ಸಿಎಂ ಪ್ರಾಮಾಣಿಕರಾಗಿದ್ದರೆ ಇ.ಡಿ, ಸಿಬಿಐ ತನಿಖೆಗೆ ಸಹಕರಿಸಲಿ: ವಿಜಯೇಂದ್ರ

Date:

ಮುಖ್ಯಮಂತ್ರಿಗಳು ವಾಲ್ಮೀಕಿ ಹಗರಣದಲ್ಲಿ ಸಿಲುಕಿಹಾಕಿಕೊಂಡು ಬಹಳ ಹೆದರಿಕೊಂಡಂತೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

- Advertisement -

ವಿಧಾನಸೌಧದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ಪರಿಶಿಷ್ಟರ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ 187 ಕೋಟಿಗೂ ಹೆಚ್ಚು ಹಣವನ್ನು ಲೂಟಿ ಹೊಡೆಯಲಾಗಿದೆ. ಹೊರ ರಾಜ್ಯಕ್ಕೆ ಹಣ ವರ್ಗಾವಣೆ ಮಾಡಿ, ಲೂಟಿ ಮಾಡಿ ಹೆಂಡ ಖರೀದಿ ಮಾಡಿದ್ದು ಕೂಡ ಬಹಿರಂಗವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಇ.ಡಿ ಈ ಸಂಬಂಧ ಪ್ರಾಮಾಣಿಕ ತನಿಖೆ ಮಾಡುತ್ತಿದೆ. ಅದಕ್ಕೂ ಕಲ್ಲು ಹಾಕುವ ಪ್ರಯತ್ನ ಮಾಡಿರುವುದು ಅಕ್ಷಮ್ಯ ಅಪರಾಧ. ನೀವು ಪ್ರಾಮಾಣಿಕರೇ ಇದ್ದರೆ ತಾವೇ ರಚಿಸಿದ ಎಸ್‍ಐಟಿ, ಕೂಡಲೇ ನಾಗೇಂದ್ರರಿಗೆ ನೋಟಿಸ್ ಕೊಟ್ಟು ತನಿಖೆಗೆ ಕರೆಸಬೇಕಿತ್ತಲ್ಲವೇ? ತಕ್ಷಣ ನಿಗಮದ ಅಧ್ಯಕ್ಷ ದದ್ದಲ್ ಅವರ ತನಿಖೆಯೂ ನಡೆಯಬೇಕಿತ್ತಲ್ಲವೇ” ಎಂದು ಪ್ರಶ್ನಿಸಿದರು.

“ಕಾಂಗ್ರೆಸ್ ಸರಕಾರವು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ದುರುಪಯೋಗ ಮಾಡಿಕೊಂಡಿದೆ. ಇದರ ಕುರಿತು ಸಿಬಿಐ, ಇ.ಡಿ. ತನಿಖೆ ನಡೆಯುತ್ತಿರುವುದು ಸ್ವಾಗತಾರ್ಹ” ಎಂದು ತಿಳಿಸಿದರು.

“ಸಿಎಂ ಅವರು ಪ್ರಾಮಾಣಿಕರಾಗಿದ್ದರೆ ಇ.ಡಿ, ಸಿಬಿಐ ತನಿಖೆಗೆ ಸಹಕರಿಸಬೇಕು. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಿನ್ನೆ ಜಾರಿ ನಿರ್ದೇಶನಾಲಯದ (ಇ.ಡಿ.) ವಿರುದ್ಧ ಘೋಷಣೆ ಕೂಗಿ ಹೋರಾಟ ಮಾಡಿದ್ದಾರೆ. ರಾಜ್ಯ ಸರಕಾರ, ಮುಖ್ಯಮಂತ್ರಿಗಳ ಹಾಗೂ ಸಚಿವರ ನಡವಳಿಕೆಯನ್ನು ಗಮನಿಸಿದರೆ ನಿಜಕ್ಕೂ ಅಯ್ಯೋ ಅನಿಸುತ್ತದೆ” ಎಂದು ಲೇವಡಿ ಮಾಡಿದರು.

ದೊಡ್ಡ ದೊಡ್ಡ ತಲೆಗಳೂ ಉರುಳಲಿವೆ

“ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಕೇವಲ ನಾಗೇಂದ್ರ ಅಷ್ಟೇ ಅಲ್ಲ; ದೊಡ್ಡ ದೊಡ್ಡ ತಲೆಗಳೂ ಉರುಳಲಿವೆ. ಮುಖ್ಯಮಂತ್ರಿಗಳು ಡೆತ್ ನೋಟ್ ಓದುವಾಗ ತಮಗೆ ಬೇಕಾದ ವಿಷಯಗಳನ್ನಷ್ಟೇ ಓದಿದ್ದಾರೆ” ಎಂದು ಆಕ್ಷೇಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...