ಗೂಂಡಾ ಸಿದ್ದರಾಮಯ್ಯನನ್ನು ಸಿಎಂ ಮಾಡಿದ್ರೆ ನಾವು, ನೀವು ಸಾಯುತ್ತೇವೆ: ಶಾಸಕ ಯತ್ನಾಳ್

Date:

  • ಕಾಂಗ್ರೆಸ್ಸಿಗೆ ತಾಕತ್ತಿದ್ದರೆ ಮೀಸಲಾತಿ ರದ್ದು ಮಾಡುತ್ತೇವೆಂದು ಘೋಷಿಸಲಿ : ಯತ್ನಾಳ್‌ ಸವಾಲು
  • ʼಅತಿಯಾದ ಮುಸ್ಲಿಂ ತುಷ್ಟೀಕರಣ ಮಾಡಿದ್ದರಿಂದ ಸಿದ್ದರಾಮಯ್ಯ ಕ್ಷೇತ್ರಕ್ಕಾಗಿ ಪರದಾಡುತ್ತಿದ್ದಾರೆʼ

ಸಿದ್ದರಾಮಯ್ಯ ಸಮುದಾಯದವರು ಕಾಂಗ್ರೆಸ್ ಬೆಂಬಲಿಸಬಾರದು. ನಾಳೆ ಈ ಗೂಂಡಾನನ್ನು ಸಿಎಂ ಮಾಡಿದ್ರೆ ನಾವು, ನೀವು ಸಾಯುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಕಿಡಿಕಾರಿದ್ದಾರೆ.

ವಿಜಯಪುರದಲ್ಲಿ ಸಿದ್ದರಾಮಯ್ಯ ಬಗ್ಗೆ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ವರದಿಯಾಗಿದ್ದು, “ಅತಿಯಾದ ಮುಸ್ಲಿಂ ತುಷ್ಟೀಕರಣ ಮಾಡಿದ್ದರಿಂದ ಸಿದ್ದರಾಮಯ್ಯ ಕ್ಷೇತ್ರಕ್ಕಾಗಿ ಪರದಾಡುತ್ತಿದ್ದಾರೆ. ವರುಣಾ ಕ್ಷೇತ್ರದಲ್ಲೂ ಸಿದ್ದರಾಮಯ್ಯಗೆ ಗೆಲುವು ಸುಲಭವಲ್ಲ” ಎಂದಿದ್ದಾರೆ.

“ಐದು ವರ್ಷಗಳ ಕಾಲ ಸಿಎಂ ಆಗಿದ್ದವರಿಗೆ ಇಂತಹ ಪರಿಸ್ಥಿತಿ ಬರಬಾರದಿತ್ತು. ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯರನ್ನು ಯಾವುದೇ ಕಾರಣಕ್ಕೂ ಸಿಎಂ ಮಾಡಲ್ಲ. ಕಾಂಗ್ರೆಸ್ ನಾಯಕರೇ ಸಿದ್ದರಾಮಯ್ಯರನ್ನು ಬಲಿಪಶು ಮಾಡಲಿದ್ದಾರೆ” ಎಂದು ಭವಿಷ್ಯ ನುಡಿದಿದ್ದಾರೆ.

ಮೀಸಲಾತಿ ಇವರಪ್ಪನ ಮನೆಯದ್ದಾ?

ಮೀಸಲಾತಿ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಯತ್ನಾಳ್‌, ಮುಸ್ಲಿಮರು ಮೂರು ಕಡೆಗಳಲ್ಲಿ ಮೀಸಲಾತಿ ಲಾಭ ಪಡೆಯುತ್ತಿದ್ದಾರೆ. ಮೀಸಲಾತಿ ಇವರಪ್ಪನ ಮನೆಯದ್ದಾ? ಮುಸ್ಲಿಮರಿಗೆ ಒಂದೇ ಕಡೆ ಮೀಸಲಾತಿ ಹಂಚಿಕೆ ಮಾಡಲಾಗಿದೆ. ದಲಿತ ಸಮುದಾಯಕ್ಕೆ ಇನ್ನೂ ಶೇ. 2 ರಷ್ಟು ಮೀಸಲಾತಿ ಹೆಚ್ಚು ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೀಸಲಾತಿ ರದ್ದು ಮಾಡಲಿದ್ದಾರೆ ಎಂದು ಪ್ರಶ್ನಿಸಿದಾಗ, “ಬಿಜೆಪಿಯ ಐತಿಹಾಸಿಕ ನಿರ್ಣಯದಿಂದ ಕಾಂಗ್ರೆಸ್ ಈಗ ಅಲುಗಾಡಿ ಹೋಗಿದೆ. ತಾಕತ್ತಿದ್ದರೆ ಮೀಸಲಾತಿ ರದ್ದು ಮಾಡುತ್ತೇವೆಂದು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಲಿ” ಎಂದು ಸವಾಲು ಹಾಕಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಡಿಕೆಶಿ ಜೈಲಿಗೆ ಹೋಗೋದು ಖಚಿತ: ಈಶ್ವರಪ್ಪ

ಲೋಕಸಭಾ ಚುನಾವಣೆಗೂ ಮುನ್ನ ಅಥವಾ ನಂತರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೈಲಿಗೆ...

ಶಿಗ್ಗಾವಿ | ವಿದ್ಯಾರ್ಥಿ ನಿಲಯದ ಬಾಡಿಗೆ ಕಟ್ಟಡ ಸ್ಥಳಾಂತರಕ್ಕೆ ಒತ್ತಾಯ

ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ಬಾಡಿಗೆ...

ಚಿಕ್ಕಬಳ್ಳಾಪುರ | ಅಂತರ್ಜಾತಿ ಪ್ರೇಮಿಗಳು ಕಾಣೆ; ಸಹೋದರನ ಆಟೋಗೆ ಬೆಂಕಿ ಹಚ್ಚಿದ ಸವರ್ಣೀಯರು

ಅಂತರ್ಜಾತಿಯ ಯುವಕ ತಮ್ಮ ಮಗಳನ್ನು ಪ್ರೀತಿಸಿ ಕರೆದುಕೊಂಡು ಹೋಗಿದ್ದಾನೆಂದು ಕುಪಿತಗೊಂಡ ಯುವತಿಯ...

ಸಿಎಂ ಕಚೇರಿಯ ಗಮನ ಸೆಳೆದ ಉಳ್ಳಾಲ ನಗರಸಭೆಯ ಕಸದ ವಾಹನ: ವಿಡಿಯೋ ವೈರಲ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ(ನ.27) ನಡೆಸಿದ ಜನಸ್ಪಂದನಕ್ಕೆ ಅಭೂತಪೂರ್ವವಾದ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸತತ...