ಸಂವಿಧಾನ ಬದಲಿಸುವ ಹೇಳಿಕೆ ನೀಡಿದ್ದರೆ ಇಂದೇ ರಾಜಕೀಯ ನಿವೃತ್ತಿ ಪಡೆಯುವೆ: ಡಿ ಕೆ ಶಿವಕುಮಾರ್

Date:

Advertisements

ನಾನು ಸಂವಿಧಾನ ಬದಲಿಸುತ್ತೇನೆ ಎಂದು ಹೇಳಿದ್ದರೆ ಇಂದೇ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ನನ್ನ ಹೇಳಿಕೆ ತೆಗೆಸಿ ನೋಡಲಿ. ಬಿಜೆಪಿ ಅವರ ಆರೋಪದಲ್ಲಿ ಯಾವ ಅರ್ಥವೂ ಇಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಬೆಂಗಳೂರಿನ ಕುಮಾರಪಾರ್ಕ್‌ನಲ್ಲಿರುವ ಸರಕಾರಿ ಗೃಹ ಕಚೇರಿಯಲ್ಲಿ ಸುದ್ದಿಗಾರರು, “ಸಂವಿಧಾನ ಬದಲಾವಣೆ ವಿಚಾರವಾಗಿ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ” ಎಂದು ಕೇಳಿದಾಗ ಉತ್ತರಿಸಿದ ಅವರು, “ನನಗೆ ತಲೆಕೆಟ್ಟಿಲ್ಲ. ನಾನು ಸಂದರ್ಶನದಲ್ಲಿ ಸತ್ಯ ಮಾತನಾಡಿರುವುದನ್ನು ಹಾಗೂ ನನ್ನ ರಾಜಕೀಯ ನಿಲುವನ್ನು ನೋಡಿ ಬಿಜೆಪಿಯವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ನಾನು ಸಂವಿಧಾನ ಬದಲಿಸುತ್ತೇನೆ ಎಂದು ಎಲ್ಲಿ ಹೇಳಿದ್ದೇನೆ” ಎಂದು ಪ್ರಶ್ನಿಸಿದರು.

“ಸಂವಿಧಾನ ಜಾರಿಗೆ ತಂದವರು ನಾವು, ನಾವು ಅದನ್ನು ರಕ್ಷಣೆ ಮಾಡುತ್ತಿದ್ದೇವೆ. ಬಿಜೆಪಿಯವರು ತಮ್ಮ ಹುಳುಕುಗಳನ್ನು ಮುಚ್ಚಿಹಾಕಲು ಈ ವಿಚಾರ ಪ್ರಸ್ತಾಪಿಸಿದ್ದಾರೆ. ನಮ್ಮ ನಾಯಕರು ದಡ್ಡರಲ್ಲ, ನಾನು ಏನು ಮಾತನಾಡಿದ್ದೇನೆ ಎಂದು ಅವರು ನೋಡಿದ್ದಾರೆ. ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿರುವುದು ಬಿಜೆಪಿ ಪಕ್ಷದ ನಾಯಕರು” ಎಂದರು.

Advertisements

ಮೇಕೆದಾಟು : ನ್ಯಾಯ ಸಿಗಲಿದೆ

ಮೇಕೆದಾಟು ಯೋಜನೆಗೆ ಅವಕಾಶ ನೀಡುವುದಿಲ್ಲ ಎಂಬ ತಮಿಳುನಾಡು ಸಚಿವ ದೊರೈ ಮುರುಗನ್ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ನೀರು ನಮ್ಮ ಹಕ್ಕು. ಅವರು ಅವರದೇ ಆದ ರಾಜಕೀಯ ನಿಲುವು ತೆಗೆದುಕೊಂಡಿದ್ದಾರೆ. ಈ ಹಿಂದೆ ಅನೇಕ ಬಾರಿ ಜೆ.ಎಚ್. ಪಟೇಲ್ ಅವರು ಮುಖ್ಯಮಂತ್ರಿಯಾಗಿದ್ದಾಗ ಹೋಗಿ ಮಾತುಕತೆ ಮಾಡಲಾಗಿತ್ತು. ನಾವು ಈ ವಿಚಾರದಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದು, ಅಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ. ನ್ಯಾಯಾಲಯದ ತೀರ್ಪಿಗೆ ಯಾರೂ ಅಡ್ಡಿ ಮಾಡಲು ಸಾಧ್ಯವಿಲ್ಲ. ಅವರು ತಮ್ಮ ವಾದ ಮಾಡಲಿ, ನಾವು ನಮ್ಮ ವಾದ ಮಂಡಿಸುತ್ತೇವೆ. ಮೇಕೆದಾಟು ವಿಚಾರವಾಗಿ ನಾವು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯ ಸಿಗುವ ವಿಶ್ವಾಸವಿದೆ” ಎಂದು ತಿಳಿಸಿದರು.

ಮೇಕೆದಾಟು ಯೋಜನೆ ಡಿಪಿಆರ್ ಸಲ್ಲಿಕೆ ಮಾಡಿಲ್ಲ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಡಿಪಿಆರ್ ಸಲ್ಲಿಕೆ ಮಾಡಲಾಗಿದೆ. ಈ ಯೋಜನೆ ಜಾರಿಗೆ ನಾವು ಬದ್ಧವಾಗಿದ್ದೇವೆ. ಕೇಂದ್ರ ಸರ್ಕಾರಕ್ಕೂ ಪ್ರಸ್ತಾವನೆ ಸಲ್ಲಿಸಿದ್ದು, ನ್ಯಾಯಾಲಯದಲ್ಲಿಯೂ ಹೋರಾಟ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ತಮಿಳುನಾಡು ಸಿಎಂ ನಿಮ್ಮ ಸ್ನೇಹಿತರು, ಅವರನ್ನು ಒಪ್ಪಿಸಿ ಈ ಯೋಜನೆ ಜಾರಿ ಮಾಡಿ ಎಂಬ ಬಿಜೆಪಿ ಆಗ್ರಹದ ಬಗ್ಗೆ ಕೇಳಿದಾಗ, “ತಮಿಳುನಾಡಿನವರು ಅವರದೇ ಆದ ರಾಜಕೀಯ ನಿಲುವು ತೆಗೆದುಕೊಂಡಿದ್ದಾರೆ. ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ಕೈ ಹಿಡಿದು ಒಪ್ಪಿಗೆ ಕೊಡಿಸುವುದಾಗಿ ಹೇಳಿದ್ದರು. ಅವರು ಯಾಕೆ ಕೊಡಿಸುತ್ತಿಲ್ಲ. ರಾಜಕೀಯದಲ್ಲಿ ಅನೇಕ ಒತ್ತಡಗಳಿರುತ್ತವೆ. ಈ ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದೆ. ಸಮುದ್ರಕ್ಕೆ ವ್ಯರ್ಥವಾಗಿ ಹೋಗುತ್ತಿರುವ ನೀರನ್ನು ಸಂಗ್ರಹಿಸಲು ನೆರವಾಗಲಿದೆ. ಹೀಗಾಗಿ ಈ ಯೋಜನೆಗೆ ಸಹಕಾರ ನೀಡಿ ಎಂದು ತಮಿಳುನಾಡಿನವರಿಗೆ ಮನವಿ ಮಾಡುತ್ತೇನೆ. ಕೃಷ್ಣಾ ನೀರು ಸಂಬಂಧ ಆಂಧ್ರ ಪ್ರದೇಶ ಸಿಎಂ ಜತೆ ಚರ್ಚೆಗೆ ದಿನಾಂಕ ಕೇಳಿದ್ದು, ಅವರು ದಿನಾಂಕ ನಿಗದಿ ಮಾಡಿದ ಬಳಿಕ ಹೋಗಿ ಭೇಟಿ ಮಾಡುವೆ” ಎಂದು ತಿಳಿಸಿದರು.

ನಿರ್ಮಲಾನಂದ ಶ್ರೀಗಳ ಫೋನ್ ಟ್ಯಾಪಿಂಗ್ ಪ್ರಕರಣದ ಸಿಬಿಐ ವರದಿ ಏನಾಯ್ತು?

ಫೋನ್ ಟ್ಯಾಪಿಂಗ್ ವಿಚಾರ ಮತ್ತೆ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ, “ನಾನು ಜೈಲಲ್ಲಿ ಇದ್ದಾಗ, ನಮ್ಮ ನಿರ್ಮಲಾನಂದ ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ನಡೆದಿದೆ ಎಂಬ ಸುದ್ದಿ ಓದಿದ್ದೆ. ಅದಾದ ನಂತರ ತನಿಖೆ, ಏನೇನೋ ನಡೆಯಿತು. ಈ ವಿಚಾರವಾಗಿ ಸಿಬಿಐ ತನಿಖೆ ಮಾಡಿತ್ತು. ಬಿಜೆಪಿಯವರು ಸಿಬಿಐ ವರದಿಯನ್ನು ಪ್ರಕಟಿಸಲಿ, ಆಮೇಲೆ ಮಿಕ್ಕ ವಿಚಾರ ಮಾತನಾಡೋಣ” ಎಂದರು.

ಸಿಎಂ, ಗೃಹಮಂತ್ರಿಗಳಿಂದ ಎಲ್ಲರಿಗೂ ನ್ಯಾಯ

ರಾಜಣ್ಣ ಅವರು ಹನಿಟ್ರ್ಯಾಪ್ ವಿಚಾರವಾಗಿ ಗೃಹ ಮಂತ್ರಿಗೆ ದೂರು ನೀಡಲು ಮುಂದಾಗಿದ್ದಾರಲ್ಲ ಎಂದು ಕೇಳಿದಾಗ, “ಗೃಹ ಸಚಿವರು ಬಹಳ ಹಿರಿಯರು. ಅವರಿಗೆ ಪಕ್ಷ ನಡೆಸಿ, ಜತೆಗೆ ಸರ್ಕಾರದಲ್ಲೂ ಅನುಭವವಿದೆ. ಅವರು ಹಾಗೂ ಮುಖ್ಯಮಂತ್ರಿಗಳು ಎಲ್ಲಾ ರೀತಿಯ ತನಿಖೆ ನಡೆಸುವುದಾಗಿ ಸದನದಲ್ಲಿ ಹೇಳಿದ್ದು, ರಾಜಣ್ಣ ಅವರಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಯಾವ ರೀತಿ ನ್ಯಾಯ ಒದಗಿಸಬೇಕೋ ಒದಗಿಸುತ್ತಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X