ಸಿಎಂ ಆಯ್ಕೆ ಮಾಡೋದು, ಕೆಳಗೆ ಇಳಿಸೋದು ಚೆನ್ನಾಗಿ ಗೊತ್ತು : ಸಿಎಂ ವಿರುದ್ಧ ಪರೋಕ್ಷ ಬಾಣ ಬಿಟ್ಟ ಬಿ ಕೆ ಹರಿಪ್ರಸಾದ್

Date:

Advertisements
  • ಈಡಿಗ, ಬಿಲ್ಲವ, ದೀವರ ಮುಖಂಡರ ಸಭೆಯಲ್ಲಿ ಹರಿಪ್ರಸಾದ್ ಮಾತು
  • ನೀವು ಮುಂದೆ ಬರಬೇಕಾದರೆ ಅಲ್ಪಸಂಖ್ಯಾತರ ವಿರುದ್ಧ ಧ್ವನಿ ಎತ್ತಬಾರದು ಎಂದ ಹರಿಪ್ರಸಾದ್

‘ಮುಖ್ಯಮಂತ್ರಿ ಆಯ್ಕೆ ಮಾಡೋದು, ಕೆಳಗೆ ಇಳಿಸೋದು ನನಗೆ ಚೆನ್ನಾಗಿ ಗೊತ್ತಿದೆ. ನಾನು ಯಾರ ಬಳಿಯೂ ಭಿಕ್ಷೆ ಬೇಡುವುದಿಲ್ಲ. ಅದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಿ. ನನಗೇನಾದರೂ ಅನ್ಯಾಯವಾದರೆ, ಕೋಟಿ ಚನ್ನಯ್ಯನವರು ಹೇಳಿಕೊಟ್ಟಂತೆ ಎದೆ ಕೊಟ್ಟು ನಿಲ್ಲುತ್ತೇನೆ’ ಎಂದು ಕಾಂಗ್ರೆಸ್‌ ಮುಖಂಡ, ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಈಡಿಗ, ಬಿಲ್ಲವ, ದೀವರ ಮುಖಂಡರ ಸಭೆಯಲ್ಲಿ ಈ ಹೇಳಿಕೆ ನೀಡಿರುವುದಾಗಿ ವಿಡಿಯೋ ತುಣಕೊಂದು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ್ದು, ಮತ್ತೆ ಸುದ್ದಿಯಾಗಿದ್ದಾರೆ.

‘ನಾನು ಮಂತ್ರಿ ಆಗೋದು ಬಿಡೋದು ಬೇರೆ ಪ್ರಶ್ನೆ. ಐವರನ್ನು ಸಿಎಂ ಆಯ್ಕೆ ಮಾಡುವುದರಲ್ಲಿ ನಾನು ಪಾತ್ರ ವಹಿಸಿದ್ದೇನೆ, ಸಮುದಾಯಕ್ಕೆ ನೀವೇನು ಕೊಟ್ಟಿದ್ದೀರಿ’ ಎಂದು ಪಕ್ಷದಲ್ಲಿ ಸೂಕ್ತ ಸ್ಥಾನಮಾನ ತಮಗೆ ಸಿಕ್ಕಿಲ್ಲ ಎಂದು ಬಹಿರಂಗವಾಗಿಯೇ ಅಸಮಾಧಾನ ತೋಡಿಕೊಂಡಿದ್ದಾರೆ.

Advertisements

ಕರ್ನಾಟಕದಲ್ಲಿ ರಾಜಕೀಯವಾಗಿ ಈ ಸಮುದಾಯದವರು ಮುಂದೆ ಬರುತ್ತಿಲ್ಲ. ಏನೇ ಪ್ರಯತ್ನ ಮಾಡಿದರೂ ಆಗುತ್ತಿಲ್ಲ. ಅವಕಾಶ ವಂಚಿತರಾಗುತ್ತಿರುವುದು ನೋಡಿದರೆ ಯಾರದ್ದೋ ಷಡ್ಯಂತ್ರಕ್ಕೆ ಬಲಿಯಾಗುತ್ತಿದ್ದೇವೆ ಅನಿಸುತ್ತದೆ. ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಕ್ಕೆ ಸೇರಿದವರು. ಒಟ್ಟಿಗೆ ಸೇರಬೇಕು ಎಂದು ನಾವು 2013ರಲ್ಲಿ ಅವರಿಗೆ ಬೆಂಬಲ ಕೊಟ್ಟು ಮುಖ್ಯಮಂತ್ರಿಯಾದರು. ಆ ಬಳಿಕ ನಾವು ಕಾಂಗ್ರೆಸ್ ಆಗಲಿ, ಮಂತ್ರಿಗಳಾಗಲಿ ಯಾರ ಬಳಿಯೂ ಕೈ ಚಾಚುವುದಿಲ್ಲ. ಹಿಂದುಳಿದ ವರ್ಗಕ್ಕೆ ಯಾವ ರೀತಿ ಅನುಕೂಲ ಮಾಡಬೇಕು ಎಂದ ಯೋಚನೆ ಮಾಡುತ್ತೇವೆ. ಸ್ವಾರ್ಥಕ್ಕೆ ಯಾವುದು ಕೇಳಲ್ಲ ಎಂದು ನೇರವಾಗಿಯೇ ಹೇಳಿದ್ದಾರೆ.

‘ಉಡುಪಿ ಜಿಲ್ಲೆಯ ಕಾರ್ಕಳ ಕೋಟಿ ಚನ್ನಯ್ಯ ಪಾರ್ಕ್ ಗೆ 5 ಕೋಟಿ ಕೊಡಿ ಎಂದು ಕೇಳಿದ್ದೆವು. ಸಿದ್ದರಾಮಯ್ಯ ಕೊಡುತ್ತೇವೆ ಎಂದು ಹೇಳಿದವರು ಇದುವರೆಗೆ ಕೊಟ್ಟಿಲ್ಲ. ನನಗೆ ಅವರು ರಾಜಕೀಯವಾಗಿ ಏನು ಸಹಾಯ ಮಾಡಲು ಆಗಲ್ಲ. ನಾನೇ ಅವರಿಗೆ ಸಹಾಯ ಮಾಡುತ್ತೇನೆ. ಮಂಗಳೂರು ವಿವಿಯಲ್ಲಿ ಗುರುಪೀಠ ಸ್ಥಾಪನೆಗೆ ನಾನು ಎಂಪಿ ಆದಾಗ ಹಣ ಕೊಟ್ಟಿದ್ದೆ. ಕಟ್ಟಡ ಅರ್ಧಕ್ಕೆ ನಿಂತಿದೆ ಹಣ ಕೊಟ್ಟಿಲ್ಲ, ಆದರೆ ಅವರ ಸಮಾಜಕ್ಕೆ ಎಷ್ಟು ಕೊಟ್ಟಿದ್ದಾರೆ ಎಂದು ಸ್ವಾಮೀಜಿಗಳು ನೋಡಲಿ. ಹಿಂದುಳಿದ ವರ್ಗ ಎಂದರೆ ಒಂದು ಜಾತಿ‌ ಮಾತ್ರವಲ್ಲ. ಜಾತಿ ಬೇರೆ, ವರ್ಗ ಬೇರೆ, ನಾವು ವರ್ಗದಲ್ಲಿ ಬರುತ್ತೇವೆ. ವರ್ಗದಲ್ಲಿ ಬರುವ ಎಲ್ಲರೂ ಸಮಾನ ಹಕ್ಕು ಪಡೆಯಬೇಕು. 11 ಕ್ಷೇತ್ರಗಳಲ್ಲಿ ಈಡಿಗ, ಬಿಲ್ಲವ, ದೀವರು ನಿರ್ಣಾಯಕವಾಗಿದ್ದೇವೆ. ನಾನು ಸಹ ಎಲೆಕ್ಷನ್ ಕಮಿಟಿಯಲ್ಲಿ ಇದ್ದೆ, ನಾಲ್ಕು ಜನ ಟಿಕೆಟ್ ವಂಚಿತರಾದರು. 2 ಬಿಲ್ಲವ, 1 ಈಡಿಗ, 1 ದೀವರು ಟಿಕೆಟ್ ಗಿಟ್ಟಿಸಿಕೊಳ್ಳಲಾಗಲಿಲ್ಲ’ ಎಂಬ ವಿಷಯವನ್ನು ಬಹಿರಂಗಗೊಳಿಸಿದ್ದಾರೆ.

ಮಂಗಳೂರು ಉತ್ತರ ಮತ್ತು ದಕ್ಷಿಣದಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಟ್ಟಿದ್ದಾರೆ. ನಾವು ಅಲ್ಪಸಂಖ್ಯಾತರ ವಿರೋಧಿಗಳಲ್ಲ. ನೀವು ಮುಂದೆ ಬರಬೇಕಾದರೆ ಅಲ್ಪಸಂಖ್ಯಾತರ ವಿರುದ್ಧ ಧ್ವನಿ ಎತ್ತಬಾರದು. ಅಲ್ಪಸಂಖ್ಯಾತರನ್ನು‌ ಮುಂದಿಟ್ಟು ನಮಗೆ ಟಿಕೆಟ್ ವಂಚಿತರನ್ನಾಗಿ ಮಾಡುತ್ತಾರೆ. ಲಿಂಗಾಯತರು, ಒಕ್ಕಲಿಗರು, ಬ್ರಾಹ್ಮಣರು, ಕುರುಬರು ಸಿಎಂ ಸ್ಥಾನಕ್ಕೆ ಹೋರಾಟ ಮಾಡ್ತಾರೆ. ಅವರು ಅಧಿಕಾರಕ್ಕೆ ಬರಬೇಕಾದರೆ ಅವರ ಸ್ಥಾನಗಳನ್ನು ಬಿಟ್ಟುಕೊಡಲಿ. ನಮ್ಮನ್ನು ಯಾಕೆ ಕಟ್ ಮಾಡ್ತಾರೆ, ನಾವು ಹೆಚ್ಚು ಇರುವ ಜಾಗದಲ್ಲಿ ಅವಕಾಶ ಕೊಡಬೇಕು. ನಾವೇನು ಮಂಡ್ಯ, ಬೆಳಗಾವಿಯಲ್ಲಿ ಕೊಡಿ ಎಂದು ಕೇಳಲ್ಲ. ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಕಡೆ ನಮ್ಮವರು ನಿರ್ಣಾಯಕ ಎಂದು ಕರಾವಳಿ ಮೂಲದ ಹಿರಿಯ ರಾಜಕಾರಣಿ ಬಿ ಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ.

ಅವರ ವಿಡಿಯೋಗಳನ್ನು ಸಭೆಯಲ್ಲಿದ್ದವರು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದು, ಸೋಷಿಯಲ್ ಮೀಡಿಯಾ ಸೇರಿದಂತೆ ಮಾಧ್ಯಮಗಳಲ್ಲಿ ಹರಿದಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X