ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಹಣ ಉಳಿಯುತ್ತದೆ: ಎಎಪಿ

Date:

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟಂತೆ ನಟಿಸಿ ಇನ್ನೊಂದು ಕೈಯಲ್ಲಿ ಜನಸಾಮಾನ್ಯರ ಹಣವನ್ನು ತೆರಿಗೆ ರೂಪದಲ್ಲಿ ಕಿತ್ತುಕೊಳ್ಳುತ್ತಿದೆ ಎಂದು ಎಎಪಿ ಪ್ರಧಾನಕಾರ್ಯದರ್ಶಿಮೋಹನ್‌ ದಾಸರಿ ಆರೋಪಿಸಿದ್ದಾರೆ.

- Advertisement -

ತೈಲ ಬೆಲೆ ಏರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಆಮ್‌ ಆದ್ಮಿ ಪಾರ್ಟಿ ಮುಖಂಡರು ಮಂಗಳವಾರ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನ ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು. ದ್ವಿಚಕ್ರ ವಾಹನಗಳಿಗೆ ಹೂವಿನ ಹಾರಗಳನ್ನು ಹಾಕಿ ಅಣುಕು ಅಂತ್ಯಕ್ರಿಯೆ ನಡೆಸುವ ಮೂಲಕ ಗಮನ ಸೆಳೆದರು. ಸೈಕಲ್‌ಗಳನ್ನು ಏರಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ವೇಳೆ ಮಾತನಾಡಿದ ಪಕ್ಷದ ಪ್ರಧಾನಕಾರ್ಯದರ್ಶಿ ಮೋಹನ್‌ ದಾಸರಿ, “ಸಮರ್ಪಕವಾಗಿ ಸಂಪನ್ಮೂಲ ಕ್ರೋಡಿಕರಣ ಮಾಡಿದರೆ, ಭ್ರಷ್ಟಾಚಾರ ಮತ್ತು ಕಮಿಷನ್‌ ದಂಧೆಯನ್ನು ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಇತರೆ ಎಲ್ಲ ರೀತಿಯ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಹಣ ಉಳಿಯುತ್ತದೆ” ಎಂದು ಮೋಹನ್‌ ದಾಸರಿ ಅಭಿಪ್ರಾಯ ವ್ಯಕ್ತಪಡಿಸಿದರು.

“ಮೇ 2023ರಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೇವಲ 1 ವರ್ಷದ ಅವಧಿಯೊಳಗೆ ಅಬಕಾರಿ ತೆರಿಗೆಯನ್ನು ಮೂರು ಬಾರಿ ಹೆಚ್ಚಿಸಿದ್ದಾರೆ. ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಗರಿಷ್ಠ ಶೇ.25 ರವರೆಗೆ ಏರಿಕೆ ಮಾಡಿದ್ದಾರೆ. ನಾನಾ ಹಂತದ ವಾಹನಗಳಿಗೆ ವಿಧಿಸುವ ತೆರಿಗೆಯನ್ನು ಹೆಚ್ಚಳ ಮಾಡಿದ್ದಾರೆ. ಬೇರೆ ಯಾವೆಲ್ಲ ಮೂಲಗಳಿಂದ ತೆರಿಗೆ ಹೆಸರಲ್ಲಿ ಜನಸಾಮಾನ್ಯರನ್ನು ಹಿಂಡಬಹುದು ಎಂದು ಹುಡುಕುತ್ತಿದ್ದಾರೆ. ಇದರರ್ಥ, ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕವಾಗಿ ಸುರಿಯುತ್ತಿರುವ ₹52 ಸಾವಿರ ಕೋಟಿ ಒದಗಿಸಲಾಗದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಒದ್ದಾಡುತ್ತಿದ್ದಾರೆ ಎಂಬುದಾಗಿದೆ. ಅಧಿಕಾರಕ್ಕೆ ಬರಬೇಕು ಎಂಬ ಹಪಾಹಪಿಯಲ್ಲಿ ಅಧ್ಯಯನ ರಹಿತವಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿರುವುದೇ ಇದಕ್ಕೆಲ್ಲ ಮೂಲ ಕಾರಣ” ಎಂದು ಆರೋಪಿಸಿದರು.

“ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ನೇತೃತ್ವದಲ್ಲಿ ಅನುಷ್ಠಾನಕ್ಕೆ ತಂದಿರುವ ಉಚಿತ ಯೋಜನೆಗಳು ಭಾರಿ ಯಶಸ್ಸು ಕಂಡಿವೆ. ಕಾರಣ, ಸಮರ್ಪಕ ಸಂಪನ್ಮೂಲ ಕ್ರೋಡೀಕರಣ, ಭ್ರಷ್ಟಾಚಾರ ರಹಿತ ಆಡಳಿತ, ಅಧ್ಯಯಶೀಲ ಉಚಿತ ಯೋಜನೆಗಳ ಅನುಷ್ಠಾನಗಳಾಗಿವೆ. ಆದರೆ, ಈ ಯೋಜನೆಗಳನ್ನು ಕಾಪಿ ಮಾಡಿದ ಕಾಂಗ್ರೆಸ್‌ ಸರ್ಕಾರ ತರಾತುರಿಯಲ್ಲಿ ನುಡಿದಂತೆ ನಡೆದಿದ್ದೇವೆ ಎಂದು ಹೇಳಿಕೊಳ್ಳುವ ಸಲುವಾಗಿ ಉಚಿತ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಭ್ರಷ್ಟಾಚಾರ, ಕಮಿಷನ್‌ ದಂಧೆ ಎಂದಿನಂತೆ ಎಗ್ಗಿಲ್ಲದೆ ಮುಂದುವರಿದಿದೆ. ಮೊದಲು ಭ್ರಷ್ಟಾಚಾರ, ಕಮಿಷನ್‌ಗಿರಿಯನ್ನು ನಿಲ್ಲಿಸಿ, ನಂತರ ಗ್ಯಾರಂಟಿ ಯೋಜನೆಗಳು ಸುಗಮವಾಗಿ ಸಾಗುತ್ತವೆ” ಎಂದು ಮೋಹನ್‌ ದಾಸರಿ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಜುಲೈ12ರಂದು ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆ

ಈ ಸಂದರ್ಭ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್‌ ಸೆಹ್ವಾನಿ, ರಾಜ್ಯ ಖಜಾಂಚಿ ಪ್ರಕಾಶ್‌ ನೆಡುಂಗಡಿ, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ, ರಾಜ್ಯ ಕಾರ್ಯದರ್ಶಿ ಉಷಾ ಮೋಹನ್‌, ರವಿ ಕುಮಾರ್‌, ಜಗದೀಶ್‌ ಚಂದ್ರ, ಜಗದೀಶ್‌ ಬಾಬು, ವೀಣಾ ಸರಾವು, ಅನಿಲ್‌ ನಾಚಪ್ಪ, ಮಹಾಲಕ್ಷ್ಮಿ, ಅಂಜನಾ ಗೌಡ, ಪುಟ್ಟಣ್ಣ, ಶಶಿಧರ್‌ ಆರಾಧ್ಯ, ರಾಮಾಂಜನೇಯ, ಲೋಕೇಶ್‌ ಕುಮಾರ್‌ ಸೇರಿದಂತೆ ಮತ್ತಿತರ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...