ಕನ್ನಡದ ಹೆಸರಲ್ಲಿ ಕಾನೂನು ಕೈಗೆತ್ತಿಕೊಂಡರೆ ಸಹಿಸಲ್ಲ: ಡಿ ಕೆ ಶಿವಕುಮಾರ್‌ ಎಚ್ಚರಿಕೆ

Date:

Advertisements

ನಾವೆಲ್ಲರೂ ಕನ್ನಡ ಉಳಿಸಬೇಕು. ಕನ್ನಡಪರ ಹೋರಾಟಗಾರರ ಮೇಲೆ ನಮಗೆ ಗೌರವವಿದೆ. ಹಾಗಂತ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಸಿದರು.

ತಮ್ಮ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿ, “ಯಾರೊಬ್ಬರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಕನ್ನಡ ಉಳಿಸಿ, ಬೆಳೆಸುವ ಹೋರಾಟಕ್ಕೆ ನಮ್ಮ ಅಭ್ಯಂತರವಿಲ್ಲ. ಹೋರಾಟದ ಹೆಸರಿನಲ್ಲಿ ಆಸ್ತಿಪಾಸ್ತಿ ಹಾನಿ ಮಾಡುವುದನ್ನು ನಾವು ಒಪ್ಪುವುದಿಲ್ಲ, ಸಹಿಸುವುದೂ ಇಲ್ಲ” ಎಂದರು.

“ಕಾನೂನು ಪಾಲನೆ ಎಲ್ಲರ ಕರ್ತವ್ಯ. ನೀವು ಹೋರಾಟ ಮಾಡುವುದಾದರೆ ಮಾಡಿ, 60% ನಾಮಫಲಕ ಹಾಕಬೇಕು ಎನ್ನುವುದನ್ನು ಕೇಳಲು ಒಂದು ಇತಿಮಿತಿ ಇದೆ. ಈ ಹಿಂದೆ ಯಾರೋ ಒಬ್ಬರು ದೂರು ನೀಡಿದರು ಎಂದು ನಾರಾಯಣಗೌಡರ ಮೇಲೆ ಕೇಸ್ ದಾಖಲಾದಾಗ, ಅವರ ವಿರುದ್ಧ ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದು ಪೊಲೀಸ್ ಅಧಿಕಾರಿಗಳ ಜತೆ ನಾನೇ ಮಾತನಾಡಿದ್ದೆ. ಕನ್ನಡ ಕಡ್ಡಾಯ ಮಾಡಲು ನೋಟಿಸ್ ನೀಡೋಣ. ಆದರೆ ಕಾನೂನು ಕೈಗೆತ್ತಿಕೊಳ್ಳಬಾರದು. ನಾರಾಯಣಗೌಡರಿಗೆ ಈ ಮಾತನ್ನು ಇವತ್ತೂ ಹೇಳುತ್ತೇನೆ, ಮುಂದೆಯೂ ಹೇಳುತ್ತೇನೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ₹40 ಸಾವಿರ ಕೋಟಿ ಲೂಟಿ ಆರೋಪ; ಪ್ರಧಾನಿ ಮೋದಿ ಏನು ಹೇಳುತ್ತಾರೆ?

“ಪ್ರತಿಭಟನೆ ಮಾಡಲಿ, ಧಿಕ್ಕಾರ ಕೂಗಲಿ. ನಾವು ತಪ್ಪು ಮಾಡಿದರೆ ನಮ್ಮ ಮನೆ ಮುಂದೆಯೂ ಬಂದು ಪ್ರತಿಭಟನೆ ಮಾಡಲಿ. ನಾವೂ ಕನ್ನಡಿಗರೇ. ಕನ್ನಡದ ಬಗ್ಗೆ ನಮಗೂ ಬದ್ಧತೆ ಇದೆ. ಸಚಿವ ಸಂಪುಟದಲ್ಲಿ ನಿಮ್ಮ ಟಿಪ್ಪಣಿಗಳೇನೆ ಇದ್ದರೂ ಕನ್ನಡದಲ್ಲೇ ಇರಬೇಕು ಎಂದು ಮುಖ್ಯಮಂತ್ರಿಗಳು ಸಚಿವರುಗಳಿಗೆ ಸ್ಪಷ್ಟವಾಗಿ ಹೇಳಿದ್ದಾರೆ. ಕನ್ನಡ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ” ಎಂದರು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಪಾಠ ಕಲಿಸುತ್ತೇವೆ ಎಂಬ ನಾರಾಯಣಗೌಡರ ಎಚ್ಚರಿಕೆ ವಿಚಾರವಾಗಿ ಕೇಳಿದಾಗ, “ನಮ್ಮ ಸರ್ಕಾರ ಅಧಿಕಾರಕ್ಕೆ ಬರಲು ಕನ್ನಡಪರ ಹೋರಾಟಗಾರರ ಸಹಕಾರ ಇಲ್ಲ ಎಂದು ನಾನು ಹೇಳುವುದಿಲ್ಲ. ಹಾಗೆಂದು ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ನೀಡುವುದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರು ಏನು ಬೇಕಾದರೂ ಮಾಡಲಿ. ಅವರು ತಪ್ಪು ಮಾಡಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X