ಪ್ರಧಾನಿಯಾದರೆ ಕಾಂಗ್ರೆಸ್ ನಿಮ್ಮನ್ನು ಸಹಿಸಿಕೊಳ್ಳುತ್ತದೆಯೇ: ಖರ್ಗೆಗೆ ದೇವೇಗೌಡ ಪ್ರಶ್ನೆ

Date:

“ನೀವು ಪ್ರಧಾನಿಯಾದರೆ ಕಾಂಗ್ರೆಸ್ ನಿಮ್ಮನ್ನು ಸಹಿಸಿಕೊಳ್ಳುತ್ತದೆಯೇ?” ಎಂದು ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರನ್ನು ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ ಪ್ರಶ್ನಿಸಿದರು.

ರಾಜ್ಯಸಭೆಯಲ್ಲಿ ಗುರುವಾರ ಬಜೆಟ್ ಕಲಾಪದ ವೇಳೆ ಮಾತನಾಡಿದ ದೇವೇಗೌಡ, ”ಒಂದು ವೇಳೆ ಚುನಾವಣೆಯಲ್ಲಿ ಸೋತರೆ ಹಿಂದೆ ಸರಿಯುವುದಾಗಿ ಖರ್ಗೆ ಹೇಳಿಕೆ ನೀಡಿದ್ದಾರೆ. ಅವರಿಗೆ ನಾನು ಆಭಾರಿ. ಖರ್ಗೆ ಪ್ರಾಮಾಣಿಕ ವ್ಯಕ್ತಿ, ಮನಮೋಹನ್ ಸಿಂಗ್ ಕೂಡ ಅಪ್ಪಟ ಪ್ರಾಮಾಣಿಕ ವ್ಯಕ್ತಿ, ಆದರೆ ಕಾಂಗ್ರೆಸ್ ಎಲ್ಲರನ್ನೂ ದುರ್ಬಲಗೊಳಿಸುತ್ತದೆ. ಖರ್ಗೆ ಅವರು ಉನ್ನತ ಸ್ಥಾನಕ್ಕೆ ಬಂದರೆ ಕಾಂಗ್ರೆಸ್‌ನವರು ಸಹಿಸಿಕೊಳ್ಳುತ್ತಾರೆಯೇ?” ಎಂದು ಪ್ರಶ್ನಿಸಿದರು.

“1991ರಲ್ಲಿ ದೇಶವನ್ನು ಉಳಿಸಲು ಮನಮೋಹನ್ ಸಿಂಗ್ ಏನು ಮಾಡಿದ್ದಾರೆ ಎಂಬುದರ ಬಗ್ಗೆ ನಾನು ಸಾಕಷ್ಟು ಮಾತನಾಡಬಲ್ಲೆ” ಎಂದ ದೇವೇಗೌಡ, “ನನ್ನ ಸ್ವಂತ ಮಗನಲ್ಲ, ಖರ್ಗೆಯವರು ಸಿಎಂ ಆಗಬೇಕು ಅಂತ ಆಸೆ ಇತ್ತು” ಎಂದು ಇದೇ ವೇಳೆ ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನನ್ನನ್ನು ಸೋಲಿಸಲು ಕಾಂಗ್ರೆಸ್‌ನವರು ಇನ್ನೊಂದು ಅಭ್ಯರ್ಥಿಯನ್ನು ಹಾಕಿದ್ದರು. ಆ ವೇಳೆ ಖರ್ಗೆಯವರು, ದೇವೇಗೌಡರನ್ನು ಸೋಲಿಸುವುದಾದರೆ ನಾನು ಸ್ಪರ್ಧಿಸಲ್ಲ ಎಂದು ತಿಳಿಸಿದ್ದರು. ಇದಕ್ಕಾಗಿ ನಾನು ಅವರಿಗೆ ಆಭಾರಿಯಾಗಿದ್ದೇನೆ. ನೀವು ಪ್ರಧಾನಿಯಾದರೆ ಕಾಂಗ್ರೆಸ್ ನಿಮ್ಮನ್ನು ಸಹಿಸಿಕೊಳ್ಳುತ್ತದೆಯೇ” ಎಂದು ಕೇಳಿದ ದೇವೇಗೌಡ, “ಕಾಂಗ್ರೆಸ್ ಏನು ಎಂಬುದು ನನಗೆ ಗೊತ್ತಿದೆ. ಹೆಚ್ಚು ಮಾತನಾಡಲ್ಲ” ಎಂದು ತಿಳಿಸಿದರು.

ರಾಜ್ಯಸಭೆಯಲ್ಲಿ ಮೊದಲು ಮಾತನಾಡಿದ್ದ ಪ್ರಧಾನಿ ಮೋದಿಯವರು, ಡಾ ಮನಮೋಹನ್ ಸಿಂಗ್ ಅವರನ್ನು ಕೊಂಡಾಡಿದ್ದರು.

ಇದನ್ನು ತನ್ನ ಭಾಷಣದಲ್ಲಿ ಉಲ್ಲೇಖಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಮನಮೋಹನ್ ಸಿಂಗ್ ಒಳ್ಳೆಯ ಕೆಲಸ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಅವರ ಬಗ್ಗೆ ಆಡಿದ ಮಾತುಗಳಿಗಾಗಿ ನಾನು ಧನ್ಯವಾದ ಹೇಳುತ್ತೇನೆ. ಹೀಗೆಯೇ ಇರಬೇಕು. ಒಳ್ಳೆಯ ಕೆಲಸವನ್ನು ಮೆಚ್ಚಿ, ಕೆಟ್ಟದ್ದನ್ನು ಟೀಕಿಸಬೇಕು” ಎಂದರು.

ಇದೇ ವೇಳೆ ರಾಜ್ಯಸಭೆಯಲ್ಲಿ ದೇಶಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಹೆಚ್ಚಿನ ಚರ್ಚೆಗಳನ್ನು ನಡೆಸುವಂತೆ ಖರ್ಗೆ ಸದನವನ್ನು ಒತ್ತಾಯಿಸಿದರು.

ಬಳಿಕ ದೇವೇಗೌಡರನ್ನು ಕುರಿತು ಮಾತನಾಡಿದ ಖರ್ಗೆ, “ದೇವೇಗೌಡರು ಯಾರನ್ನೂ ಹೆಚ್ಚು ಪ್ರಶಂಸಿಸುವುದಿಲ್ಲ. ಆದರೆ, ಈ ಬಾರಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದಾರೆ. ಅವರ ನಿಲುವು ಹೇಗೆ ಬದಲಾಯಿತೋ ನನಗೆ ಗೊತ್ತಿಲ್ಲ. ದೇವೇಗೌಡ ಮತ್ತು ನರೇಂದ್ರ ಮೋದಿಯವರ ನಡುವಿನ ಪ್ರೇಮ ಸ್ವಲ್ಪ ತಡವಾಗಿ ಮೂಡಿದೆ” ಎಂದು ಹೇಳಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಬಗ್ಗೆ ಕುಟುಕಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಮಾಚಲ ಪ್ರದೇಶ ಸರ್ಕಾರ ಉಳಿಸುವ ಜವಾಬ್ದಾರಿ ಡಿಕೆಶಿ ಹೆಗಲಿಗೆ

ಭಿನ್ನಮತ ಸ್ಫೋಟ ಹಾಗೂ ಬಿಜೆಪಿಯ ಆಪರೇಷನ್ ಕಮಲದ ತಂತ್ರದಿಂದಾಗಿ ತೂಗುಯ್ಯಾಲೆಯಲ್ಲಿ ಇರುವ...

ಲೋಕಸಭಾ ಚುನಾವಣೆ | ತಮಿಳುನಾಡಿನಲ್ಲಿ ಬಿಜೆಪಿಗೆ ನೆಲೆಯಾಗುವರೇ ಅಣ್ಣಾಮಲೈ?

ಲೋಕಸಭಾ ಚುನಾವಣೆಗೆ ಕೆಲವು ವಾರಗಳು ಬಾಕಿ ಇವೆ. ತನ್ನ ನೆಲೆಯೇ ಇಲ್ಲದ...

ಗುಜರಾತ್ | ನೌಕಾದಳದಿಂದ 2 ಸಾವಿರ ಕೋಟಿ ರೂ. ಮೊತ್ತದ 3300 ಕೆಜಿ ಮಾದಕ ವಸ್ತು ವಶ

ಭಾರತೀಯ ನೌಕಾದಳ ಹಾಗೂ ಗುಜರಾತ್ ಭಯೋತ್ಪಾದಕ ವಿರೋಧಿ ದಳದ ನೆರವಿನೊಂದಿಗೆ ನಾರ್ಕೋಟಿಕ್ಸ್‌...