ನೀರು ತುಂಬಿ ತೊಂದರೆಗೀಡಾಗುವ ಪ್ರದೇಶಗಳನ್ನು ಶೀಘ್ರ ಗುರುತಿಸಿ : ಅಧಿಕಾರಿಗಳಿಗೆ ಡಿಸಿಎಂ ಸೂಚನೆ

Date:

  • ನಗರ ಪ್ರದಕ್ಷಿಣೆ ನಡೆಸಿ ಮಳೆ ತೊಂದರೆ ಪ್ರದೇಶ ವೀಕ್ಷಿಸಿದ ಡಿಸಿಎಂ
  • ಅಧಿಕಾರಿಗಳ ಕಾರ್ಯ ವೈಖರಿಗೆ ಸಿಡಿಮಿಡಿ, ಪರಿಶೀಲನಾ ಸ್ಥಳದಲ್ಲೇ ಎಚ್ಚರಿಕೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆಗಾಲದಲ್ಲಿ ನೀರು ತುಂಬಿ ತೊಂದರೆಗೀಡಾಗುವ ಪ್ರದೇಶಗಳನ್ನು ಶೀಘ್ರವೇ ಗುರುತಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೂಚನೆ ನೀಡಿದರು.

ಇಂದು(ಜೂನ್ 8) ಅಧಿಕಾರಿಗಳೊಂದಿಗೆ ಬಿಎಂಟಿಸಿಯ ವೊಲ್ವೋ ಬಸ್ ಮೂಲಕ ನಗರ ಪರಿವೀಕ್ಷಣಾ ಸಂಚಾರ ನಡೆಸಿದ ಡಿಸಿಎಂ ಬಳಿಕ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡರು.

ಮಳೆಗಾಲ ಸಮೀಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತೆ ಅನಾಹುತಕ್ಕೀಡಾಗುವುದನ್ನು ತಪ್ಪಿಸಲು ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕೈಗೊಂಡಿರುವ ಸಿದ್ದತೆಗಳ ಪರಿಶೀಲನೆ ನಡೆಸಿದ್ದಾಗಿ ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಿಬಿಎಂಪಿ ಅಧಿಕಾರಿಗಳನ್ನೂ ಜೊತೆಗಿಟ್ಟುಕೊಂಡು ನಗರದ ಕೆಲ ಪ್ರದೇಶಗಳಿಗೆ ಭೇಟಿ ನೀಡಿ ಮೇಲ್ವಿಚಾರಣೆ ನಡೆಸಿದ್ದೇನೆ. ಬೆಂಗಳೂರಿನ ಹಲವು ಒಳಚರಂಡಿ ವ್ಯವಸ್ಥೆಯನ್ನು ಪರಿಶೀಲಿಸಲಾಗಿದೆ. ಬಿಬಿಎಂಪಿ ಆಯುಕ್ತರು ಕೆಲವೊಂದು ವಿಷಯಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ, ಅವುಗಳ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಜರುಗಿಸಲಾಗುತ್ತದೆ ಎಂದು ಡಿಕೆಶಿ ಹೇಳಿದರು.ಡಿಕೆ ಶಿವಕುಮಾರ್

ಇದೇ ವೇಳೆ ಕಾರಂತ ಬಡಾವಣೆ ಅಭಿವೃದ್ಧಿ ವಿಚಾರವಾಗಿ ಮಾತನಾಡಿದ ಅವರು ಈ ಬಡಾವಣೆಯನ್ನು ಪುನರ್ ಅಭಿವೃದ್ಧಿ ಮಾಡಲಾಗುತ್ತಿದೆ. ಇದಕ್ಕಾಗಿ ಆಸ್ತಿ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಲು ಸೂಚಿಸಲಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ?:ಬಿಡಿಎ ಅಧ್ಯಕ್ಷರಾಗಿ ಐಎಎಸ್‌ ಅಧಿಕಾರಿ ರಾಕೇಶ್‌ ಸಿಂಗ್‌ ನೇಮಕ

ಇನ್ನು ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಚಾಟಿ ಬೀಸಿದ ಡಿಸಿಎಂ, ಬೆಂಗಳೂರು ಅಭಿವೃದ್ಧಿಯಲ್ಲಿ ಅಧಿಕಾರಿಗಳ ಪಾತ್ರ ಬಹಳ ಮುಖ್ಯ. ಆದರೆ, ಕೆಲವರು ಈ ಬಗ್ಗೆ ಗಮನ ಹರಿಸದೆ, ಅವರವರ ಮೂಗಿನ ನೇರಕ್ಕೆ, ಅನುಕೂಲಕ್ಕೆ ತಕ್ಕಂತೆ ಕೆಲಸ ಮಾಡುತ್ತಿದ್ದಾರೆ. ಕೆಲವರು ದಿಕ್ಕು ತಪ್ಪಿಸಲು ಯತ್ನಿಸುತ್ತಿದ್ದಾರೆ.

ಅಭಿವೃದ್ಧಿ ವಿಚಾರದಲ್ಲಿ ಅಧಿಕಾರಿಗಳು ಆಟ ಆಡಲು ನೋಡಿದರೆ, ದಿಕ್ಕು ತಪ್ಪಿಸಲು ಯತ್ನಿಸಿದರೆ ಸಹಿಸುವುದಿಲ್ಲ. ಅಂತಹವರು ಜಾಗ ಖಾಲಿ ಮಾಡಬೇಕಾಗುತ್ತದೆ. ನಿಮ್ಮ ವೈಯಕ್ತಿಕ ಹಿತ ಪಕ್ಕಕ್ಕಿಡಿ. ನಿಜ ಅರ್ಥದಲ್ಲಿ ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿ, ಅನುಷ್ಠಾನಕ್ಕೆ ತನ್ನಿ. ಬೆಂಗಳೂರು ಪರಿವರ್ತನೆಗೆ ಕೈ ಜೋಡಿಸಿ ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸತ್ಯ ಹರಿಶ್ಚಂದ್ರನ ಮೊಮ್ಮಗ ತರ ಕುಮಾರಸ್ವಾಮಿ ಮಾತಾಡ್ತಾರೆ: ಡಿ ಕೆ ಶಿವಕುಮಾರ್ ವಾಗ್ದಾಳಿ

ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದೆಯೇ?, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯವರು...

ಕೋಮು ದ್ವೇಷ ಭಾಷಣ; ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚು.ಆಯೋಗಕ್ಕೆ 93 ನಿವೃತ ಅಧಿಕಾರಿಗಳ ಪತ್ರ

ರಾಜಸ್ಥಾನದ ಬನ್ಸ್‌ವಾರಾದಲ್ಲಿ ಏಪ್ರಿಲ್ 21ರಂದು ನಡೆದ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ...

ಮಧ್ಯಾಹ್ನ 1 ಗಂಟೆವರೆಗೂ ರಾಜ್ಯದಲ್ಲಿ ಶೇ.38.23ರಷ್ಟು ಮತದಾನ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ದೇಶದಲ್ಲಿ ಶುಕ್ರವಾರ ಆರಂಭಗೊಂಡಿದ್ದು, ರಾಜ್ಯದ...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...