ನನ್ನ ತಾಕತ್ ಟೆಸ್ಟ್ ಮಾಡಬೇಕು ಅಂದ್ರೆ ಶೋಭಾ ಕ್ಷೇತ್ರಕ್ಕೆ ಬರಲಿ: ಎಸ್‌ ಟಿ ಸೋಮಶೇಖರ್ ವಾಗ್ದಾಳಿ

Date:

ನನ್ನ ತಾಕತ್ ಬಗ್ಗೆ ಅವಳು ಟೆಸ್ಟ್ ಮಾಡಬೇಕು ಅಂದ್ರೆ ಕ್ಷೇತ್ರಕ್ಕೆ ಬರಲಿ. ಅವಳು ಸಂಸದೆ ಸ್ಥಾನಕ್ಕೆ ರಾಜೀನಾಮೆ ಕೊಡಲಿ, ನಾನೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಯಶವಂತಪುರದಲ್ಲಿ ಇಬ್ಬರು ಸ್ಪರ್ಧಿಸೋಣ ಯಾರು ಗೆಲ್ಲುತ್ತಾರೆ ಎಂಬುದು ಗೊತ್ತಾಗುತ್ತದೆ ಎಂದು ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್‌ ಹರಿಹಾಯ್ದರು.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಶೋಭಾ ಹೇಗೂ ಗೆದ್ದಿದ್ದಳಲ್ಲ. ತಾಕತ್ ಇದ್ದರೆ ಯಶವಂತಪುರದಲ್ಲಿ ಅವಳೂ ನಿಲ್ಲಲಿ. ಅವಳದ್ದು ಪಾಪದ ಕೊಡ ಇನ್ನೂ ತುಂಬಬೇಕಾಗುತ್ತದೆ. ಪಾಪದ ಕೊಡ ತುಂಬುವವರೆಗೂ ನಾನೂ ತಾಳ್ಮೆಯಿಂದ ಕಾಯುತ್ತಿದ್ದೇನೆ. ಆ ಮೇಲೆ ನಾನು ಮಾತನಾಡುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ನನಗೆ ಏನೂ ಮಾತು ಬರಲ್ಲ ಅಂತಾ ಅಲ್ಲ. ಅವಳ ಹತ್ತರಷ್ಟು ನಾನು ಮಾತಾಡುತ್ತೇನೆ. ಚಿಕ್ಕಮಗಳೂರಿನಲ್ಲಿ ಉಗಿದ ರೀತಿ ನನ್ನನ್ನು ಏನೂ ಕ್ಷೇತ್ರದಲ್ಲಿ ಕ್ಯಾಕರಿಸಿ ಉಗಿದಿಲ್ಲ, ನನ್ನ ತಾಕತ್ ಬಗ್ಗೆ, ನನ್ನ ಬಗ್ಗೆ ಮಾತಾಡುವ ಕಿಂಚಿತ್ ಯೋಗ್ಯತೆ ಅವಳಿಗಿಲ್ಲ. ಈ ಯಮ್ಮನಿಗೆ ತಾಳ್ಮೆಯಿಂದ ಇದ್ದರೆ ಸರಿ, ಇಲ್ಲದಿದ್ದರೆ ಪಾಪದ ಕೊಡ ತುಂಬುತ್ತಿದೆ. ನೆಟ್ಟಗೆ ಕ್ಷೇತ್ರದ ಕಡೆ ಕೆಲಸ ಮಾಡಲಿ. ನನ್ನ ಬಗ್ಗೆ ಯೋಚಿಸುವುದು ಬಿಡಲಿ” ಎಂದು ಹೇಳಿದರು.

ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಪರ ಕಾಂಗ್ರೆಸ್ ನಾಯಕರು ಚಕ್ಕರೆ ಗ್ರಾಮದಲ್ಲಿ ಬೃಹತ್ ಬಹಿರಂಗ ಸಭೆ ನಡೆಸಿದರು. ಈ ವೇಳೆ, ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ದಿಢೀರ್ ಪ್ರತ್ಯಕ್ಷವಾಗಿದ್ದರು. ಚನ್ನಪಟ್ಟಣದಲ್ಲಿ ನಿನ್ನೆ ಕಾಂಗ್ರೆಸ್ ಸಭೆಗೆ ಬಂದು ಹೋಗಿದ್ದ ಸೋಮಶೇಖರ್ ಇಂದು ಡಿಸಿಎಂ ಡಿಕೆಶಿ ಜೊತೆಗಿನ ಸಭೆಯಲ್ಲಿ ಬಹಿರಂಗವಾಗಿಯೇ ಹಾಜರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...