ಸರ್ಕಾರಕ್ಕೆ ಎದೆಗಾರಿಕೆ ಇದ್ದರೆ ಭ್ರಷ್ಟಾಚಾರ ನಿಲ್ಲಿಸಲಿ: ಎಚ್‌ ಡಿ ಕುಮಾರಸ್ವಾಮಿ ಸವಾಲು

Date:

ಸರ್ಕಾರಕ್ಕೆ ಈ ಭ್ರಷ್ಟಾಚಾರ ನಿಲ್ಲಿಸುವ ಎದೆಗಾರಿಕೆ ಇದ್ದರೆ ನಿಲ್ಲಿಸಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಸವಾಲು ಹಾಕಿದರು.

- Advertisement -

ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಕ್ಸೆಲ್‌ ಶೀಟ್ ನಾನು ತಯಾರಿಸಿದ್ದಲ್ಲ. ನಾನು ಕೇವಲ ಇರುವ ವಾಸ್ತವ ಪ್ರಸ್ತಾಪ ಮಾಡಿದ್ದೇನೆ ಅಷ್ಟೇ. ಸರಿಪಡಿಸಿಕೊಳ್ಳುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಯಾವ್ಯಾವ ಇಲಾಖೆಗೆ ಎಷ್ಟು ಹಣ ಪಡೆಯುತ್ತಿದ್ದರು ಎಂದು ಇವರೇ ಜಾಹೀರಾತು ಕೊಡಲಿಲ್ಲವೇ? ಹಿಂದಿನ ಸರ್ಕಾರದ ಪಟ್ಟಿಯನ್ನು ಮಾಡಿಕೊಟ್ಟಿದ್ದು ಯಾರು? ಇಲಾಖೆಗಳಲ್ಲಿ ಮಧ್ಯವರ್ತಿಗಳು ಹೆಚ್ಚು ಮಂದಿ ಇದ್ದಾರೆ” ಎಂದು ಮಾರ್ಮಿಕವಾಗಿ ನುಡಿದರು.

“ಹೋಟೆಲ್‌ನಲ್ಲಿ ಅಡ್ಡ ಮಾಡಿಕೊಂಡಿದ್ದೆ ಎಂದು ನನ್ನ ವಿರುದ್ಧ ಆರೋಪ ಮಾಡಿದ್ದಾರೆ. ಆದರೆ, ನಾನು ಅವರು ಹೇಳುವ ರೀತಿ ಅಡ್ಡ ಮಾಡಿಕೊಂಡಿರಲಿಲ್ಲ. ಬದಲಿಗೆ ವಿಶ್ರಾಂತಿಗಾಗಿ ಮಾತ್ರ ಅಲ್ಲಿಗೆ ಹೋಗುತ್ತಿದ್ದೆ” ಎಂದು ತಮ್ಮ ಮೇಲಿನ ಆರೋಪವನ್ನು ತಳ್ಳಿಹಾಕಿದರು.

“ಭ್ರಷ್ಟಾಚಾರಕ್ಕೆ ಜಾತಿ ವ್ಯವಸ್ಥೆ ಇದೆಯಾ? ಭ್ರಷ್ಟಾಚಾರ ಬಹಿರಂಗ ಮಾಡಿದರೆ ಜಾತಿ ಬಣ್ಣ ಕಟ್ಟುತ್ತಾರೆ. ಭ್ರಷ್ಟಾಚಾರ ವ್ಯವಸ್ಥೆ ವಿರುದ್ಧ ಹೋರಾಟ ಮಾಡುತ್ತಾ ಬಂದಿದ್ದೇನೆ, ಮುಂದೆಯೂ ಮಾಡುತ್ತೇನೆ. ಈಗ ಅಧಿಕಾರಿಗಳು ಪೋಸ್ಟಿಂಗ್ ಪಡೆಯಲು ಹಣ ಕೊಡುತ್ತಿದ್ದಾರೆ. ಮುಂದೆ ಇದೇ ಅಧಿಕಾರಿಗಳು ಅಂತಿಮವಾಗಿ ಜನರ ಜೇಬಿಗೆ ಕೈ ಹಾಕುತ್ತಾರೆ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ರಾಜಕೀಯ ಅಭದ್ರತೆಯಿಂದ ವರ್ಗಾವಣೆ ದಂಧೆ ಆರೋಪ ಹರಿಬಿಟ್ಟಿದ್ದಾರೆ: ಸಿಎಂ ಸಿದ್ದರಾಮಯ್ಯ

“ನನ್ನ ವಿರುದ್ಧ 150 ಕೋಟಿ ರೂಪಾಯಿ ಹಗರಣದ ಆರೋಪ ಮಾಡಿದ್ದರು. ಈ ಹಗರಣದ ಆರೋಪವನ್ನು ಲೋಕಾಯುಕ್ತಕ್ಕೆ ಕೊಟ್ಟ ಮೇಲೆ ಬೇರೆ ರೀತಿಯೇ ಆಯಿತು. ನಾನು ತಪ್ಪು ಮಾಡಿಲ್ಲ, ಮಾಡಿದ್ದರೆ ಶಿಕ್ಷೆ ಅನುಭವಿಸಲು ಸಿದ್ಧ” ಎಂದರು.

“ನಾನು ಮಾಡಿದ ಆರೋಪಕ್ಕೆ ದಾಖಲೆ ಕೊಡಿ ಎಂದರೆ ಹಣ ಕೊಡಲು ಸಾಧ್ಯವೆ? ಪೆನ್ ಡ್ರೈವ್ ಬೇರೆ ವಿಚಾರ, ಪೆನ್ ಡ್ರೈವ್ ಖಾಲಿ ಇಲ್ಲ. ಆಪರೇಷನ್ ಮಾಡಿದ ಸಿಡಿ ತರ ಅಲ್ಲ. ಈ ಪೆನ್ ಡ್ರೈವ್ ಬೇರೆಯದ್ದು. ಕಾಂಗ್ರೆಸ್‌ನವರಿಗೆ ಇಷ್ಟು ಆತುರ ಏಕೆ. ಇನ್ನೂ ಕಾದು ನೋಡಿ ಹಲವು ಬರ್ತವೆ” ಎಂದು ಹೇಳಿದರು.

“ನಾನು ಪ್ರಚೋದನೆಗೆ ಒಳಗಾಗುವವನಲ್ಲ. ಈ ದೇಶದ ವ್ಯವಸ್ಥೆ ನೋಡಿದ್ದೇನೆ. ನನ್ನ ಕೆಲಸ ನಾನು ಮಾಡುತ್ತಿದ್ದೇನೆ. ಯಾರಿಂದಲೂ ನಾನು ಸರ್ಟಿಫಿಕೇಟ್ ಪಡೆಯಬೇಕಿಲ್ಲ” ಎಂದು ತಿರುಗೇಟು ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...