- ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಬಿ ಎಸ್ ಯಡಿಯೂರಪ್ಪ
- ಕೊಟ್ಟ ಭರವಸೆ ಈಡೇರಿಸುವಂತೆ ಆಗ್ರಹಿಸಿದ ಮಾಜಿ ಮುಖ್ಯಮಂತ್ರಿ
ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮಾಡಲು ಆಗದೇ ಇದ್ದರೆ ಕಾಂಗ್ರೆಸ್ ಸರ್ಕಾರ ಅಧಿಕಾರ ಬಿಟ್ಟು ತೊಲಗಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಗುರುವಾರ ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜನರನ್ನು ಮರುಳು ಮಾಡಲು ಕಾಂಗ್ರೆಸ್ ದಿನಕ್ಕೊಂದು ನಾಟಕ ಆಡುತ್ತಿದೆ” ಎಂದರು.
“ಅನ್ನಭಾಗ್ಯ ಯೋಜನೆಯಡಿ ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೇಳಿ ಭರವಸೆ ಕೊಟ್ಟಿದ್ದರಾ” ಎಂದು ಅವರು ಪ್ರಶ್ನಿಸಿದರು.
ಈ ಸುದ್ದಿ ಓದಿದ್ದೀರಾ?:ವರ್ಧಂತಿ ಮಹೋತ್ಸವ : ಮೈಸೂರಿನಲ್ಲಿ ಪುರುಷರಿಗೂ ಫ್ರೀ ಬಸ್ ಪ್ರಯಾಣ!
“ಚುನಾವಣೆಯಲ್ಲಿ ಗೆಲ್ಲಬೇಕು ಅಂತ ಅವರೇ ಭರವಸೆ ಕೊಟ್ಟಿದ್ದಾರೆ. ಈಗ ಕೇಂದ್ರದತ್ತ ಬೆರಳು ತೋರಿಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಈಗಾಗಲೇ 5 ಕೆಜಿ ಅಕ್ಕಿ ಕೊಡುತ್ತಿದೆ. ಸಿದ್ದರಾಮಯ್ಯ ಭರವಸೆ ಕೊಟ್ಟಂತೆ 10 ಕೆಜಿ ಅಕ್ಕಿ ಕೊಡಬೇಕು” ಎಂದು ಯಡಿಯೂರಪ್ಪ ಆಗ್ರಹಿಸಿದರು.
“ಒಂದು ವೇಳೆ ಕೊಟ್ಟ ಮಾತು ಉಳಿಸಿಕೊಳ್ಳಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಲಿ” ಎಂದು ಮಾಜಿ ಸಿಎಂ ಆಗ್ರಹಿಸಿದರು.
ಯಡಿಯೂರಪ್ಪ ಸರಕಾರ ನೀಡಿದ ಭರವಸೆಗಳನ್ನು ಎಷ್ಟು ಈ ಡೇರಿ ಸಿದ್ದೀರಾ ತಿಳಿಸಿ: ನಂತರ ನಿಮಗೆ ಪಾಸ್