ಬಿಜೆಪಿ ಗೆದ್ದರೆ, 2 ತಿಂಗಳಲ್ಲಿ ಯುಪಿ ಸಿಎಂ ಯೋಗಿ ರಾಜಕಾರಣವೂ ಅಂತ್ಯ: ಕೇಜ್ರಿವಾಲ್

Date:

“ಬಿಜೆಪಿ ವಿರೋಧ ಪಕ್ಷದ ನಾಯಕರನ್ನು ಮಾತ್ರವಲ್ಲದೆ ತಮ್ಮದೇ ಪಕ್ಷದ ನಾಯಕರನ್ನು ಜೈಲಿಗೆ ಹಾಕುತ್ತದೆ. ಪ್ರಧಾನಿ ಮೋದಿ ‘ಒಂದು ರಾಷ್ಟ್ರ, ಒಂದು ನಾಯಕ’ ಮಿಷನ್‌ಅನ್ನು ಪ್ರಾರಂಭಿಸಿದ್ದಾರೆ. ಮತ್ತೆ ಬಿಜೆಪಿ ಗೆದ್ದರೆ, ಮೋದಿ ಅವರು ಶೀಘ್ರದಲ್ಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ರಾಜಕೀಯ ಜೀವನವನ್ನು ಕೊನೆಗೊಳಿಸುತ್ತಾರೆ” ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಜೈಲಿನಿಂದ ಹೊರಬಂದ ನಂತರ ನಡೆದ ಮೊದಲ ಪತ್ರಿಕಾಗೋಷ್ಠಿಯಲ್ಲಿ ಅರವಿಂದ್ ಕೇಜ್ರಿವಾಲ್ ಮಾತನಾಡಿದರು. “ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಯಶವಂತ ಸಿನ್ಹಾ, ಶಿವರಾಜ್ ಸಿಂಗ್ ಚೌಹಾಣ್, ವಸುಂಧರಾ ರಾಜೇ, ಖಟ್ಟರ್, ರಮಣ್ ಸಿಂಗ್ ಅವರ ರಾಜಕೀಯ ಮುಗಿದಿದೆ. ನಂತರದ ಸ್ಥಾನದಲ್ಲಿ ಯೋಗಿ ಆದಿತ್ಯನಾಥ್ ಇದ್ದಾರೆ. ಮೋದಿ ಮತ್ತೆ ಗೆದ್ದರೆ, ಎರಡು ತಿಂಗಳೊಳಗೆ ಉತ್ತರ ಪ್ರದೇಶ ಮುಖ್ಯಮಂತ್ರಿಯನ್ನು ಬದಲಾಯಿಸುತ್ತಾರೆ” ಎಂದು ಹೇಳಿದರು.

“ನಮ್ಮ ದೇಶ ಬಹಳ ಹಳೆಯದು. ಒಬ್ಬ ಸರ್ವಾಧಿಕಾರಿ ಅಧಿಕಾರ ಹಿಡಿಯಲು ಪ್ರಯತ್ನಿಸಿದಾಗಲೆಲ್ಲಾ ಜನರು ಅವನನ್ನು ಬೇರುಸಹಿತ ಕಿತ್ತೊಗೆಯುತ್ತಾರೆ. ಇಂದು ಮತ್ತೊಮ್ಮೆ ಸರ್ವಾಧಿಕಾರಿ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಲು ಜನರು ಬಯಸಿದ್ದಾರೆ. ನಾನು 140 ಕೋಟಿ ಜನರ ಬಳಿ ಭಿಕ್ಷೆ ಬೇಡಲು ಬಂದಿದ್ದೇನೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

 

“2024ರ ಲೋಕಸಭಾ ಚುನಾವಣೆಯ ನಂತರ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎಂ.ಕೆ ಸ್ಟಾಲಿನ್ ಸೇರಿದಂತೆ ಎಲ್ಲ ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಕಳಿಸುತ್ತಾರೆ” ಎಂದು ಕೇಜ್ರಿವಾಲ್ ಎಚ್ಚರಿಸಿದರು.

“ಮೋದಿ ನೇತೃತ್ವದ ಬಿಜೆಪಿ ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಕಳುಹಿಸುತ್ತಾರೆ. ನಮ್ಮ ಹೇಮಂತ್ ಸೊರೇನ್ (ಜಾರ್ಖಂಡ್ ಮಾಜಿ ಸಿಎಂ) ಜೈಲಿನಲ್ಲಿದ್ದಾರೆ. ಬಿಜೆಪಿ ಮತ್ತೆ ಗೆದ್ದರೆ, ಮಮತಾ ಬ್ಯಾನರ್ಜಿ ಎಂಕೆ ಸ್ಟಾಲಿನ್, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಉದ್ಧವ್ ಠಾಕ್ರೆ ಸೇರಿದಂತೆ ವಿಪಕ್ಷಗಳ ನಾಯಕರು ಜೈಲಿನಲ್ಲಿರುತ್ತಾರೆ” ಎಂದು ಹೇಳಿದರು.

ಶುಕ್ರವಾರ, ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಚುನಾವಣೆಗೆ ಮುನ್ನವೇ ಬಂಧನವಾಗಿದ್ದೇಕೆ ಎಂದು ಪ್ರಶ್ನಿಸಿದ ನ್ಯಾಯಾಲಯ, ಮತದಾನ ಮುಗಿದ ನಂತರ ಕೇಜ್ರಿವಾಲ್ ವಿರುದ್ಧ ತನಿಖೆ ನಡೆಸುವಂತೆ ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶನ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

FACT CHECK | ತಾಯಿಯೋರ್ವಳು ತನ್ನ ಮಗನಿಗೆ ನಿರ್ದಯವಾಗಿ ಹೊಡೆಯುತ್ತಿರುವ ವಿಡಿಯೋ ಕರ್ನಾಟಕದ್ದಲ್ಲ; ಏನಿದು ಪ್ರಕರಣ?

ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾಗಳಲ್ಲಿ ತಾಯಿಯೋರ್ವಳು ತನ್ನ ಮಗನಿಗೆ ನಿರ್ದಯವಾಗಿ...

ಉತ್ತರ ಪ್ರದೇಶದ ಕನ್ವರ್ ಯಾತ್ರೆಯಲ್ಲಿ ಅಂಗಡಿ ಮಾಲೀಕರ ಹೆಸರು ಪ್ರದರ್ಶಿಸಲು ಆದೇಶ: ಸುಪ್ರೀಂನಲ್ಲಿ ಅರ್ಜಿ

ಕನ್ವರ್‌ ಯಾತ್ರೆ ಯುದ್ದಕ್ಕೂ ಇರುವ ಅಂಗಡಿ ಮಾಲೀಕರು ತಮ್ಮ ಹೆಸರುಗಳನ್ನು ಕಡ್ಡಾಯವಾಗಿ...

ಬಿಜೆಪಿ ನೇತೃತ್ವದ ಸರ್ಕಾರ ಹೆಚ್ಚು ಕಾಲ ಉಳಿಯದು: ಟಿಎಂಸಿ ರ್‍ಯಾಲಿಯಲ್ಲಿ ಅಖಿಲೇಶ್, ಮಮತಾ

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು...