ರಾಜ್ಯ ಸರ್ಕಾರ ಜನರಿಗೆ ಅಕ್ಕಿ ಕೊಟ್ಟರೆ ಬಿಜೆಪಿಗೆ ಸೋಲಿನ ಭೀತಿ : ಶಾಸಕ ಪ್ರದೀಪ್ ಈಶ್ವರ್

Date:

  • ಸಂಸದ ಪ್ರತಾಪ್‌ ಸಿಂಹ ಅವರಿಗೂ ಸೋಲಿನ ಭೀತಿ ಕಾಡತೊಡಗಿದೆ
  • ರಾಜಕೀಯ ಕುತಂತ್ರದಿಂದ ಕೇಂದ್ರದ ಅಕ್ಕಿ ರಾಜ್ಯಕ್ಕೆ ಬರದಿರುವಂತೆ ತಡೆ

ಕಾಂಗ್ರೆಸ್ ಸರ್ಕಾರವು ‘ಅನ್ನಭಾಗ್ಯ ಯೋಜನೆಯಡಿ ಅರ್ಹರಿಗೆ 10 ಕೆ ಜಿ ಅಕ್ಕಿ ಕೊಟ್ಟರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಬಹುದೆಂಬ ಭೀತಿ ಎದುರಾಗಿದೆ. ಹಾಗಾಗಿ, ರಾಜಕೀಯ ಕುತಂತ್ರದಿಂದ ಕೇಂದ್ರದ ಅಕ್ಕಿ ರಾಜ್ಯಕ್ಕೆ ಬಾರದಿರುವಂತೆ ತಡೆಯಲಾಗಿದೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್​ ಈಶ್ವರ್​ ಆರೋಪಿಸಿದ್ದಾರೆ.

- Advertisement -

ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ(ಎಫ್‌ಸಿಐ) ಅಕ್ಕಿ ಕೊಡದಿರುವುದರ ಹಿಂದೆ ರಾಜ್ಯ ಬಿಜೆಪಿ ನಾಯಕರ ಕೈವಾಡ ಇದೆ. ಸಿದ್ದರಾಮಯ್ಯ ಸರ್ಕಾರ ಜನರಿಗೆ ಅಕ್ಕಿ ಕೊಟ್ಟರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲುತ್ತದೆ ಎಂಬ ಭೀತಿ ಕಾಡತೊಡಗಿದೆ. ಹಾಗಾಗಿ ಈ ರೀತಿ ಮಾಡಿದ್ದಾರೆ. ರಾಜ್ಯ ಸರ್ಕಾರ ಅಕ್ಕಿ ಕೊಡಬಾರದು, ಪ್ರತಿಭಟನೆ ಯಶಸ್ವಿಯಾಗಬೇಕು ಎನ್ನುವುದು ಬಿಜೆಪಿಯವರ ಧೋರಣೆ. ಇದರ ಹಿಂದೆ ರಾಜ್ಯ ಬಿಜೆಪಿ ಸಂಸದರ ಕುತಂತ್ರ ಇದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಗಳ ಬಗ್ಗೆ ಮಾತನಾಡಿದ ಪ್ರದೀಪ್​ ಈಶ್ವರ್, ಪ್ರತಾಪ್‌ ಸಿಂಹ ಅವರಿಗೂ ಸೋಲಿನ ಭೀತಿ ಕಾಡತೊಡಗಿದೆ. ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ಅವರಿಗೆ ಬೈದರೆ ಬಿಜೆಪಿಯಲ್ಲಿ ಸ್ಥಾನಮಾನ ಸಿಗುತ್ತದೆ ಎಂಬ ಭ್ರಮೆಯಲ್ಲಿದ್ದಾರೆ. ಹಾಗಾಗಿ, ಈ ರೀತಿ ಟೀಕಿಸುವ ಮೂಲಕ ಏನೇನೋ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಪ್ರತಾಪ್‌ ಸಿಂಹ ಅವರಿಗೆ ವೈಯಕ್ತಿಕ ವರ್ಚಸ್ಸಿನಿಂದ ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಆಗುತ್ತಾ? ಪ್ರಧಾನಿ ಮೋದಿಯವರ ಹೆಸರು ಹೇಳಿಕೊಂಡೇ ಗೆದ್ದಿದ್ದಾರೆ. ನಿಮ್ಮ ವೈಯಕ್ತಿಕ ವರ್ಚಸ್ಸು ಏನು, ನಿಮ್ಮ ಸಾಧನೆ ಏನು ಎಂದು ಜನರ ಮುಂದೆ ಹೇಳಿ ಎಂದು ಪ್ರದೀಪ್ ಈಶ್ವರ್ ಸವಾಲು ಎಸೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಾಸಕರಿಗೆ ತರಬೇತಿ ಶಿಬಿರ ವಿವಾದ | ಪೂರ್ವಗ್ರಹ ಪೀಡಿತ ಚರ್ಚೆ ಸರಿಯಲ್ಲ: ಯು ಟಿ ಖಾದರ್

ಇದೇ ವೇಳೆ ತಮ್ಮ ಕ್ಷೇತ್ರದ ಅಭಿವೃದ್ಧಿಯ ವಿಚಾರದ ಬಗ್ಗೆ ಮಾತನಾಡಿದ ಶಾಸಕರು, ಚಿಕ್ಕಬಳ್ಳಾಪುರವನ್ನು ಸಿಂಗಾಪುರ ಮಾಡುವುದಕ್ಕೆ ಆಗಲ್ಲ. ಚಿಕ್ಕಬಳ್ಳಾಪುರ ಚಿಕ್ಕಬಳ್ಳಾಪುರ ಆಗುವುದಕ್ಕೆ ಇನ್ನೂ 20 ವರ್ಷಗಳು ಬೇಕು. ಕ್ಷೇತ್ರದಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ. ಇಷ್ಟು ವರ್ಷಗಳ ಕಾಲ ಶಾಸಕರು ಆಗಿದ್ದವರು ಏನ್ ಮಾಡಿದ್ದಾರೋ ಗೊತ್ತಿಲ್ಲ. ಹಿಂದಿನ ಶಾಸಕರ ಭ್ರಷ್ಟಾಚಾರ ಬಯಲು ಮಾಡಿದ್ದಕ್ಕೆ ನನ್ನನ್ನು ಜೈಲಿಗೆ ಹಾಕಿಸಿದ್ದರು. ನನಗೆ ಟಾರ್ಚರ್ ಕೊಟ್ಟಿದ್ದಕ್ಕೆ ಇಂದು ನಾನು ಶಾಸಕ ಆಗಿದ್ದೇನೆ. ಒಂದೊಂದೇ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...