- 7 ದಿನ ಪೊಲೀಸ್ ವಶಕ್ಕೆ ನೀಡಿದ ಕನಕಪುರ ನ್ಯಾಯಾಲಯ
- ಆರೋಪಿಗಳನ್ನು ರಾಜಸ್ಥಾನದಲ್ಲಿ ಬಂಧಿಸಿದ್ದ ಪೊಲೀಸರು
ಜಾನುವಾರುಗಳ ದಲ್ಲಾಳಿ ವ್ಯಾಪಾರ ಮಾಡುತ್ತಿದ್ದ ಇದ್ರೀಶ್ ಪಾಷಾ ಸಾವಿನ ಪ್ರಕರಣದಲ್ಲಿ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಆರೋಪಿಗಳನ್ನು 7 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿಕನಕಪುರ ನ್ಯಾಯಾಲಯ ಆದೇಶ ಹೊರಡಿಸಿದೆ.
ಕಳೆದ ಮಾರ್ಚ್ 31 ರಂದು ಕನಕಪುರದ ಸಾತನೂರು ಬಳಿ ದನಗಳನ್ನು ಸಾಗಸುತ್ತಿದ್ದ ಇದ್ರೀಶ್ ಪಾಷಾ ಅವರನ್ನು ಅಡ್ಡಗಟ್ಟಿದ್ದ ಪಿನೀತ್ ಕೆರೆಹಳ್ಳಿ ಮತ್ತು ತಂಡ ಪಾಷಾ ಮೇಲೆ ಹಲ್ಲೆ ನಡೆಸಿತ್ತು. ಹಲ್ಲೆಯ ವಿಡಿಯೋವನ್ನು ಆರೋಪಿಗಳೇ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು.
ಏಪ್ರಿಲ್ 1 ರಂದು ವಾಹನ ತಡೆಯೊಡಿದ್ದ ಕೂಗಳತೆ ದೂರದಲ್ಲಿ ಇದ್ರೀಶ್ ಪಾಷಾ ಅವರ ಮೃತದೇಹ ಪತ್ತೆಯಾಗಿತ್ತು. ಈ ಬಗ್ಗೆ ಇದ್ರೀಶ್ ಪೋಷಕರು ಪುನೀತ್ ಮತ್ತು ಸಹಚರರ ಮೇಲೆ ಸಾತನೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ಐವರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 504, 506, 324, 302, 304 ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಈ ಸುದ್ದಿ ಓದಿದ್ದೀರಾ? : ಜೈಪುರ | ಹಿಂದೂ ಗುರುಗಳು ನೀಡಿರುವ ಸೇವೆ ಮಿಷನರಿಗಳಿಗಿಂತಲೂ ಹೆಚ್ಚು: ಮೋಹನ್ ಭಾಗವತ್
ದೂರು ದಾಖಲಾಗುತ್ತಿದ್ದಂತೆ ಆರೋಪಿಗಳು ತಲೆ ಮರೆಸಿಕೊಂಡಿದ್ದರು. ಅವರನ್ನು ಮೂರ್ನಾಲ್ಕು ದಿನಗಳ ನಂತರ, ಸಾತನೂರು ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿದ್ದರು.
ಪ್ರಕರಣದ ಸಂಬಂಧ ಆರೋಪಿಗಳನ್ನು ವಿಚಾರಣೆಗೆ ಒಳಪಸುವ ಉದ್ದೇಶದಿಂದ ಐವರನ್ನೂ ತಮ್ಮ ವಶಕ್ಕೆ ನೀಡುವಂತೆ ಸಾತನೂರು ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು.
ಪೊಲೀಸರು ಮನವಿ ಪುರಸ್ಕರಿಸಿದ ಸುರೇಶ ಅಪ್ಪಣ್ಣ ಸವದಿ ನೇತೃತ್ವದ ನ್ಯಾಯಾಲಯವು ಐವರು ಆರೋಪಿಗಳನ್ನು 7 ದಿನಗಳ ಕಾಲ ಸಾತನೂರು ಪೊಲೀಸರ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.