ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 25 ಸಾವಿರ ಪೌರ ಕಾರ್ಮಿಕರ ಕಾಯಂ; ಸುರ್ಜೇವಾಲ ಭರವಸೆ

Date:

  • ರಾಹುಲ್ ಗಾಂಧಿಯಿಂದ ಪೌರ ಕಾರ್ಮಿಕರ ಸಮಸ್ಯೆಗಳ ಮಾಹಿತಿ ಸಂಗ್ರಹ
  • ಬೆಂಗಳೂರಿನಲ್ಲಿ ಪೌರ ಕಾರ್ಮಿಕರೊಂದಿಗೆ ಸುರ್ಜೇವಾಲ ಸಂವಾದ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪೌರ ಕಾರ್ಮಿಕರನ್ನು ಕಾಯಂಗೊಳಿಸುತ್ತೇವೆ ಎಂದು ಎಐಸಿಸಿ ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್ ಸಿಂಗ್‌ ಸುರ್ಜೇವಾಲ ಭರವಸೆ ನೀಡಿದ್ದಾರೆ.

- Advertisement -

ರಾಜ್ಯ ವಿಧಾನಸಭಾ ಚುನಾವಣೆ ಹೊತ್ತಲ್ಲೇ ರಣದೀಪ್ ಸುರ್ಜೇವಾಲ ಪೌರ ಕಾರ್ಮಿಕರಿಗೆ ಮಹತ್ವದ ಭರವಸೆ ನೀಡಿದ್ದಾರೆ. ಸುಮಾರು 25 ಸಾವಿರ ಪೌರ ಕಾರ್ಮಿಕರನ್ನು ಕಾಯಂಗೊಳಿಸುವುದಾಗಿ ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

ಬೆಂಗಳೂರಿನಲ್ಲಿ ಪೌರ ಕಾರ್ಮಿಕರ ಜೊತೆಗೆ ಸಂವಾದ ನಡೆಸಿರುವ ಸುರ್ಜೇವಾಲ, “ನಮ್ಮ ಪರಿಸರವನ್ನು ಸ್ವಚ್ಛವಾಗಿ ಇಡುವವವರು ಇಂದು ಸಂಕಷ್ಟದಲ್ಲಿದ್ದಾರೆ. ಅವರಿಗೆ ಸಹಕಾರ ಆಗುವಂತಹ ಮತ್ತು ಬದುಕು ಸುಧಾರಿಸುವ ಅಗತ್ಯ ಕ್ರಮಗಳನ್ನು ಕಾಂಗ್ರೆಸ್ ತೆಗೆದುಕೊಳ್ಳುತ್ತದೆ” ಎಂದು ಹೇಳಿದ್ದಾರೆ.

“ಪೌರ ಕಾರ್ಮಿಕರಿಗೆ ಸರಿಯಾದ ವೇತನ ನೀಡುತ್ತೇವೆ. ಪ್ರತಿ ನೌಕರರಿಗೂ ಮೂರರಿಂದ ಹತ್ತು ಲಕ್ಷ ರೂಪಾಯಿಯ ವಿಮೆ ಮಾಡಿಸುತ್ತೇವೆ. ಪೌರ ಕಾರ್ಮಿಕರ ವಸತಿ ಸೌಲಭ್ಯ ಸೇರಿದಂತೆ ಇತರೆ ಮೂಲ ಸೌಕರ್ಯಗಳನ್ನು ಒದಗಿಸುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಾನು ಸಿಎಂ ಕುರ್ಚಿಯ ಆಕಾಂಕ್ಷಿಯಲ್ಲ : ಮಲ್ಲಿಕಾರ್ಜುನ ಖರ್ಗೆ

“ಕಳೆದ ಬಾರಿ ನಮ್ಮ ಪಕ್ಷ ಅಧಿಕಾರದಲ್ಲಿ ಇದ್ದಾಗ ಪೌರ ಕಾರ್ಮಿಕರ ಕನಿಷ್ಠ ವೇತನವನ್ನು ₹6 ಸಾವಿರದಿಂದ ₹21 ಸಾವಿರವರೆಗೆ ಹೆಚ್ಚಿಸಿದೆ” ಎಂದು ಹೇಳಿದ್ದಾರೆ.

“ಪೌರ ಕಾರ್ಮಿಕರ ಸಮಸ್ಯೆಗಳ ಕುರಿತು ರಾಹುಲ್ ಗಾಂಧಿ ಮಾಹಿತಿ ತೆಗೆದುಕೊಂಡಿದ್ದಾರೆ. ಈ ವರ್ಗದ ಸಮಗ್ರ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸಲು ಸಲಹೆ ನೀಡಿದ್ದಾರೆ. ನಾವು ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲಿಯೇ ಪೌರ ಕಾರ್ಮಿಕರ ಅನೇಕ ಬೇಡಿಕೆಗಳನ್ನು ಈಡೇರಿಸುತ್ತೇವೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...