ನೀಟ್ ರದ್ದು ಮಾಡಿದರೆ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ: ಶಿಕ್ಷಣ ಸಚಿವ

Date:

ನೀಟ್‌ ವಿಚಾರವಾಗಿ ತೀವ್ರ ವಿವಾದ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ತನಿಖೆ ನಡೆಯುತ್ತಿದೆ. ಅದಾಗ್ಯೂ, ವೈದ್ಯಕೀಯ ಪ್ರವೇಶ ಪರೀಕ್ಷೆ (ನೀಟ್)ಅನ್ನು ರದ್ದುಗೊಳಿಸದಿರಲು ಸರ್ಕಾರ ನಿರ್ಧರಿಸಿದೆ. ಸರ್ಕಾರದ ನಿಲುವನ್ನು ವಿವರಿಸಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, “ಪ್ರಶ್ನೆಪತ್ರಿಕೆ ಸೋರಿಕೆಯು ಸೀಮಿತ ಸಂಖ್ಯೆಯ ವಿದ್ಯಾರ್ಥಿಗಳ ಮೇಲೆ ಮಾತ್ರ ಪರಿಣಾಮ ಬೀರಿದೆ. ಆದರೆ, ನೀಟ್‌ಅನ್ನು ರದ್ದುಗೊಳಿಸಿದರೆ, ನ್ಯಾಯವಾಗಿ ಪರೀಕ್ಷೆ ಬರೆದು, ಉತ್ತೀರ್ಣರಾದ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ” ಎಂದಿದ್ದಾರೆ.

- Advertisement -

2004 ಮತ್ತು 2015ರಲ್ಲಿಯು ಪ್ರಶ್ನೆಪತ್ರಿಕೆ ಸೋರಿಕೆಯಾಗಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿತ್ತು. ಆದರೆ, ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಕೆಲ ವಿದ್ಯಾರ್ಥಿಗಳ ಮೇಲೆ ಮಾತ್ರ ಪರಿಣಾಮ ಬೀರಿದೆ. ಪರೀಕ್ಷೆಯನ್ನು ರದ್ದುಗೊಳಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದ್ದು, ನ್ಯಾಯಾಲಯವು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಸರ್ಕಾರ ಬದ್ದವಾಗಿರುತ್ತದೆ ಎಂದು ಅವರು ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅವ್ಯವಹಾರಗಳು ಮತ್ತು ಅಕ್ರಮಗಳನ್ನು ತಡೆಯಲು ಕಠಿಣ ಕಾನೂನುಗಳ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಶುಕ್ರವಾರ ಹೊರಡಿಸಿದೆ. ಆಪಾದಿತ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅದಕ್ಕೆ ಸಂಬಂಧಿಸಿದ ಅವ್ಯವಹಾರಗಳ ಬಗ್ಗೆ ಚರ್ಚೆಗಳು, ಪ್ರತಿಭಟನೆಗಳು ನಡೆಯುತ್ತಿರುವ ಹಾಗೂ ನೆಟ್‌ ಪರೀಕ್ಷೆ ರದ್ದಾಗಿರುವ ಸಮಯದಲ್ಲಿ ಅಧಿಸೂಚನೆ ಹೊರಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...