ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

Date:

Advertisements

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ ಮಾತನಾಡಿದರು.

“ವಾಕ್ ಸ್ವಾತಂತ್ರ್ಯ ನಮಗೆ ನಮ್ಮ‌ ಸಂವಿಧಾನ ನೀಡಿರುವ ಅತ್ಯುನ್ನತ ಮೌಲ್ಯ. ಸಂವಿಧಾನದ ಮೂರು ಅಂಗಗಳಿಗೆ ಅಪಾಯ ಬಂದರೆ ಸಮಾಜಕ್ಕೆ ಅಪಾಯ ಬಂದಂತೆ. ವಾಕ್ ಸ್ವಾತಂತ್ರ್ಯ ಆಚರಿಸುವ ಪತ್ರಿಕಾ ರಂಗಕ್ಕೆ ಯಾವ ನಿರ್ಬಂಧಗಳೂ ಇರಬಾರದು ಎನ್ನುವುದನ್ನು ಪಂಡಿತ್ ನೆಹರೂ ಅವರೂ ಬಹಳ ಒತ್ತಿ ಹೇಳಿದ್ದರು” ಎಂದರು.

Advertisements

ಸುಳ್ಳು ಸುದ್ದಿಗಳ ಅನಾಹುತಗಳಿಗೆ ಉದಾಹರಣೆ ನೀಡಿದ ಮುಖ್ಯಮಂತ್ರಿಗಳಯ, “ನಾನು ಸದನದಲ್ಲಿ ಮಾತನಾಡುವಾಗ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಡಿದ ಮಾತನ್ನು ನಾನು ಉದಾಹರಿಸಿದ್ದೆ. “ಸಾಲ ಮನ್ನಾ ಮಾಡೋದಕ್ಕೆ ನಮ್ಮ ಬಳಿ ಪ್ರಿಂಟಿಂಗ್ ಮೆಷಿನ್ ಇದೆಯಾ” ಎಂದು ಯಡಿಯೂರಪ್ಪ ಅವರು ಸದನದಲ್ಲೇ ಹೇಳಿದ್ದರು. ಈ ಮಾತನ್ನು ನಾನು ಉದಾಹರಿಸಿದ್ದೆ. ಆದರೆ ಸಾಮಾಜಿಕ ಜಾಲ ತಾಣಗಳಲ್ಲಿ ನಾನೇ ಆ ಮಾತು ಹೇಳಿದ್ದಾಗಿ ನಕಲಿ‌ ಸುದ್ದಿ ಸೃಷ್ಟಿಸಿ, ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಬೆರೆಸಿ ತಪ್ಪು ಸಂದೇಶ ಹರಡಿದರು. ಇದರಿಂದ ನಷ್ಟ ಆಗಿದ್ದು ಸಮಾಜಕ್ಕೇ ಹೊರತು ನನಗಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ

“ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ನಾವು ಕಾನೂನು ಮಾಡಿದ್ದೇವೆ. ಆದರೆ ಕೇವಲ ಕಾನೂನಿನಿಂದ ಮಾತ್ರ ಫೇಕ್ ನ್ಯೂಸ್ ತಡೆಯಲು ಸಾಧ್ಯವಿಲ್ಲ. ಇಡೀ ಸಮಾಜ ಇದರ ವಿರುದ್ಧ ಧ್ವನಿ ಎತ್ತಿದರೆ ಮಾತ್ರ ಸಾಧ್ಯ” ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ‌ಸಲಹೆಗಾರರಾದ ಕೆ.ವಿ.ಪ್ರಭಾಕರ್, ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಪುಷ್ಪಾ ಅಮರನಾಥ್, ಶಾಸಕರಾದ ರವಿಶಂಕರ್, ತನ್ವೀರ್ ಸೇಠ್, ನ್ಯೂಸ್ ಫಸ್ಟ್ ಸಿಇಒ ರವಿಕುಮಾರ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ದೀಪಕ್, ಕಾರ್ಯದರ್ಶಿ ರವಿ ಪಾಂಡವಪುರ ಸೇರಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X