ಕೆ.ಸುಧಾಕರ್‌ ಹೆಸರಲ್ಲಿ ಮತ ಕೇಳಿದರೆ ಬಿಜೆಪಿಗೆ ಮೈನಸ್‌: ಎಸ್‌ ಆರ್‌ ವಿಶ್ವನಾಥ್‌

Date:

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯಲ್ಲಿನ ಆಂತರಿಕ ಭಿನ್ನಮತ ದಿನೇ ದಿನೇ ಹೆಚ್ಚುತ್ತಿದೆ. ಯಲಹಂಕ ಬಿಜೆಪಿ ಶಾಸಕ ಎಸ್‌ ಆರ್‌ ವಿಶ್ವನಾಥ್‌ ಅವರು ತಮ್ಮದೇ ಪಕ್ಷದ ಡಾ.ಕೆ. ಸುಧಾಕರ್‌ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

- Advertisement -

ಸೋಮವಾರ (ಏ.1) ಯಲಹಂಕದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, “ಡಾ.ಕೆ.ಸುಧಾಕರ್‌ ಅವರ ಹೆಸರಲ್ಲಿ ಮತ ಕೇಳಿದರೆ ಪಕ್ಷಕ್ಕೇ ಮೈನಸ್‌ ಆಗುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ, ನಾವು ಮೋದಿ ಹೆಸರಿನಲ್ಲೇ ಮತ ಕೇಳುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಟಿಕೆಟ್‌ ಸಿಗದಿದ್ದಾಗ ಅಸಮಾಧಾನ ಇರುವುದು ಸಹಜ. ನನ್ನ ಮಗನಿಗೆ ಟಿಕೆಟ್‌ ಸಿಕ್ಕಿಲ್ಲ. ಹಾಗಂತ ನಾನು ನಾನು ಯಾರ ಮೇಲೂ ಮುನಿಸಿಕೊಂಡಿಲ್ಲ. ನಮಗೆ ಪಕ್ಷದ ಹಿತಾಸಕ್ತಿ ಮುಖ್ಯ. ಆದರೆ, ಮಾಧ್ಯಮಗಳನ್ನು ಕರೆತಂದು ಸಿಂಪತಿ ಕ್ರಿಯೇಟ್‌ ಮಾಡುವ ಕೆಲಸ ನಾನು ಮಾಡುವುದಿಲ್ಲ” ಎಂದು ಹೇಳಿದರು.

“ನಾನು ಸುಧಾಕರ್‌ ಅವರನ್ನು ಒಬ್ಬನೇ ಭೇಟಿ ಮಾಡುವುದಿಲ್ಲ. ಮುಖಂಡರ ಜತೆ ತೆರಳಿ ಭೇಟಿ ಮಾಡುತ್ತೇನೆ. ನಾಲ್ಕೈದು ದಿನಗಳ ಹಿಂದೆ ಭೇಟಿ ಮಾಡಬೇಕು ಎಂದು ಮೆಸೇಜ್‌ ಮಾಡಿದ್ದರು ಅಷ್ಟೆ. ನಮ್ಮ ಕ್ಷೇತ್ರದಲ್ಲಿ ನಾಳೆ ಮತದಾನ ನಡೆದರೂ ಮತ ಹಾಕಿಸುವ ವ್ಯವಸ್ಥೆ ಮಾಡಿಕೊಂಡಿದ್ದೇವೆ” ಎಂದರು.

“ಮಾಜಿ ಸಚಿವ ಸುಧಾಕರ್‌ ಅವರನ್ನು ಮನೆಯೊಳಗೆ ಬಿಟ್ಟಿಲ್ಲ ಎಂಬುದು ಸುಳ್ಳು. ಅವರು ಬರುವ ವಿಚಾರ ನನಗೆ ಗೊತ್ತಿರಲಿಲ್ಲ. ಹೀಗಾಗಿ ನಾನು ಬೇರೆ ಕೆಲಸದ ಮೇಲೆ ಹೊರಗೆ ಹೋಗಿದ್ದೆ. ಯಲಹಂಕದವರನ್ನು ಖಳನಾಯಕರು ಎಂಬಂತೆ ಮಾಧ್ಯಮಗಳಲ್ಲಿ ಬಿಂಬಿಸಿದ್ದಾರೆ” ಎಂದು ಪರೋಕ್ಷವಾಗಿ ಸುಧಾಕರ್‌ಗೆ ಟಾಂಗ್‌ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...