತೆಗೆದುಕೊಳ್ಳದೆ, 18 ಗಂಟೆ ಕೆಲಸ ಮಾಡುವ ಮೂಲಕ, ದೇಶವನ್ನು ಬಾನೆತ್ತರಕ್ಕೆ ಕೊಂಡೊಯ್ಯುತ್ತಿರುವ ಪ್ರಧಾನಿ ಮೋದಿ ಅವರ ಸಾಲಿಗೆ ಚಂದ್ರಬಾಬು ನಾಯ್ಡು ಕೂಡ ಸೇರಿಕೊಂಡಿದ್ದಾರೆ.ಮೋದಿ ಅವರು ಬರೋಬ್ಬರಿ ಕಳೆದ 25 ವರ್ಷಗಳಿಂದ ರಜೆಯನ್ನೇ ತೆಗೆದುಕೊಂಡಿಲ್ಲ ಎಂದು ಅಮಿತ್ ಶಾ ಹೇಳಿದ್ದರು. ಈಗ ನಾಯ್ಡು ಕೂಡ ರಜೆ ಇಲ್ಲದೆ ದುಡಿಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಸಮಯದಲ್ಲಿ ಒಡಿಶಾದ ಮಯೂರಭಂಜ್ ಮತ್ತು ಜಾಜಪುರ ಲೋಕಸಭಾ ಕ್ಷೇತ್ರಗಳಲ್ಲಿ ನಡೆದ ಪ್ರಸಾರ ಸಮಾವೇಶದಲ್ಲಿ ಮಾತನಾಡಿದ್ದ ಅಮಿತ್‌ ಶಾ, “ಮೋದಿ ಜಿ ಕಠಿಣ ಪರಿಶ್ರಮಿ. ನಿಷ್ಠಾವಂತ ಮತ್ತು ಪ್ರಾಮಾಣಿಕರು. ಪ್ರಧಾನಿ ಅವರು ದಿನಕ್ಕೆ 18 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ಕಳೆದ 20 ವರ್ಷಗಳಲ್ಲಿ ಒಂದೇ ಒಂದು ದಿನವೂ ರಜೆಯನ್ನೂ ತೆಗೆದುಕೊಂಡಿಲ್ಲ, ಏಕೆಂದರೆ ಅವರು ರಾಷ್ಟ್ರಕ್ಕಾಗಿ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ” ಎಂದಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...