ಸಿದ್ದರಾಮಯ್ಯ ಹೆರಿಗೆ ವಾರ್ಡ್‌ನಲ್ಲಿ ಕಿರುಚಿದರೆ ಹೆರಿಗೆಯೇ ಆಗಿಬಿಡುತ್ತದೆ: ಸಂಸದ ಶ್ರೀನಿವಾಸ ಪ್ರಸಾದ್ ಲೇವಡಿ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಸುಮ್ಮನೆ ಬಾಯಿಗೆ ಬಂದಂತೆ ಕಿರುಚುವುದನ್ನು ಕಲಿತಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ಜೊತೆ ಹೋಲಿಕೆ ಮಾಡುವ ವ್ಯಕ್ತಿ ಸಿದ್ದರಾಮಯ್ಯನದ್ದು ಅಲ್ಲ ಎಂದು ಚಾಮರಾಜನಗರದ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಲೇವಡಿ ಮಾಡಿದರು.

ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯ ಬಾವಿಯೊಳಗಿನ ಕಪ್ಪೆ. ಪ್ರಧಾನಿ ನರೇಂದ್ರ ಮೋದಿ ಸಮುದ್ರದಲ್ಲಿ ಈಜಿದ ಮನುಷ್ಯ. ಅವರಿಗೂ – ಇವರಿಗೂ ಹೋಲಿಕೆ ಎಲ್ಲಿದೆ” ಎಂದು ಪ್ರಶ್ನಿಸಿದರು.

“ಸಿದ್ದರಾಮಯ್ಯಗೂ – ಜಮೀರ್‌ಗೂ ಯಾವುದೇ ವ್ಯತ್ಯಾಸ ಇಲ್ಲ. ಇಬ್ಬರೂ ಸುಮ್ಮನೆ ಕೂಗುತ್ತಾರೆ. ಇವರು ಹೆರಿಗೆ ವಾರ್ಡ್‌ನಲ್ಲಿ ಕಿರುಚಿದರೆ ಹೆರಿಗೆಯೇ ಆಗಿಬಿಡುತ್ತದೆ. ಆ ರೀತಿಯಲ್ಲಿ ಕೂಗುವುದನ್ನು ಕಲಿತಿದ್ದಾರೆ” ಎಂದು ವ್ಯಂಗ್ಯವಾಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರ ತುಷ್ಟೀಕರಣ, ಬಿಜೆಪಿ ಮತ್ತು ಗೋದಿ ಮೀಡಿಯಾ

“ನಮ್ಮ ತೆರಿಗೆ ನಮ್ಮ ಹಕ್ಕು ಎಂದೆಲ್ಲಾ ದೆಹಲಿಗೆ ಹೋಗಿ ಪ್ರತಿಭಟನೆ ಮಾಡಿದ್ದಾರೆ. ಕೇಳುವ ರೀತಿಯಲ್ಲಿ ಕೇಳಿದರೆ ನಮ್ಮ ತೆರಿಗೆ ಬರುತ್ತದೆ. ಯಾವ ಸರ್ಕಾರವೂ ನಮಗೆ ಅನ್ಯಾಯ ಮಾಡುವುದಿಲ್ಲ. ನಾನು ಹಿಂದೆ ಕಂದಾಯ ಸಚಿವ ಆಗಿದ್ದಾಗ ಹೋಗಿ ಕೇಳಿದ್ದಕ್ಕೆ ನಮ್ಮ ಹಣ ನಮಗೆ ಬಂದಿತ್ತು” ಎಂದು ಕೇಂದ್ರ ಸರ್ಕಾರ ನಡೆಯನ್ನು ಸಮರ್ಥಿಸಿಕೊಂಡರು.

“ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಗ್ಗೆ, ರಾಷ್ಟ್ರಪತಿ ಬಗ್ಗೆ ಬಾಯಿಗೆ ಬಂದಂತೆ ಸಿದ್ದರಾಮಯ್ಯ ಮಾತನಾಡುತ್ತಾರೆ. ಇಂತಹ ಸಿದ್ದರಾಮಯ್ಯ ಬಗ್ಗೆ ಏನು ಹೇಳಲಿ? ಗ್ಯಾರಂಟಿಗಳಿಂದ ಗೆದ್ದು ಅದೇ ಗುಂಗಿನಲ್ಲಿ ಕಾಂಗ್ರೆಸ್‌ನವರು ಇದ್ದಾರೆ. ಮೋದಿ ಸರ್ಕಾರ ಮಾಡಿರುವ ಜನಪರ ಯೋಜನೆಗಳ ಮುಂದೆ ಕಾಂಗ್ರೆಸ್‌ನವರ ಆಟ ನಡೆಯುವುದಿಲ್ಲ” ಎಂದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತಗಟ್ಟೆಯ ಮತದಾನದ ಅಂಕಿಅಂಶ ನೀಡುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಲು ಸುಪ್ರೀಂ ನಕಾರ

ಪ್ರತಿ ಮತಗಟ್ಟೆಯ ಮತದಾನದ ಅಂಕಿಅಂಶಗಳನ್ನು ಒದಗಿಸುವ ಫಾರ್ಮ್‌ 17ಸಿ ಪ್ರತಿಗಳನ್ನು ತನ್ನ...

ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲು; ಸಿಎಂಗೆ ಅಭಿನಂದನೆ ಸಲ್ಲಿಸಿದ ಉಡಚಪ್ಪ ಮಾಳಗಿ

ರಾಜ್ಯದಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀಡುವ ಸಂಬಂಧ ಅಧಿಕೃತ ಆದೇಶ ಹೊರಡಿಸಲು...

ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್ ರದ್ದುಗೊಳಿಸಲು ಪ್ರಕ್ರಿಯೆ ಆರಂಭ: ಸಚಿವ ಪರಮೇಶ್ವರ್‌

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವ ಕುರಿತು ನಾವು...

ಬೆಂಗಳೂರು | ಪ್ರಭುದ್ಯಾ ಕೊಲೆ ಪ್ರಕರಣ; 2 ಸಾವಿರಕ್ಕಾಗಿ ಕೊಲೆಗೈದು ಆತ್ಮಹತ್ಯೆ ಎಂದು ಬಿಂಬಿಸಿದ ಅಪ್ರಾಪ್ತ

ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ಬೆಂಗಳೂರಿನ ಸುಬ್ರಹ್ಮಣ್ಯಪುರ...