ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಮತ್ತೆ ನೀಡುತ್ತೇವೆ: ಡಿಸಿಎಂ ಡಿ ಕೆ ಶಿವಕುಮಾರ್‌ ಭರವಸೆ

Date:

Advertisements

ನಮ್ಮ ಸರ್ಕಾರ ಇರುವುದೇ ಬಡವರಿಗಾಗಿ. ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅವರಿಗೆ ಮತ್ತೆ ನೀಡುತ್ತೇವೆ. ಅರ್ಹರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಭರವಸೆ ನೀಡಿದರು.

ಸದಾಶಿವನಗರ ನಿವಾಸದಲ್ಲಿ ‘ಆರ್ಹರ ಬಿಪಿಎಲ್ ಕಾರ್ಡ್‌ಗಳು ಕೂಡ ರದ್ದಾಗುತ್ತಿವೆ’ ಎಂದು ಮಾಧ್ಯಮಗಳು ಕೇಳಿದಾಗ, “ಬಿಪಿಎಲ್ ಕಾರ್ಡ್ ವಿತರಣೆಗೆ ಕೇಂದ್ರ ಸರ್ಕಾರ ಕೆಲವು ಮಾನದಂಡ ನಿಗದಿಪಡಿಸಿದೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಅರ್ಹರ ಕಾರ್ಡ್ ರದ್ದಾಗಿದ್ದರೆ ಅವರಿಂದ ಮತ್ತೆ ಅರ್ಜಿ ಪಡೆದು ಮತ್ತೆ ಬಿಪಿಎಲ್ ಕಾರ್ಡ್ ನೀಡಲಾಗುವುದು. ಯಾರೂ ಗಾಬರಿಯಾಗುವ ಅಗತ್ಯವಿಲ್ಲ” ಎಂದು ಉತ್ತರಿಸಿದರು.

“ಕೆಲವು ಕಡೆ ಹೆಚ್ಚುಕಮ್ಮಿಯಾಗಿದ್ದು, ಎಲ್ಲವನ್ನು ಬಗೆಹರಿಸುತ್ತೇವೆ. ದಯಮಾಡಿ ಸಹಕಾರ ನೀಡಿ. ಸರ್ಕಾರಿ ನೌಕರರು, ಸಹಕಾರಿ ಸಂಘಗಳ ಅಧಿಕಾರಿಗಳು, ಆದಾಯ ತೆರಿಗೆ ಪಾವತಿದಾರರು ಬಿಪಿಎಲ್ ಕಾರ್ಡ್ ಹೊಂದಿರುವ ಹಿನ್ನೆಲೆಯಲ್ಲಿ ಈ ಪರಿಷ್ಕರಣೆ ಮಾಡಲಾಗುತ್ತಿದೆ” ಎಂದು ಹೇಳಿದರು.

Advertisements

ಕಾರ್ಡ್ ನೀಡುವಾಗ ಮನೆಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಾರೆ, ಅದೇ ರೀತಿ ಕಾರ್ಡ್ ರದ್ದು ಮಾಡುವಾಗ ಮಾಡಬಹುದಲ್ಲವೇ ಎಂದು ಕೇಳಿದಾಗ, “ಈ ವಿಚಾರವಾಗಿ ಮುಖ್ಯಮಂತ್ರಿಗಳು ಸಂಬಂಧಪಟ್ಟ ಸಚಿವರ ಜತೆ ಚರ್ಚೆ ಮಾಡಿ ನಿರ್ದೇಶನ ನೀಡಿದ್ದಾರೆ. ಯಾರ ಬಿಪಿಎಲ್ ಕಾರ್ಡ್ ರದ್ದಾಗಿದೆ ಎಂದು ಆಯಾ ಕ್ಷೇತ್ರಗಳ ಶಾಸಕರಿಗೆ ಪಟ್ಟಿ ರವಾನಿಸುತ್ತೇವೆ. ಅವರು ಒಂದು ತಂಡ ರಚಿಸಿ ಯಾವ ಅರ್ಹರಿಗೆ ಕಾರ್ಡ್ ರದ್ದಾಗಿದೆ ಎಂದು ಪರಿಶೀಲನೆ ಮಾಡುತ್ತಾರೆ. ಇನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ತಂಡದವರಿಗೂ ಮನೆ ಮನೆಗೆ ಹೋಗಿ, ಯಾರಿಗಾದರೂ ಅನ್ಯಾಯ ಆಗಿದ್ದರೆ ಅದನ್ನು ಸರಿಪಡಿಸುವಂತೆ ಜವಾಬ್ದಾರಿ ನೀಡಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಭಾರತದ ಮನಸ್ಥಿತಿ ಮತ್ತು ಮನೆಸ್ಥಿತಿ

ನಂದಿನಿ ಹಾಲಿನ ಮಾರುಕಟ್ಟೆ ವಿಸ್ತರಣೆಯಿಂದ ರೈತರಿಗೆ ನೆರವು

ಮುಖ್ಯಮಂತ್ರಿಗಳು ದೆಹಲಿಗೆ ತೆರಳುತ್ತಿರುವ ಬಗ್ಗೆ ಕೇಳಿದಾಗ, “ಮುಖ್ಯಮಂತ್ರಿಗಳು ಹಾಲಿನ ವಿಚಾರವಾಗಿ ದೆಹಲಿ ಪ್ರವಾಸ ಮಾಡುತ್ತಿದ್ದಾರೆ. ನಮ್ಮ ನಂದಿನಿ ಹಾಲಿನ ಮಾರುಕಟ್ಟೆ ವಿಸ್ತರಿಸಲು ತೆರಳುತ್ತಿದ್ದಾರೆ. ನಾನು ಕೂಡ ಇದಕ್ಕೆ ತೆರಳಬೇಕಾಗಿತ್ತು. ಆದರೆ ನಾಳೆ ಮೀನುಗಾರರ ದಿನ ಕಾರ್ಯಕ್ರಮ ಇರುವುದರಿಂದ ನಾನು ಮುರುಡೇಶ್ವರಕ್ಕೆ ತೆರಳುತ್ತಿದ್ದೇನೆ. ನಂದಿನಿ ಹಾಲಿಗೆ ಮಾರುಕಟ್ಟೆ ವಿಸ್ತರಣೆ ಮಾಡಿದರೆ ನಮ್ಮ ರೈತರಿಗೆ ನೆರವಾಗುತ್ತದೆ. ಹೀಗಾಗಿ ಈ ಭೇಟಿಗೂ ರಾಜಕೀಯಕ್ಕೂ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X