ಚಿನ್ನದಂತ ಕ್ಷೇತ್ರ ಬಿಟ್ಟು ಹೋಗಿ ನಿರುದ್ಯೋಗಿಯಾದೆ : ವಿ ಸೋಮಣ್ಣ ಬೇಸರ

Date:

Advertisements
  • ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಯೋಜನೆಗಳೇ ಅವರ ಗೆಲುವಿಗೆ ಕಾರಣ
  • ಯಡಿಯೂರಪ್ಪ ಅವರನ್ನು ಬಿಜೆಪಿ ಮೂಲೆಗುಂಪು ಮಾಡಿಲ್ಲ

ರಾಜ್ಯ ವಿಧಾನಸಭೆ ಚುನಾವಣೆ ಈ ಬಾರಿಯ ಮತದಾನದ ಫಲಿತಾಂಶದಲ್ಲಿ ವರುಣಾ ಮತ್ತು ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಸೋತಿರುವ ವಿ ಸೋಮಣ್ಣ ಭಾನುವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆಗೆ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ.

“ಸೋತಾಗಿದೆ, ಏನು ಮಾತಾಡಲಿ? ಮಾತಾಡೋದು ಅಗತ್ಯ ಇಲ್ಲ. ಸೋತಿದ್ದೇನೆ ಅಷ್ಟೇ. ಹೈಕಮಾಂಡ್ ಸೂಚನೆ ಮೇರೆಗೆ ಹೋಗಿ ಸ್ಪರ್ಧಿಸಿದ್ದೆ. ಇದನ್ನು ಚಾಲೆಂಜ್ ಆಗಿ ತೆಗೆದುಕೊಂಡೆ, ಪ್ರತಿಯೊಂದಕ್ಕೂ ಕಾಲ ಅಂತ ಇರುತ್ತದೆ. ನನ್ನ ಕ್ಷೇತ್ರ ಚಿನ್ನದಂತೆ ಇತ್ತು. ಹೈಕಮಾಂಡ್ ಹೇಳಿತೆಂದು ಹೋದೆ. ಇದೀಗ ಜನ ತೀರ್ಮಾನ ಮಾಡಿದ್ದಾರೆ. ಚೆನ್ನಾಗಿ ದುಡಿಯುತ್ತಿದ್ದ ನಾನು ಈಗ ನಿರುದ್ಯೋಗಿಯಾಗಿದ್ದೇನೆ. ಕ್ಷೇತ್ರಕ್ಕಿಂತ ಪಕ್ಷ ದೊಡ್ಡದು, ಪಕ್ಷದ ಮಾತು ಕೇಳಿದೆ ಅಷ್ಟೇ” ಎಂದು ಹೇಳಿದ್ದಾರೆ.

ಬಿಜೆಪಿ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಿದೆಯೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಯಡಿಯೂರಪ್ಪ ಅವರನ್ನು ಪಕ್ಷ ಮೂಲೆಗುಂಪು ಮಾಡಿಲ್ಲ. ಅವರ ನಾಯಕತ್ವದಲ್ಲಿ ಚುನಾವಣೆ ಮಾಡಿದ್ದೀವಲ್ಲ? ಯಡಿಯೂರಪ್ಪ ಹೇಳಿದ್ದಾರಾ ಮೂಲೆಗುಂಪು ಮಾಡಿದ್ದಾರೆ ಅಂತ” ಎಂದು ಮರು ಪ್ರಶ್ನೆ ಮಾಡಿದ್ದಾರೆ.

Advertisements

“ಸೋತ ತಕ್ಷಣ ಎಲ್ಲವೂ ಮುಗಿದು ಹೋಯ್ತಾ? ಪಕ್ಷಕ್ಕೆ ಹಿನ್ನಡೆ ಆಗಿದ್ದು ನಮಗೆಲ್ಲ ಎಚ್ಚರಿಕೆ ಗಂಟೆ. ಜನರ ತೀರ್ಮಾನ ಇದು, ಬದ್ಧರಾಗಬೇಕು. ದೇಶಕ್ಕೆ ಮೋದಿ ಪ್ರಶ್ನಾತೀತ ನಾಯಕರು. ಅವರ ಕೆಲಸಗಳು ಅವಿಸ್ಮರಣೀಯ. ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಯೋಜನೆಗಳೇ ಅವರ ಗೆಲುವಿಗೆ ಕಾರಣ” ಎಂದಿದ್ದಾರೆ.

“ಎಲ್ಲರಂತೆ ನನಗೂ ಆಸೆಯಿದೆ, ಮಗನಿಗೆ ಟಿಕೆಟ್ ಕೊಡಿ ಎಂದು ಕೇಳಿದ್ದೆ. ಕೊಡಲಿಲ್ಲ, ಎಲ್ಲ ವಿಧಿನಿಯಮದಂತೆ ಆಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಯತ್ನಾಳ್‌ ಗೆಲುವು; ಸಾರ್ವಜನಿಕವಾಗಿ ಖಡ್ಗ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತ

ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್‌ ನಡುವೆ ಪೈಪೋಟಿ ಕುರಿತು ಪ್ರತಿಕ್ರಿಯಿಸಿ, “ಅದು ಅವರ ಪಕ್ಷದ ನಿರ್ಧಾರ. ಡಿ ಕೆ ಶಿವಕುಮಾರ್ ನಮ್ಮ ತಾಲೂಕಿನವರು. ಸಿದ್ದರಾಮಯ್ಯ ಹಿರಿಯ ನಾಯಕರು, ಜೊತೆಗೆ ಈಗಾಗಲೇ ಒಮ್ಮೆ ಮುಖ್ಯಮಂತ್ರಿ ಆಗಿದ್ದಾರೆ. ಈಗ ಡಿ ಕೆ ಶಿವಕುಮಾರ್​ ಮುಖ್ಯಮಂತ್ರಿ ಆಗಬೇಕಾಗಿರುವವರು. ಯಾರನ್ನು ಸಿಎಂ ಮಾಡಬೇಕೆಂದು ಅವರ ಪಕ್ಷ ನಿರ್ಧಾರ ಕೈಗೊಳ್ಳುತ್ತದೆ” ಎನ್ನುವ ಮೂಲಕ ಪರೋಕ್ಷವಾಗಿ ಶಿವಕುಮಾರ್ ಸಿಎಂ ಆಗಬೇಕೆಂಬ ಒಲವು ತೋರಿಸಿದ್ದಾರೆ.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X