ಸಂವಿಧಾನ ಬದಲಾವಣೆ ಮಾಡಿದರೆ, ದೇಶದಲ್ಲಿ ರಕ್ತಪಾತ ಖಚಿತ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements

“ಇಡೀ ದೇಶದ ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ಬಿಜೆಪಿಯ ಈ ಯೋಚನೆಯನ್ನು ವಿರೋಧಿಸಬೇಕು. ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಿದರೆ, ಈ ದೇಶದಲ್ಲಿ ರಕ್ತಪಾತವಾಗುವುದು ಖಚಿತ. ಬಿಜೆಪಿಯವರು ಸರ್ವಾಧಿಕಾರ ಧೋರಣೆಯ ಮೇಲೆ ನಂಬಿಕೆಯಿರಿಸಿದ್ದು, ಸಂವಿಧಾನ ಬದಲಾವಣೆ ಮಾಡುವ ಒಳಸಂಚನ್ನು ಮಾಡಿದ್ದಾರೆ. ಆದ್ದರಿಂದ ನರೇಂದ್ರ ಮೋದಿಯವರು ತಮ್ಮ ಈ ಯೋಚನೆಯನ್ನು ಅನಂತಕುಮಾರ್ ಮೂಲಕ ಹೇಳಿಸುತ್ತಿದ್ದಾರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ಸಂಸದ ಅನಂತಕುಮಾರ್ ಹೆಗಡೆಯವರು ಸಂವಿಧಾನ ಬದಲಾವಣೆಯ ಬಗ್ಗೆ ಪುನಃ ಹೇಳಿಕೆ ನೀಡಿರುವ ಬಗ್ಗೆ ಸೋಮವಾರ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದರು.

“ಈ ಹಿಂದೆ ಕೇಂದ್ರ ಸಚಿವರಾಗಿದ್ದಾಗಲೂ ಈ ಮಾತನ್ನು ಹೇಳಿದ್ದರು. ಇದು ಬಿಜೆಪಿಯ ಒಳಸಂಚಾಗಿದೆ. ಸಂವಿಧಾನದ ಬಗ್ಗೆ ಅನಗತ್ಯವಾಗಿ ಮಾತಾನಾಡಿದ್ದಾರೆ. ಸಂವಿಧಾನದಲ್ಲಿ ಯಾವುದೇ ರೀತಿಯ ಬದಲಾವಣೆಯನ್ನು ತರಬೇಕಾದರೆ ಸರ್ಕಾರಕ್ಕೆ ಮೂರಕ್ಕೆ ಎರಡರಷ್ಟು ಬಹುಮತವಿರಬೇಕು. ಬಿಜೆಪಿಯವರಿಗೆ ದೇಶ ಹಾಗೂ ಬಡವರ ಏಳಿಗೆಗೆ ಅವರಿಗೆ ಬಹುಮತ ಬೇಕಾಗಿಲ್ಲ, ಬದಲಾಗಿ ಸಂವಿಧಾನ ಬದಲಾಯಿಸಲು ಬಹುಮತ ಬೇಕಾಗಿದೆ. ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನವಿರಬೇಕೆಂಬುದು ಬಿಜೆಪಿಯ ಒಳಸಂಚು” ಎಂದು ವಾಗ್ದಾಳಿ ನಡೆಸಿದರು.

Advertisements

ಈ ಸುದ್ದಿ ಓದಿದ್ದೀರಾ? ಸಂವಿಧಾನ ಬದಲಾವಣೆ | ಬಿಜೆಪಿ ಅಜೆಂಡಾದಲ್ಲಿ ಎಷ್ಟು ವಿಷ ತುಂಬಿದೆ ಎಂಬುದಕ್ಕೆ ಹೆಗಡೆ ಹೇಳಿಕೆ ಸ್ಯಾಂಪಲ್: ಡಿಕೆಶಿ ಕಿಡಿ

ಸಂವಿಧಾನ ಬದಲಾವಣೆ ಇಂಗಿತ- ವೈಯಕ್ತಿಕ ಹೇಳಿಕೆ ಅಲ್ಲ

“ಅನಂತಕುಮಾರ್ ರವರ ಹೇಳಿಕೆ ವೈಯಕ್ತಿಕ ಎಂದು ಬಿಜೆಪಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮಂತ್ರಿಮಂಡಲದಲ್ಲಿದ್ದಂತಹವರು ಹಾಗೂ ಹಾಲಿ ಸಂಸದರಾಗಿರುವ ಹಿರಿಯ ನಾಯಕರಾದ ಅನಂತಕುಮಾರ್ ರವರ ಹೇಳಿಕೆ ವೈಯಕ್ತಿಕವಾಗುತ್ತದೆಯೇ? ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲದೇ ಸುವಮನುಸ್ಮೃತಿಯ ತತ್ವಗಳನ್ನು ಜಾರಿಗೊಳಿಸುವ ಉದ್ದೇಶ ಹೊಂದಿದ್ದಾರೆ. ಆದರೆ ನಮ್ಮ ಸಂವಿಧಾನ ಸಮಸಮಾಜ ನಿರ್ಮಾಣದ ತತ್ವವನ್ನು ಹೊಂದಿದ್ದು, ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವಗಳು ಪ್ರಮುಖ ಪಾತ್ರ ವಹಿಸುತ್ತವೆ” ಎಂದು ಹೇಳಿದರು.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆಯ ಬಗ್ಗೆ ಪ್ರತಿಕ್ರಿಯೆ ನೀಡಿ, “ಇಂದು ಸ್ಕ್ರೀನಿಂಗ್ ಸಮಿತಿಯ ಸಭೆ ನಡೆಯುತ್ತಿದ್ದು, ಶಿಫಾರಸ್ಸುಗಳನ್ನು ಮಾಡಲಾಗುವುದು. ಇದರ ಬಗ್ಗೆ ತೀರ್ಮಾನವನ್ನು ರಾಷ್ಟ್ರೀಯ ಚುನಾವಣಾ ಸಮಿತಿಯು ಕೈಗೊಳ್ಳುತ್ತದೆ” ಎಂದರು.

ಅನ್ನಭಾಗ್ಯ ಜಾರಿಗೆ ತರುವ ಆಹಾರ ಇಲಾಖೆಗೆ ಸ್ವಂತ ಕಟ್ಟಡ

“ಆಹಾರ ಇಲಾಖೆಯ ಸ್ವಂತ ಕಟ್ಟಡ ನಿರ್ಮಿಸಿ, ಒಂದೇ ಸೂರಿನಡಿ ಇಲಾಖೆಯ ಎಲ್ಲ ಕಾರ್ಯಚಟುವಟಿಕೆಗಳು ನಡೆಸುವಂತೆ ಅನುಕೂಲವಾಗಲು ಇಂದು ಆಹಾರಸೌಧ ಕಟ್ಟಡದ ಶಂಕುಸ್ಥಾಪನೆಯನ್ನು ನೆರವೇರಿಸಲಾಗಿದೆ. ಆಹಾರ ಇಲಾಖೆಯಿಂದಲೇ ಅನ್ನಭಾಗ್ಯ ಗ್ಯಾರಂಟಿ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಸರ್ಕಾರ ಪ್ರಮುಖ ಇಲಾಖೆಗಳಲ್ಲೊಂದಾಗಿದೆ” ಎಂದು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X