ಪಕ್ಷ ಹೇಳಿದರೆ ನಾನೇ ಚುನಾವಣಾ ಕಣದಿಂದ ಹಿಂದೆ ಸರಿಯುತ್ತೇನೆ: ನಿಖಿಲ್ ಕುಮಾರಸ್ವಾಮಿ ಅಚ್ಚರಿ ಹೇಳಿಕೆ

Date:

  • ಜೆಡಿಎಸ್ ಗೆಲುವೇ ಮುಖ್ಯ ಎಂದ ನಿಖಿಲ್
  • ಪಕ್ಷದಲ್ಲಿ ದೇವೇಗೌಡರ ನಿರ್ಧಾರವೇ ಅಂತಿಮ

ಪಕ್ಷ ಹಾಗೂ ಪಕ್ಷದ ವರಿಷ್ಠರು ಹೇಳಿದಲ್ಲಿ ನಾನೇ ಚುನಾವಣಾ ಕಣದಿಂದ ಹಿಂದೆ ಸರಿಯುವೆ ಎಂದು ರಾಮನಗರ ಜೆಡಿಎಸ್ ಅಭ್ಯರ್ಥಿ, ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಅವರ ಹೇಳಿಕೆ ಈಗ ಪಕ್ಷದೊಳಗೆ ಹೊಸ ಸಂಚಲನ ಸೃಷ್ಟಿಸಿದೆ. ಜೊತೆಗೆ ಜೆಡಿಎಸ್‌ನೊಳಗೆ ಎಲ್ಲವೂ ಸರಿ ಇಲ್ಲವೇ ಎನ್ನುವ ಪ್ರಶ್ನೆಯನ್ನು ಹುಟ್ಟುಹಾಕಿದೆ.

ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್, ನನ್ನ ತಾಯಿ ಅನಿತಾ ಕುಮಾರಸ್ವಾಮಿ ಚುನಾವಣೆ ಸ್ಪರ್ಧೆಗೆ ಟಿಕೆಟ್ ಕೇಳಿದ್ದಾರೆ ಎನ್ನುವ ಸುದ್ದಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಇದು ಊಹಾಪೋಹದ ವಿಚಾರ. ಅನಿತಾ ಕುಮಾರಸ್ವಾಮಿಯವರು ಈಗಾಗಲೇ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರು ಮರಳಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ನಿಖಿಲ್ ಹೇಳಿದರು.

ಮುಂದುವರೆದ ಅವರು ನಾವೆಲ್ಲರೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ಪ್ರಾದೇಶಿಕ ಪಕ್ಷವನ್ನು ಬೆಳೆಸಬೇಕೆನ್ನುವುದು ನಮ್ಮ ಗುರಿ. ಇದಕ್ಕಾಗಿ ನಾವು ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ.

ಎಲ್ಲವಕ್ಕೂ ಕುಟುಂಬ ರಾಜಕಾರಣವನ್ನೇ ಬೊಟ್ಟು ಮಾಡು ತೋರಿಸುವುದು ಸರಿಯಲ್ಲ. ರಾಷ್ಟ್ರೀಯ ಪಕ್ಷಗಳಲ್ಲೂ ಈ ರಾಜಕಾರಣ ಇಲ್ಲವೇ, ಜೆಡಿಎಸ್‌ ಮಾತ್ರವೇ ಎಲ್ಲರ ಕಣ್ಣಿಗೆ ಕಾಣುತ್ತದೆಯೇ ಎಂದು ನಿಖಿಲ್‌ ಕಿಡಿಕಾರಿದರು.

ಎಲ್ಲರಂತೆ ನನಗೂ ಜನಪರ, ರೈತಪರ ನಾಯಕ ಎಚ್‌ ಡಿ ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕೆಂಬ ಆಸೆ ಇದೆ. ಇದಕ್ಕಾಗಿ ನಾವು ಯಾವುದೇ ತ್ಯಾಗಕ್ಕೂ ಸಿದ್ಧ. ಪಕ್ಷ ಹೇಳಿದರೆ ನಾನೇ ಚುನಾವಣಾ ಕಣದಿಂದ ಹಿಂದೆ ಸರಿಯುತ್ತೇನೆ. ಪಕ್ಷದ ಗೆಲುವೊಂದೇ ನಮಗೆ ಮುಖ್ಯ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಪಂಚರತ್ನ ಯೋಜನೆ ಜಾರಿಗೆ ತರಲು 4 ತಿಂಗಳಿಂದ ಎಚ್ಡಿಕೆ ಪ್ರಯತ್ನಿಸುತ್ತಿದ್ದಾರೆ. ಈ ಕಾರಣಕ್ಕಾದರೂ ನಮ್ಮ ಪಕ್ಷವನ್ನು ಜನ ಅಧಿಕಾರಕ್ಕೆ ತರಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ?:ನಮ್ಮ ಬೆಂಬಲವಿಲ್ಲದೆ ಯಾರೂ ಸರ್ಕಾರ ರಚಿಸಲು ಸಾಧ್ಯವಿಲ್ಲ: ಗಾಲಿ ಜನಾರ್ದನ ರೆಡ್ಡಿ

ವರಿಷ್ಠರ ತೀರ್ಮಾನವೇ ಅಂತಿಮ:
ಹಾಸನ ಕ್ಷೇತ್ರಕ್ಕೆ ಟಿಕೆಟ್‌ ನೀಡುವ ವಿಚಾರದಲ್ಲಿನ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ನಿಖಿಲ್‌ ಕುಮಾರಸ್ವಾಮಿ, ಪಕ್ಷದ ಟಿಕೆಟ್ ಹಂಚಿಕೆಯಲ್ಲಿ ಗೊಂದಲ ಇರುವುದು ಸಹಜ. ಆದರೆ ಇವೆಲ್ಲವನ್ನೂ ಪಕ್ಷದ ವರಿಷ್ಠರು ನೋಡಿಕೊಳ್ಳುತ್ತಾರೆ. ಈ ವಿಚಾರದಲ್ಲಿ ದೇವೇಗೌಡರ ನಿರ್ಧಾರವೇ ಅಂತಿಮ ಎಂದು ನಿಖಿಲ್ ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಸ್ಟ್ರೇಲಿಯನ್ ಹೂಡಿಕೆದಾರರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ

ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ವಲಯದಲ್ಲಿ ಹೂಡಿಕೆ ಗ್ರೀನ್ ಫೀಲ್ಡ್...

ಸರ್ಕಾರದ ಉಚಿತ ಕೊಡುಗೆಗಳು ಜನರಲ್ಲಿ ಖರೀದಿಸುವ ಶಕ್ತಿ ಹೆಚ್ಚಿಸುತ್ತವೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಂಗಳೂರು ಟೆಕ್‌ ಸಮ್ಮಿಟ್‌ನಲ್ಲಿ ಇನ್ಫೋಸಿಸ್‌ ಸ್ಥಾಪಕಾಧ್ಯಕ್ಷ ನಾರಾಯಣ ಮೂರ್ತಿ...

ಅನ್ ಬಾಕ್ಸಿಂಗ್ ಬಿಎಲ್‌ಆರ್‌ ಹಬ್ಬಕ್ಕೆ ಚಾಲನೆ ನೀಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಅನ್‌ಬಾಕ್ಸಿಂಗ್ ಬೆಂಗಳೂರು ಫೌಂಡೇಷನ್’ ವತಿಯಿಂದ ಡಿಸೆಂಬರ್‌ 1ರಿಂದ...

ಅರ್ಹ ರೈತರಿಗೆ ತಲಾ 2000 ರೂ.ವರೆಗೆ ಬೆಳೆ ಪರಿಹಾರ: ಸಿದ್ದರಾಮಯ್ಯ ಘೋಷಣೆ

ಕೇಂದ್ರದಿಂದ ಹಣ ಬರುವವರೆಗೂ ಕಾಯಲು ಸಾಧ್ಯವಿಲ್ಲ: ಸಿಎಂ ಮೊದಲನೇ ಕಂತಿನಲ್ಲಿ...