ಸೋಮಶೇಖರ್, ಹೆಬ್ಬಾರ್ ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ: ಸಿಎಂ ಸಿದ್ದರಾಮಯ್ಯ

Date:

Advertisements

ಎಸ್ ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಅವರನ್ನು ಸ್ವಾಗತಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶಿರಸಿಯಲ್ಲಿ ಮಂಗಳವಾರ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, “ಈ ಹಿಂದೆ ಕಾಂಗ್ರೆಸ್ ನಲ್ಲಿದ್ದವರಿಗೆ ಬಿಜೆಪಿಗೆ ಹೋದ ಮೇಲೆ ಬೇಸರವಾಗಿದೆ” ಎಂದರು.

ಬಾಂಬ್ ಸ್ಪೋಟ; ತನಿಖೆ ನಡೆಯುತ್ತಿದೆ

Advertisements

ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, “ನನಗೆ ಯಾವುದೇ ಬೆದರಿಕೆ ಬಂದಿಲ್ಲ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟವಾಗಿದೆ. ಇದರ ಬಗ್ಗೆ ಪೊಲೀಸರು, ಸಿಸಿಬಿ ಹಾಗೂ ಎನ್ ಐ ಎಯವರು ಸೂಕ್ತ ತನಿಖೆ ನಡೆಸುತ್ತಿದ್ದಾರೆ. ಸ್ಪೋಟದ ಬಗ್ಗೆ ಕೆಲವು ಸುಳಿವುಗಳು ಸಿಕ್ಕಿದ್ದು, ಎನ್ ಐ ಎಯವರು ಐವರನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ” ಎಂದರು.

ದೇಶದ್ರೋಹಿಗಳು ಯಾರು

“ಪಾಕ್ ಪರ ಘೋಷಣೆ ಪ್ರಕರಣದ ಎಫ್ ಎಸ್ ಎಲ್ ವರದಿಯನ್ನು ಕಾಂಗ್ರೆಸ್ ಸರ್ಕಾರ ತಿಳಿಸುತ್ತಿಲ್ಲ ಎಂಬ ಬಿಜೆಪಿಯವರ ಟೀಕೆಗೆ ಉತ್ತರಿಸುತ್ತಾ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಾಕ್ ಪರ ಘೋಷಣೆಗಳನ್ನು ಕೂಗಿದ್ದರು. ಆಗ ಆ ಸರ್ಕಾರ ಪ್ರಕರಣವನ್ನೇ ವಜಾಗೊಳಿಸಿದ್ದರು. ಆ ಪ್ರಕರಣಕ್ಕೆ ಸಂಬಂಧಿಸಿದವರನ್ನು ಬಂಧಿಸಲಾಗಿದೆ. ಇದರಿಂದ ಯಾರು ದೇಶದ್ರೋಹಿಗಳು ಎಂದು ತಿಳಿಯುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಬ್ಬರಿ ಖರೀದಿ, ಅಧಿಕಾರಿಗಳ ಅಸಡ್ಡೆ, ಅನ್ನದಾತ ಅನಾಥ

ಲೋಕಸಭೆ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಶೀಘ್ರ

“ಲೋಕಸಭೆ ಚುನಾವಣಾ ಅಭ್ಯರ್ಥಿಗಳ ಘೋಷಣೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲವಿಲ್ಲ. ಪಟ್ಟಿಯನ್ನು ಆದಷ್ಟು ಬೇಗ ಪ್ರಕಟಿಸಲಾಗುವುದು” ಎಂದರು.

ಅನಂತಕುಮಾರ್ ಹೆಗಡೆಯವರಿಗೆ ಸಂಸ್ಕೃತಿ ಇಲ್ಲ

ಉತ್ತರಕನ್ನಡ ಸಂಸದ ಅನಂತಕುಮಾರ್ ಹೆಗಡೆ ಅವರು ಮುಖ್ಯಮಂತ್ರಿಗಳನ್ನು ಅಗೌರವದಿಂದ ಮಾತನಾಡುವ ಬಗ್ಗೆ ಪ್ರತಿಕ್ರಿಯೆ ನೀಡಿ, “ರಾಜ್ಯದ ಹಾಗೂ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿರುವವರು ಈ ರೀತಿ ಮಾತನಾಡುವುದಿಲ್ಲ. ಜನವಿರೋಧಿಯಾಗಿರುವವರು ಮಾತ್ರ ಈ ರೀತಿ ಮಾತನಾಡುತ್ತಾರೆ. ಅವರಿಗೆ ಸಂಸ್ಕೃತಿ ಇಲ್ಲ. ಅವರು ಮನುವಾದಿ ಹಾಗೂ ಹಿಂದುತ್ವವಾದಿ. ಕೇವಲ ಕಳೆದ 2-3 ತಿಂಗಳಿನಿಂದ ಚುರುಕಾಗಿದ್ದು, ಅವರು ಇಷ್ಟು ದಿನ ಎಲ್ಲಿದ್ದರು” ಎಂದು ಪ್ರಶ್ನಿಸಿದರು.

ಜಿಲ್ಲೆಗೆ ಮಲ್ಪಿಸ್ಪೆಷಾಲಿಟಿ ಆಸ್ಪತ್ರೆಗೆ ಬೇಡಿಕೆಯಿದ್ದು, ಈ ಬಗ್ಗೆ ಆಯವ್ಯಯದಲ್ಲಿ ಪ್ರಸ್ತಾಪವಿಲ್ಲದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಮುಂದಿನ ದಿನಗಳಲ್ಲಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X