ಬಿಜೆಪಿಗೆ ತಾಕತ್ತಿದ್ದರೆ ದೇಶದ ಎಲ್ಲ ರಾಜ್ಯಗಳಲ್ಲೂ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಲಿ: ಸಿಎಂ ಸವಾಲು

Date:

Advertisements
  • ಗೃಹಜ್ಯೋತಿಗೆ ಅಧಿಕೃತವಾಗಿ ಚಾಲನೆ ನೀಡಿ ಬಿಜೆಪಿ ವಿರುದ್ಧ ವಾಗ್ದಾಳಿ
  • ‘ಗೃಹಜ್ಯೋತಿ ಯೋಜನೆಯಡಿ 2.14 ಕೋಟಿ ಜನ ಲಾಭ ಪಡೆಯಲಿದ್ದಾರೆ’

ಬಿಜೆಪಿಗೆ ತಾಕತ್ತಿದ್ದರೆ ಐದು ಗ್ಯಾರಂಟಿಗಳನ್ನು ದೇಶದ ಎಲ್ಲ ರಾಜ್ಯಗಳಲ್ಲಿ ಜಾರಿ ಮಾಡುವ ತೀರ್ಮಾನವನ್ನು ಮಾಡಲಿ ಎಂದು ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.

ಕಲಬುರಗಿಯಲ್ಲಿ ಶನಿವಾರ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿಗೆ ಅಧಿಕೃತವಾಗಿ ಚಾಲನೆ ನೀಡಿ ಮಾತನಾಡಿದರು.

“ಐದು ಗ್ಯಾರಂಟಿಗಳ ಅನುಷ್ಠಾನದ ಬಗ್ಗೆ ಯಾರಿಗೂ ಅಪನಂಬಿಕೆ ಬೇಡ. ವಿರೋಧ ಪಕ್ಷದವರು ಈ ಬಗ್ಗೆ ಗುಲ್ಲೆಬ್ಬಿಸುತ್ತಿದ್ದಾರೆ. ವಿರೋಧ ಪಕ್ಷದವರಲ್ಲದೇ ಈ ದೇಶದ ಪ್ರಧಾನಿಗಳು ಕೂಡ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಿಲ್ಲ. ಈ ದೇಶವನ್ನು ದಿವಾಳಿ ಮಾಡಿರುವುದು ನರೇಂದ್ರ ಮೋದಿಯವರು” ಎಂದು ವಾಗ್ದಾಳಿ ನಡೆಸಿದರು.

Advertisements

“ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಸಂಪತ್ತನ್ನು ಲೂಟಿ ಮಾಡಿ, ಬೆಲೆ ಏರಿಕೆಗೆ ಕಾರಣವಾಗಿ, ನಿರುದ್ಯೋಗದ ಸಮಸ್ಯೆಯನ್ನು ಹೆಚ್ಚು ಮಾಡಿ, ರಾಜ್ಯದ ಬಡವರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದೆ. ನರೇಂದ್ರ ಮೋದಿ ಸರ್ಕಾರ, ಕರ್ನಾಟಕದಲ್ಲಿ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಸರ್ಕಾರ ರಾಜ್ಯವನ್ನು ಹಿಂದುಳಿಯುವಂತೆ ಮಾಡಿದೆ. ನಾವು ನುಡಿದಂತೆ ನಡೆದಿದ್ದೇವೆ. ನಮ್ಮ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡುತ್ತಿರುವುದರಿಂದ ಹೊಟ್ಟೆಉರಿಯಿಂದ ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಹೈದರಾಬಾದ್ ಕರ್ನಾಟಕ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ಹೆಸರನ್ನು ಬದಲಾಯಿಸಿದ್ದೇ ಬಿಜೆಪಿ ಕೊಡುಗೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪೋಕ್ಸೊ ಕಾಯ್ದೆ ಬಂದರೂ ತಗ್ಗದ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ

ಅನ್ನಭಾಗ್ಯ ಕಾರ್ಯಕ್ರಮಕ್ಕೂ ಗುಲ್ಲೆಬ್ಬಿಸಿದರು

ವಿರೋಧ ಪಕ್ಷದವರು ಅನ್ನಭಾಗ್ಯ ಕಾರ್ಯಕ್ರಮದ ಬಗ್ಗೆಯೂ ಗುಲ್ಲೆಬ್ಬಿಸಿದರು. ಬಡವರ ವಿರೋಧಿ ಸರ್ಕಾರ ಕೇಂದ್ರ ಸರ್ಕಾರ ಅಕ್ಕಿ ಕೊಡುವುದಾಗಿ ಮೊದಲು ಒಪ್ಪಿಗೆ ನೀಡಿ, ನಂತರ ಅಕ್ಕಿ ಕೊಡದೇ ರಾಜಕೀಯ ಮಾಡಿದರು. ರೂ. 34 ರಂತೆ ಹಣ ಕೊಡುತ್ತೇವೆ ಎಂದರೂ ಅವರು ಬಡವರಿಗೆ 5 ಕೆಜಿ ಅಕ್ಕಿಯನ್ನು ನೀಡಲಿಲ್ಲ. ಬೆಲೆಏರಿಕೆಯ ಮೂಲಕ ಮೋದಿಯವರು ಜನರ ಬಳಿ ಇದ್ದ ದುಡ್ಡು ಕಿತ್ತುಕೊಳ್ಳತ್ತಾರೆ. ವಿರೋಧಪಕ್ಷದವರ ಮಾತುಗಳಿಗೆ ಕಿವಿ ಕೊಡಬೇಕಾದ ಅಗತ್ಯವಿಲ್ಲ” ಎಂದು ಹೇಳಿದರು.

ಕರ್ನಾಟಕ ಮಾದರಿ ನಿರ್ಮಾಣ

ಐದು ಗ್ಯಾರಂಟಿ ಯೋಜನೆಗಳನ್ನು ಸಾರ್ವತ್ರಿಕ ಮೂಲ ಆದಾಯ ಎಂಬ ಪರಿಕಲ್ಪನೆಯಡಿ ರೂಪಿಸಲಾಗಿದ್ದು, ಕರ್ನಾಟಕದಲ್ಲಿ ಕರ್ನಾಟಕ ಮಾದರಿ- ಪ್ರಾರಂಭ ಮಾಡುತ್ತೇವೆ. ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಎಂದಿಗೂ ಮರೆಯುವುದಿಲ್ಲ. ಈ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸಲಿದೆ” ಎಂದು ಮುಖ್ಯಮಂತ್ರಿ ತಿಳಿಸಿದರು.

“2013-18 ರಲ್ಲಿ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಸರ್ಕಾರ ಕೊಟ್ಟಂತಹ 165 ಭರವಸೆಗಳನ್ನು 158 ಈಡೇರಿಸಿ, 30 ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿತ್ತು. ಆದ್ದರಿಂದ ಈ ಬಾರಿ ಜನರು ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಗೆಲುವು ನೀಡಿದರು. ಸರ್ಕಾರ ಐದು ಗ್ಯಾರಂಟಿಗಳ ಜೊತೆಗೆ ಪ್ರಣಾಳಿಕೆಯಲ್ಲಿ ತಿಳಿಸಿರುವಂತೆ 76 ಭರವಸೆಗಳನ್ನು ಜಾರಿಗೆ ತರಲಾಗುವುದು. ಮುಂದಿನ ಐದು ವರ್ಷಗಳಲ್ಲಿ ಪ್ರಣಾಳಿಕೆಯಲ್ಲಿ ತಿಳಿಸಿರುವ ಎಲ್ಲ ಭರವಸೆಗಳನ್ನು ಈಡೇರಿಸಲಾಗುವುದು” ಎಂದು ಭರವಸೆ ನೀಡಿದರು.

ಶಕ್ತಿ ಯೋಜನೆ, 30 ಕೋಟಿಗೂ ಹೆಚ್ಚು ಮಹಿಳೆರಿಗೆ ಲಾಭ

ಜೂನ್ 11 ರಂದು ‘ಶಕ್ತಿ’ ಯೋಜನೆ ಜಾರಿಗೊಳಿಸಲಾಯಿತು. ಇದುವರೆಗೂ 30 ಕೋಟಿಗೂ ಹೆಚ್ಚು ಜನ ಮಹಿಳೆಯರು ಶಕ್ತಿ ಯೋಜನೆಯ ಲಾಭ ಪಡೆದಿದ್ದು, ಪ್ರತಿದಿನ ಸುಮಾರು 50 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಈ ಯೋಜನೆಯಿಂದ ರಾಜ್ಯದ ಮಹಿಳೆಯರು ಸಂತುಷ್ಟರಾಗಿದ್ದಾರೆ” ಎಂದು ಹೇಳಿದರು.

ಗೃಹಜ್ಯೋತಿ ಕಾರ್ಯಕ್ರಮದಡಿ 2.14 ಕೋಟಿ ಜನ ಲಾಭ ಪಡೆಯಲಿದ್ದು, 1.41 ಕೋಟಿ ಜನರ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಜುಲೈ ಒಂದರಿಂದ ಪ್ರಾರಂಭವಾಗಿದೆ. ಇಂದು ಆಗಸ್ಟ್ ತಿಂಗಳಲ್ಲಿ ಆಗಸ್ಟ್ ಮಾಹೆಯಿಂದ ಶೂನ್ಯ ಬಿಲ್‌ ಬರುತ್ತದೆ. ಅದನ್ನು ಸಾಂಕೇತಿಕವಾಗಿ 10 ಜನಕ್ಕೆ ನೀಡಿದ್ದೇವೆ” ಎಂದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇಂಧನ ಸಚಿವ ಕೆ.ಜೆ.ಜಾರ್ಜ್, ಕಲಬುರಗಿ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ, ಸಚಿವರಾದ ಈಶ್ವರ ಖಂಡ್ರೆ, ರಹೀಂ ಖಾನ್, ಶರಣಪ್ರಕಾಶ ಪಾಟೀಲ್ ದರ್ಶನಾಪುರ್, ಶಾಸಕರಾದ ಅಲ್ಲಂಪ್ರಭು, ಕನೀಜ್ ಫಾತಿಮಾ, ಬಿ.ಆರ್.ಪಾಟೀಲ್, ಎಂ ವೈ ಪಾಟೀಲ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X