ಸರಿಯಾದ ಕೈಗಳಲ್ಲಿ ಸಂವಿಧಾನವಿದ್ದರೆ ಅದರ ಉದ್ದೇಶಗಳು ಸಾರ್ಥಕ: ಸಿದ್ದರಾಮಯ್ಯ 

Date:

Advertisements
  • ‘ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆ ಸಂವಿಧಾನದ ಆಶಯ’
  • ಸಂವಿಧಾನ ದಿನಾಚರಣೆ, ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಸಿಎಂ 

ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು, ಭಾರತ ದೇಶದ ಎಲ್ಲರ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆಯೇ ಸಂವಿಧಾನದ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಭಾನುವಾರ ಪುಷ್ಪಾರ್ಚನೆ ಮಾಡಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

“ಇಂದು ಸಂವಿಧಾನ ಅಂಗೀಕಾರವಾದ ದಿನ. 1949ರ ನವೆಂಬರ್ 26 ರಂದು ಭಾರತದ ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿದ್ದ ಡಾ. ಬಾಬುರಾಜೇಂದ್ರ ಪ್ರಸಾದ್ ಅವರಿಗೆ ಭಾರತದ ಸಂವಿಧಾನವನ್ನು ಸಲ್ಲಿಸಿದ ನಂತರ ಸಂವಿಧಾನ ಅಂಗೀಕಾರವಾಯಿತು. ಆದ್ದರಿಂದ ಈ ದಿನವನ್ನು ಸಂವಿಧಾನ ದಿನವೆಂದು ಇಡೀ ದೇಶದಲ್ಲಿ ಆಚರಿಸಲಾಗುತ್ತದೆ” ಎಂದರು.

Advertisements

ಸರಿಯಾದ ಕೈಗಳಲ್ಲಿ ಸಂವಿಧಾನವಿದ್ದರೆ ಅದರ ಉದ್ದೇಶಗಳು ಸಾರ್ಥಕ 

“ಇಂದು ಡಾ.ಬಾಬು ರಾಜೇಂದ್ರ ಪ್ರಸಾದ್, ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನಾ ಸಮಿತಿಯ ಎಲ್ಲ ಸದಸ್ಯರನ್ನು ನೆನಪಿಸಿಕೊಳ್ಳಬೇಕು. ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದರು. ಭಾರತದ ಸಂವಿಧಾನ ಶ್ರೇಷ್ಠವಾದುದು. ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ, ಸರಿಯಾದ ಕೈಗಳಲ್ಲಿ ಸಂವಿಧಾನವಿರದಿದ್ದರೆ ಸಂವಿಧಾನ ಸಾರ್ಥಕವಾಗುವುದಿಲ್ಲ ಎಂದು ಅಂಬೇಡ್ಕರ್ ಅವರು ಎಚ್ಚರಿಕೆಯ ಮಾತುಗಳನ್ನು ನುಡಿದಿದ್ದರು. ಸಂವಿಧಾನದ ಪರವಾಗಿರುವ ಕೈಗಳಲ್ಲಿ ಇದ್ದಾಗ ಮಾತ್ರ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಸಾಧಿಸಿದಂತಾಗುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದುಡಿವ ಜನರ ಮಹಾಧರಣಿ: ಶುರುವಾಗಲಿ ಜನಪರ್ಯಾಯ

ಸರ್ಕಾರ ಸಂವಿಧಾನದ ಆಶಯಗಳಂತೆ ನಡೆಯುತ್ತಿದೆ 

“ರಾಷ್ಟ್ರಕವಿ ಕುವೆಂಪು ಹೇಳಿದಂತೆ ‘ಸರ್ವ ಜನಾಂಗದ ಶಾಂತಿಯ ತೋಟ’ ಎನ್ನುವಂತಹ ಸಮಾಜ ನಿರ್ಮಾಣವಾಗಬೇಕೆಂದು ಮಹಾತ್ಮಾ ಗಾಂಧಿ, ಜವಾಹರ್ ಲಾಲ್ ನೆಹರೂ ಅವರು ಕನಸು ಕಂಡಿದ್ದರು. ನಮ್ಮ ಸರ್ಕಾರದ ಸಂವಿಧಾನದ ಆಶಯಗಳಂತೆ ನಡೆಯಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿದೆ. ಸಂವಿಧಾನದ ಪೀಠಿಕೆಯಲ್ಲಿ ಇದರ ಸಾರವಿದೆ. ಶಾಲೆಗಳಲ್ಲಿ ಸಂವಿಧಾನ ಪೀಠಿಕೆಯನ್ನು ಬೋಧಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಸರ್ಕಾರದ ಈ ಕ್ರಮದಿಂದ ಇಂದಿನ ಮಕ್ಕಳು ಮುಂದಿನ ಪ್ರಜೆಗಳಾಗಿ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ನಡೆಯಲು ಸಾಧ್ಯವಾಗುತ್ತದೆ” ಎಂದರು.

ಭ್ರೂಣ ಹತ್ಯೆ

“ಮಂಡ್ಯ ಮತ್ತು ಮೈಸೂರು ಭಾಗಗಳಲ್ಲಿ ಭ್ರೂಣ ಹತ್ಯೆ ವ್ಯಾಪಕವಾಗಿ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಭ್ರೂಣಹತ್ಯೆ ಪ್ರಕರಣಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಸಂಬಂಧಪಟ್ಟವರ ಜೊತೆ ಸಭೆ ನಡೆಸಲಾಗುವುದು” ಎಂದು ತಿಳಿಸಿದರು.

ತೆಲಂಗಾಣ ರಾಜ್ಯದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ. ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲು ತೆಲಂಗಾಣಕ್ಕೆ ತೆರಳುತ್ತಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X