ಟಿಕೆಟ್‌ ಸಿಗಲಿಲ್ಲ ಎಂದರೆ ನನ್ನ ಹಾದಿ ನಾನು ನೋಡಿಕೊಳ್ಳುವೆ : ಬಿ ಸಿ ಪಾಟೀಲ್‌

Date:

ಒಬ್ಬ ಗ್ರಾಮ ಪಂಚಾಯತಿ ಸದಸ್ಯ ತನ್ನ ಸ್ಥಾನ ತ್ಯಾಗ ಮಾಡಲ್ಲ. ಅಂತಹದರಲ್ಲಿ ನಾವು ತ್ಯಾಗ ಮಾಡಿದೀವಿ. ನಾನು ಈಗ ಸೋತು ಮನೆಯಲ್ಲಿ ಕುಳಿತುಕೊಂಡಿದ್ದೇನೆ. ನನಗಂತೂ ಟಿಕೆಟ್‌ ಕೊಡಬೇಕು ಅಷ್ಟೇ ಎಂದು ಮಾಜಿ ಸಚಿವ ಬಿ ಸಿ ಪಾಟೀಲ್‌ ಆಗ್ರಹಿಸಿದರು.

ಹಾವೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ನಮಗೆ ಕೊಡುವುದರಲ್ಲಿ ನ್ಯಾಯ ಇದೆ. ನಮ್ಮ ತ್ಯಾಗದಿಂದ ಸರ್ಕಾರ ಬಂತು. 2023ರಲ್ಲಿ ಬಿಜೆಪಿ ಯಾಕೆ ಸೋತಿತು ಎಂದು ಎಲ್ಲರಿಗೂ ಗೊತ್ತು. ನಾವೆಲ್ಲಾ ಸೋತಿದ್ದೇವೆ, ನಮ್ಮ ಹಿತವನ್ನೂ ಅವರು ಕಾಯಲಿ. ಅದರ ಜವಾಬ್ದಾರಿ ಅವರಿಗೆ ಇದೆ ಅಲ್ವಾ” ಎಂದು ಪ್ರಶ್ನಿಸಿದರು.

“ನಮಗೆ ಹೆದರಿಸುವುದು ಬೆದರಿಸುವುದು ಗೊತ್ತಿಲ್ಲ. ಸೈಲೆಂಟ್ ಇದ್ದೇವೆ ಎಂದರೆ ಅದು ನಮ್ಮ ದೌರ್ಬಲ್ಯ ಅಂತ ಭಾವಿಸಬಾರದು. ಈಗಾಗಲೇ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾರೆ. ನಾನು ಹಾವೇರಿ – ಗದಗ ಜಿಲ್ಲೆಗಳ ಉಸ್ತುವಾರಿ ಆಗಿ ಕೆಲಸ ಮಾಡಿದ್ದೇನೆ. ನನಗೆ ಟಿಕೆಟ್ ಕೊಡಬೇಕು” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ʼಮಹಿಳಾ ದಿನʼ ಅರ್ಥಪೂರ್ಣವಾಗೋದು ಆಕೆಗೆ ಘನತೆಯಿಂದ ಬದುಕಲು ಬಿಟ್ಟಾಗ ಮಾತ್ರ

“ಟಿಕೆಟ್‌ ವಿಚಾರವಾಗಿ ಬಿ ವೈ ವಿಜಯೇಂದ್ರ ಹಾಗೂ ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿಯಾಗಿದೀನಿ. ನಾನು ಟಿಕೆಟ್ ಬೆನ್ನತ್ತಿಕೊಂಡು ಹೋಗುವವನಲ್ಲ. ನನಗೆ ಟಿಕೆಟ್‌ ಕೊಡಬೇಕು ಅಂತ ವಾದ ಮಾಡುತ್ತಿದ್ದೇನೆ ಅಷ್ಟೇ” ಎಂದು ಹೇಳಿದರು.

ನನಗೆ ನಂದೇ ಹಾದಿ ಇದೆ

“ಟಿಕೆಟ್‌ ಸಿಗಲಿಲ್ಲ ಎಂದರೆ ಕಾರ್ಯಕರ್ತರ ಜೊತೆ ಮಾತಾಡ್ತೀನಿ. ನನಗೆ ನಂದೇ ಹಾದಿ ಇದೆ. ಆ ಪ್ರಕಾರ ನಡೆಯುವೆ. ನನಗೆ ಶಿವರಾಮ್‌ ಹೆಬ್ಬಾರ್‌, ಎಸ್‌ಟಿ ಸೋಮಶೇಖರ್ ಹಾದಿ ಬೇಕಾಗಿಲ್ಲ” ಎಂದು ಬಂಡಾಯದ ಸೂಚನೆಯ ಮಾತುಗಳನ್ನು ಆಡಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ ಪರಿಹಾರ | ಕೇಳಿದ್ದು 18 ಸಾವಿರ ಕೋಟಿ – ಕೊಟ್ಟಿದ್ದು 3 ಸಾವಿರ ಕೋಟಿ; ಬಿಜೆಪಿ ವಿರುದ್ಧ ನೆಟ್ಟಿಗರ ಕಿಡಿ

ರಾಜ್ಯದಲ್ಲಿ ತೀವ್ರ ಬರ ಎದುರಾಗಿದ್ದರೂ, ರಾಜ್ಯಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...

2ನೇ ಹಂತದ ಚುನಾವಣೆ | ಮತಗಟ್ಟೆಗೆ ಬಾರದ ಹೆಚ್ಚಿನ ಮತದಾರರು; ಬಿಜೆಪಿ ವಿರೋಧಿ ಅಲೆಯ ಸೂಚನೆಯೇ?

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಮುಗಿದಿದೆ. 13 ರಾಜ್ಯಗಳ...