ಶಾಂತಿ-ಸುವ್ಯವಸ್ಥೆ ಹದಗೆಟ್ಟರೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆ: ಸಿಎಂ ಸಿದ್ದರಾಮಯ್ಯ

Date:

Advertisements
  • ಸಾಮಾಜಿಕ ಶಾಂತಿ ಸುವ್ಯವಸ್ಥೆ ಕದಡದಂತೆ ಕಟ್ಟೆಚ್ಚರದ ಕ್ರಮ
  • ಸಂಚಾರ ದಟ್ಟಣೆ, ಸೈಬರ್ ಕ್ರೈಮ್ ನಿಯಂತ್ರಣಕ್ಕೆ ಆದ್ಯತೆ ನೀಡಿ

ರಾಜ್ಯದಲ್ಲಿನ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಇನ್ನಷ್ಟು ಕಾರ್ಯೋನ್ಮುಖರಾಗಬೇಕು. ಒಂದು ವೇಳೆ ಈ ವಿಚಾರದಲ್ಲಿ ಎಡವಿದರೆ ಅವರನ್ನೇ ಅದರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಡಿಸಿಎಂ ಶಿವಕುಮಾರ್ ಜೊತೆಗೂಡಿ ಸಭೆ ನಡೆಸಿದ ಅವರು ಅಗತ್ಯ ಕಿವಿಮಾತುಗಳನ್ನು ಹೇಳಿದರು.

ಪೊಲೀಸರು ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

Advertisements

ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದ ಅವರು ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ ಕುರಿತು ಪ್ರತ್ಯೇಕ ಸಭೆ ನಡೆಸಿ ಚರ್ಚಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯವನ್ನು ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು ಎಂದು ಸೂಚಿಸಿದರು.

ಪೊಲೀಸ್ ಠಾಣೆಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಪೊಲೀಸ್ ಠಾಣೆಗೆ ಸಮಸ್ಯೆ ಪರಿಹಾರಕ್ಕಾಗಿ ಬರುವ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು ಎಂದು ಸಿಎಂ ನಿರ್ದೇಶನ ನೀಡಿದರು.

ಈ ಸುದ್ದಿ ಓದಿದ್ದೀರಾ?: ಈ ದಿನ ಸಂಪಾದಕೀಯ | ತೃತೀಯ ರಂಗಕ್ಕೆ ಶಕ್ತಿ ತುಂಬಲಿದೆಯೇ ಕರ್ನಾಟಕದ ಗೆಲುವು?

ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್ ಗಳ ಚಟುವಟಿಕೆಗಳು, ಡ್ರಗ್ ಮಾಫಿಯಾವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಸಿದರು.

ಉತ್ತಮವಾಗಿ ಕೆಲಸ ಮಾಡುವವರಿಗೆ ಶಹಬ್ಬಾಶ್‌ಗಿರಿ ನೀಡುತ್ತೇವೆ. ಕರ್ತವ್ಯಲೋಪ ಎಸಗಿದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳುವುದಾಗಿ ಸಿಎಂ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X