‘ನಾನು ಸತ್ತರೆ ಎಎಪಿಯೇ ಕಾರಣ’: ಉಪವಾಸ ಕುಳಿತ ಬಿಜೆಪಿ ನಾಯಕ

Date:

“ನನ್ನ ವಿರುದ್ಧ ಎಎಪಿ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ನನ್ನ ಮೇಲಿನ ಎಎಪಿಯ ಆರೋಪಗಳ ವಿರುದ್ಧ ಆಮರಣಾಂತ ಉಪವಾಸ ಆರಂಭಿಸುತ್ತಿದ್ದೇನೆ. ನಾನು ಸತ್ತರೆ ಎಎಪಿಯೇ ಕಾರಣ” ಎಂದು ದೆಹಲಿಯ ಬಿಜೆಪಿ ನಾಯಕ ಶೆಹಜಾದ್ ಪೂನಾವಾಲಾ ಹೇಳಿದ್ದಾರೆ.

- Advertisement -

ತಾವು ಉಪವಾಸ ಆರಂಭಿಸಿರುವುದಾಗಿ ‘ಎಕ್ಸ್‌‘ನಲ್ಲಿ ಪೋಸ್ಟ್‌ ಮಾಡಿರುವ ಪೂನಾವಾಲಾ, “ಪ್ರೀತಿಯ ಸ್ನೇಹಿತರೇ, ನಾನು ರುತುರಾಜ್ ಝಾ ವಿರುದ್ಧ ಅಸಭ್ಯವಾಗಿ ಮಾತನಾಡಿದ್ದೇನೆ ಎಂದು ಎಎಪಿ ಆರೋಪಿಸಿದೆ. ತಿರುಚಿದ ವಿಡಿಯೋವನ್ನು ಹಂಚಿಕೊಂಡು ಅಪಪ್ರಚಾರ ಮಾಡುತ್ತಿದೆ. ಎಎಪಿ ನನ್ನ ವಿರುದ್ಧ ಸುಳ್ಳುಗಳನ್ನು ಹರಡುತ್ತಿದೆ. ತೇಜೋವಧೆ ಮಾಡಿದೆ. ನಾನು ಯಾರನ್ನಾದರೂ ನಿಂದಿಸಿದ್ದೇನೆ ಎಂಬುದನ್ನು ಎಎಪಿ ಸಾಬೀತುಮಾಡಬೇಕು. ಅಲ್ಲಿಯವರೆಗೆ ಆಮರಣಾಂತ ಉಪವಾಸ ಮಾಡುತ್ತೇನೆ. ನಾನು ಸತ್ತರೆ ಅದಕ್ಕೆ ಎಎಪಿ ಜವಾಬ್ದಾರಿ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ನಾನು ಮುಸ್ಲಿಂ ಎಂಬ ಕಾರಣಕ್ಕೆ ಎಎಪಿ ನನ್ನನ್ನು ಗುರಿ ಮಾಡಿಕೊಂಡಿದೆ. ಟಿವಿ ಚರ್ಚೆಯ ಸಮಯದಲ್ಲಿ ಸೆರೆಹಿಡಿದ ವಿಡಿಯೋವನ್ನು ಎಡಿಟ್ ಮಾಡಿ ಎಎಪಿ ಹಂಚಿಕೊಂಡಿದೆ. ಅದು ತಿರುಚಿದ ವಿಡಿಯೋ ಎಂಬುದಕ್ಕೆ ಚರ್ಚೆಯ ಸಮಯದಲ್ಲಿ ಹಾಜರಿದ್ದ ಪತ್ರಕರ್ತ ಮತ್ತು ನಿರೂಪಕರೇ ಸಾಕ್ಷಿ” ಎಂದು ಹೇಳಿದ್ದಾರೆ.

“ನಾನು ಎಎಪಿ ಕಚೇರಿ ಎದುರು ಉಪವಾಸ ಕೂರುತ್ತೇನೆ. ನನ್ನ ವಿರುದ್ದದ ಆರೋಪವನ್ನು ಎಎಪಿ ಸಾಬೀತು ಮಾಡಬೇಕು. ಇಲ್ಲವೆ, ಕ್ಷಮೆ ಕೇಳಬೇಕು” ಎಂದಿದ್ದಾರೆ.

ದೆಹಲಿಯಲ್ಲಿ ಫೆಬ್ರವರಿ 5ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಆಡಳಿತಾರೂಢ ಎಎಪಿ 3ನೇ ಬಾರಿಗೆ ಅಧಿಕಾರ ಪಡೆಯಲು ಕಸರತ್ತು ನಡೆಸುತ್ತಿದೆ. ಎಎಪಿಯಿಂದ ಅಧಿಕಾರ ಕಿತ್ತುಕೊಳ್ಳಲು ಬಿಜೆಪಿ ಹವಣಿಸುತ್ತಿದೆ. ಎಎಪಿ ವಿರುದ್ಧ ಬಿಜೆಪಿ ನಾಯಕರು ದ್ವೇಷಪೂರಿತ ಭಾಷಣಗಳೊಂದಿಗೆ ಪ್ರಚಾರ ಮಾಡುತ್ತಿದ್ದಾರೆ. ಕಳೆದ 10 ವರ್ಷಗಳಲ್ಲಿ ತನ್ನ ನೆಲೆ ಕಳೆದುಕೊಂಡಿರುವ ಕಾಂಗ್ರೆಸ್‌, ಮರಳಿ ನೆಲೆ ಪಡೆಯಲು ಯತ್ನಿಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...