ರಾಮನಗರ ಜಿಲ್ಲೆ ಹೆಸರು ಬದಲಾದರೆ ಮುಂದೆ ನಾನು ಕಿತ್ತೆಸೆಯುತ್ತೇನೆ: ಹೆಚ್ ಡಿ ಕುಮಾರಸ್ವಾಮಿ

Date:

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಪ್ರಯತ್ನವನ್ನು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರೋಧಿಸಿದ್ದಾರೆ.

- Advertisement -

ನವದೆಹಲಿಯಲ್ಲಿ ಸುದ್ದಿಗಾರರ ಜೊತೆ ಈ ಬಗ್ಗೆ ಮಾತನಾಡಿ, “ಇವರು ಈಗ ಜಿಲ್ಲೆಯ ಹೆಸರು ಬದಲಾವಣೆ ಮಾಡಬಹುದು. ಮತ್ತೆ ನಾನು ರಾಜ್ಯದಲ್ಲಿ ಅಧಿಕಾರಕ್ಕೆ ಬಂದೇ ಬರುತ್ತೇನೆ. ಆಗ ಇವರು ಇಟ್ಟಿರುವ ಹೆಸರನ್ನು ಕಿತ್ತೆಸೆಯುತ್ತೇನೆ” ಎಂದು ಗುಡುಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಕಾಂಗ್ರೆಸ್ ಸರಕಾರ ಬಂದ ಮೇಲೆ ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿದ್ದಾರೆ. ಇದನ್ನು ಯಾಕೆ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಬೆಂಗಳೂರಿಗೆ ಸೇರ್ಪಡೆಯಾದರೆ ಮೂಟೆಗಟ್ಟಲೆ ಹಣವನ್ನು ತುಂಬಿಸಿಕೊಳ್ಳಬಹುದು ಎಂಬ ಉದ್ದೇಶ ಇರಬಹುದು” ಎಂದು ಆರೋಪಿಸಿದರು.

“ನಾನು ರಾಮನಗರದ ನಾಲ್ಕೂ ತಾಲೂಕುಗಳನ್ನು ಬೆಂಗಳೂರಿಗೆ ಸೇರಿಸುತ್ತೇನೆ. ಭೂಮಿ ಮಾರಾಟ ಮಾಡಬೇಡಿ ಎಂದು ಹೇಳಿದ್ದರು” ಎಂದು ಕುಮಾರಸ್ವಾಮಿ ಅವರು ಹೆಸರು ಹೇಳದೆಯೇ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದರು.

ರಾಮದೇವರಿಗೆ ಅಪಚಾರ

“ರಾಮನಗರ ಜಿಲ್ಲೆ ಮಾಡಿದ್ದ ಉದ್ದೇಶ ಆ ವ್ಯಕ್ತಿಗೆ ಏನು ಗೊತ್ತಿದೆ? ರಾಮನ ಹೆಸರು ಇರುವುದು ಒಂದು ಭಾಗ. ಈ ಜಿಲ್ಲೆಗೆ ತನ್ನದೇ ಆದ ಒಂದು ಇತಿಹಾಸ ಇದೆ. ಪುರಾಣ ಐತಿಹ್ಯವಿದೆ. ಈ ಹೆಸರಲ್ಲಿ ರಾಮನ ಹೆಸರು ಇದೆ. ರಾಮದೇವರಿಗೆ ಇವರು ಅಪಚಾರ ಮಾಡಲು ಹೊರಟಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಅಲ್ಲಿ ಇವರು ಯಾವ್ಯಾವ ಬೆಲೆ ಏರಿಕೆ ಮಾಡಿದ್ದಾರೆ ನೋಡಿದ್ದೇವೆ. ಭೂಮಿ ಲಪಟಾಯಿಸಿ ಯಾವುದರ ಬೆಲೆ ಏರಿಕೆ ಮಾಡಿದ್ದಾರೆ ಎನ್ನುವುದು ಕೂಡ ಗೊತ್ತಿದೆ. ಇದೆಲ್ಲ ಬಿಟ್ಟು ಅಭಿವೃದ್ಧಿ ಮಾಡುವುದನ್ನು ಅವರು ಕಲಿಯಲಿ. ನಾನು ಅಧಿಕಾರದಲ್ಲಿದ್ದಾಗ ರಾಮನಗರ ಜಿಲ್ಲೆ ಮಾಡಿದ್ದೆ. ಅದನ್ನು ತೆಗೆಯಬೇಕು ಎನ್ನುವುದು ಅವರ ಉದ್ದೇಶ. ದೇವೇಗೌಡರು, ನಾನು ಏನು ಅಭಿವೃದ್ಧಿ ಮಾಡಿದ್ದೇವೆ ಜನರಿಗೆ ಗೊತ್ತಿದೆ. ಅದಕ್ಕೆ ಇವರ ಸರ್ಟಿಫಿಕೇಟ್ ಬೇಕಿಲ್ಲ. ಹಿಂದೆ ಕನಕಪುರ, ಸಾತನೂರು ಹೇಗಿದ್ದವು, ಆಗ ಇವರು ಯಾರದೋ ಸೇವೆ ಮಾಡಿಕೊಂಡಿದ್ದರು” ಎಂದು ಕುಮಾರಸ್ವಾಮಿ ಅವರು ಟೀಕಿಸಿದರು.

“ಈಗ ರಾಮನಗರ ಹೆಸರು ಬದಲಾಯಿಸಿದರೂ ಮುಂದೆ ನಾನು ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತೇನೆ. ಆ ವಿಶ್ವಾಸ ನನಗೆ ಇದೆ. ನಾಲ್ಕು ತಾಲೂಕು ಸೇರಿ ಬೆಂಗಳೂರು ದಕ್ಷಿಣ ಎಂದು ಮಾಡಲು ಹೊರಟಿದ್ದಾರೆ. ಈಗಾಗಲೇ ಬೆಂಗಳೂರು ದಕ್ಷಿಣ ಕ್ಷೇತ್ರ ಎಂದು ಇದೆ. ಹೆಸರು ಬದಲಾವಣೆ ಮಾಡಿದರೆ ಏನು ಸಿಗುತ್ತದೆ ಎಂಬುದನ್ನು ಅವರು ಜನರಿಗೆ ಹೇಳಬೇಕು. ಹೆಸರು ಬದಲಾವಣೆ ಮಾಡಿದರೆ ಎಲ್ಲ ಸರ್ಕಾರಿ ದಾಖಲೆಗಳಿಗೆ ತೊಂದರಯಾಗಲಿದೆ. ಜನರು ಕಚೇರಿಗಳಿಗೆ ಅಲೆಯಬೇಕಾಗುತ್ತದೆ” ಎಂದರು.

ರಾಮನಗರ-ಚನ್ನಪಟ್ಟಣ ಅವಳಿ ನಗರ

“ಜಿಲ್ಲೆಗೆ ಹೆಸರು ಬದಲಾಯಿಸುವುದು ಅನಗತ್ಯ ಎಂದು ಒತ್ತಿ ಹೇಳಿದ ಅವರು; ರಾಮನಗರ-ಚನ್ನಪಟ್ಟಣ ಅವಳಿ ನಗರ ಮಾಡಿದ್ದರೆ ಒಂದು ಹೆಸರು ಅವರಿಗೆ ಬಂದಿರುತ್ತಿತ್ತು. ಅದರ ಬದಲು ಜಿಲ್ಲೆಯ ಹೆಸರನ್ನೇ ಅಳಿಸಿ ಹಾಕಲು ಹುನ್ನಾರ ನಡೆಸಿದ್ದಾರೆ” ಎಂದು ದೂರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...

ರಾಜ್ಯದಲ್ಲಿ SIR ಭೌತಿಕ ವಿಚಾರಣೆ ಸ್ಥಗಿತ: ಬಿಎಲ್ಒಗಳಿಂದ ಮನೆ ಬಾಗಿಲಿಗೆ ತೆರಳಿ ದಾಖಲೆ ಸಂಗ್ರಹ

ಹಿಂದಿನ ದತ್ತಾಂಶ ಲಭ್ಯವಿಲ್ಲದ ಹಾಗೂ ಮಾಹಿತಿಯಲ್ಲಿ ಹೊಂದಾಣಿಕೆಯಾಗದ ಕಾರಣಕ್ಕೆ ನೋಟಿಸ್ ಸ್ವೀಕರಿಸಿರುವ...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ ರಾಹುಲ್ ಗಾಂಧಿ ಸಮರ!

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...