ಇಂಡಿಯಾ Vs ಎನ್‌ಡಿಎ : 26 ಪಕ್ಷಗಳ ವಿರೋಧ ಪಕ್ಷಗಳ ಒಕ್ಕೂಟಕ್ಕೆ ‘ಇಂಡಿಯಾ’ ಹೆಸರು

Date:

2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯನ್ನು ಎದುರಿಸಲು ಸಲುವಾಗಿ ಕಾರ್ಯತಂತ್ರವನ್ನು ರೂಪಿಸಲು ಇಂದು ಬೆಂಗಳೂರಿನಲ್ಲಿ ಸಭೆ ಸೇರಿರುವ 26 ವಿರೋಧ ಪಕ್ಷಗಳ ಒಕ್ಕೂಟಕ್ಕೆ “ಇಂಡಿಯಾ (I.N.D.I.A)” ಎಂಬ ಹೆಸರನ್ನು ಅಂತಿಮಗೊಳಿಸಲಾಗಿದೆ.

- Advertisement -

ಬೆಂಗಳೂರಿನಲ್ಲಿ ನಡೆಯುತ್ತಿರುವ ಸಭೆಯಲ್ಲಿ, ಇಂಡಿಯಾ ಅಥವಾ ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟಲ್‌ ಇನ್‌ಕ್ಲೂಸಿವ್ ಅಲಯನ್ಸ್(ಭಾರತ ರಾಷ್ಟ್ರೀಯ ಅಭಿವೃದ್ಧಿಶೀಲ ಸರ್ವಸಮ್ಮಿಳಿತ ಒಕ್ಕೂಟ) ಎಂಬ ಸಂಕ್ಷಿಪ್ತ ರೂಪವನ್ನು ಆಡಳಿತ ಪಕ್ಷವನ್ನು ಎದುರಿಸಲು ಪ್ರಯತ್ನಿಸುವ ವಿರೋಧ ಪಕ್ಷದ ಹೆಸರನ್ನಾಗಿ ಇಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸಭೆಯ ಮೊದಲ ದಿನ ಅನೌಪಚಾರಿಕವಾಗಿತ್ತು. ಇಂದು, ಮಹಾಮೈತ್ರಿಕೂಟದ ಹೆಸರಿನ ಬಗೆಯ ಚರ್ಚೆಯೊಂದಿಗೆ ಸಭೆ ಹೆಚ್ಚು ಔಪಚಾರಿಕವಾಗಲಿದೆ. ನಿನ್ನೆ ನಡೆದ ಔತಣಕೂಟದಲ್ಲಿ ಎಲ್ಲ ರಾಜಕೀಯ ಪಕ್ಷಗಳಿಗೆ ಹೆಸರುಗಳನ್ನು ಸೂಚಿಸುವಂತೆ ತಿಳಿಸಲಾಗಿತ್ತು.

ಮೂಲಗಳ ಪ್ರಕಾರ, ಮಾಜಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ವಿಪಕ್ಷಗಳ ಒಕ್ಕೂಟದ ಅಧ್ಯಕ್ಷರನ್ನಾಗಿ ಹೆಸರಿಸಲು ನಿರ್ಧರಿಸಲಾಗಿದ್ದು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಂಚಾಲಕರಾಗಿರುತ್ತಾರೆ. ಸೋನಿಯಾ ಗಾಂಧಿ ಅವರು 2004 ರಿಂದ 2014 ರವರೆಗೆ ಸಂಯುಕ್ತ ಪ್ರಜಾಸತ್ತಾತ್ಮಕ ಒಕ್ಕೂಟದ (ಯುಪಿಎ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಹೆಚ್ಚುವರಿಯಾಗಿ, ಎರಡು ಉಪಸಮಿತಿಗಳನ್ನು ರಚಿಸಲಾಗುತ್ತದೆ. ಒಂದು ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಮತ್ತು ಸಂವಹನ ಅಂಶಗಳನ್ನು ಅಂತಿಮಗೊಳಿಸಲು ಮತ್ತು ಇನ್ನೊಂದು ಜಂಟಿ ವಿರೋಧದ ಕಾರ್ಯಕ್ರಮಗಳು, ರ್‍ಯಾಲಿಗಳು ಮತ್ತು ಸಮಾವೇಶಗಳನ್ನು ಯೋಜಿಸಲು ರೂಪಿಸಲಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಪ್ರಧಾನಿ ಹುದ್ದೆಗೆ ಕಾಂಗ್ರೆಸ್‌ ಆಸಕ್ತಿ ಹೊಂದಿಲ್ಲ: ವಿಪಕ್ಷಗಳ ಸಭೆಯಲ್ಲಿ ಖರ್ಗೆ ಹೇಳಿಕೆ

ಬೆಂಗಳೂರಿನ ಪ್ರತಿಪಕ್ಷಗಳ ಸಭೆಯಲ್ಲಿ ಸೋನಿಯಾ ಗಾಂಧಿ ಅವರಲ್ಲದೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಮುಖ್ಯಮಂತ್ರಿಗಳಾದ ಎಂ ಕೆ ಸ್ಟಾಲಿನ್, ನಿತೀಶ್ ಕುಮಾರ್, ಅರವಿಂದ್ ಕೇಜ್ರಿವಾಲ್, ಹೇಮಂತ್ ಸೊರೆನ್, ಮಮತಾ ಬ್ಯಾನರ್ಜಿ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಭಾಗವಹಿಸಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.

“ಸಾಮಾಜಿಕ ನ್ಯಾಯ, ಒಳಗೊಳ್ಳುವ ಅಭಿವೃದ್ಧಿ ಮತ್ತು ರಾಷ್ಟ್ರೀಯ ಕಲ್ಯಾಣದ ಕಾರ್ಯಸೂಚಿಯನ್ನು ಉತ್ತೇಜಿಸಲು ಸಮಾನ ಮನಸ್ಕ ವಿರೋಧ ಪಕ್ಷಗಳು ನಿಕಟವಾಗಿ ಒಟ್ಟಾಗಿ ಕೆಲಸ ಮಾಡುತ್ತವೆ. ನಾವು ದ್ವೇಷ, ವಿಭಜನೆ, ಆರ್ಥಿಕ ಅಸಮಾನತೆ ಮತ್ತು ನಿರಂಕುಶ ಮತ್ತು ಜನವಿರೋಧಿ ರಾಜಕೀಯದಿಂದ ಭಾರತದ ಜನರನ್ನು ಮುಕ್ತಗೊಳಿಸಲು ಬಯಸುತ್ತೇವೆ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...