ಸಿದ್ದರಾಮಯ್ಯ ಸರ್ಕಾರ ನೋಡಿದ್ರೆ ನಾವೀಗ ಪಾಕಿಸ್ತಾನದಲ್ಲಿ ಇದ್ದೀವಾ ಎಂಬ ಅನುಮಾನ ಬರುತ್ತಿದೆ: ಆರ್‌ ಅಶೋಕ್‌

Date:

ಬೆಂಗಳೂರಿನಲ್ಲಿ ಜೈಶ್ರೀರಾಮ್‌ ಘೋಷಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ವಹಿಸಬೇಕು. ಇಲ್ಲವಾದರೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ತೀವ್ರವಾಗಿ ಪ್ರತಿಭಟಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯನವರ ಸರ್ಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು, ಪಾಕಿಸ್ತಾನ ಬೆಂಬಲಿತರು, ಟಿಪ್ಪು ಸಿದ್ಧಾಂತವಾದಿಗಳು ಹೆಚ್ಚಿದ್ದಾರೆ. ಭಯೋತ್ಪಾದನೆ ಹಾಗೂ ಬಾಂಬ್‌ ಸ್ಫೋಟದಂತಹ ಘಟನೆಗಳು ನಡೆಯುತ್ತಿರುವುದು ಬಹಳ ಆತಂಕಕಾರಿ” ಎಂದರು.

“ಇಡೀ ದೇಶದಲ್ಲಿ ಶ್ರೀರಾಮ ನವಮಿ ಆಚರಣೆ ಮಾಡಲಾಗಿದೆ. ನನ್ನ ಮನೆಯಲ್ಲೂ ರಾಮನವಮಿ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಆದರೆ ಜೈ ಶ್ರೀರಾಮ್‌ ಹೇಳಬಾರದು ಅಲ್ಲಾಹು ಅಕ್ಬರ್‌ ಎನ್ನಬೇಕು ಎಂದು ಮುಸ್ಲಿಂ ಮೂಲಭೂತವಾದಿಗಳು ಹಿಂದೂಗಳಿಗೆ ಬೆಂಗಳೂರಿನಲ್ಲಿ ಕೊಲೆ ಬೆದರಿಕೆ ಹಾಕಿದ್ದಾರೆ. ನಾವೀಗ ಪಾಕಿಸ್ತಾನದಲ್ಲಿ ಇದ್ದೀವಾ ಎಂಬ ಅನುಮಾನ ಶುರುವಾಗಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸಿಎಂ ಸಿದ್ದರಾಮಯ್ಯ ರಾಜ್ಯವನ್ನು ಇಸ್ಲಾಮಿಕ್‌ ಮೂಲಭೂತವಾದಿಗಳ ಕೈಗೆ ಧಾರೆ ಎರೆದುಕೊಟ್ಟಿದ್ದಾರೆ. ಹಿರಿಯ ನಾಯಕ ಲಕ್ಷ್ಮಣ ಸವದಿ ಭಾರತಮಾತೆಗೆ ಜೈ ಎನ್ನಲು ಅನುಮತಿ ಕೇಳುತ್ತಾರೆ. ಡಿ.ಕೆ.ಸುರೇಶ್‌ ಅವರು ಮನೆಯಲ್ಲಿ ರಾಮನ ಪೂಜೆ ಮಾಡಲ್ಲ ಎನ್ನುತ್ತಾರೆ. ಅವರು ಕಲ್ಲು ಬಂಡೆಯನ್ನೇ ಪೂಜೆ ಮಾಡಲು ಇಟ್ಟುಕೊಳ್ಳಬಹುದು. ರಾಮ ಇಲ್ಲದೆ ಹನುಮನಿಲ್ಲ, ಹನುಮ ಇಲ್ಲದೆ ರಾಮನಿಲ್ಲ. ಇಡೀ ದೇಶದಲ್ಲಿ ಎಲ್ಲ ಕಡೆ ಹನುಮನ ದೇವಸ್ಥಾನವಿದೆ. ಈ ರೀತಿ ಹಿಂದೂಗಳನ್ನು ಅವಹೇಳನ ಮಾಡಿ ಈಗ ರಾಜ್ಯದಲ್ಲಿ ಮುಸ್ಲಿಂ ಭಯೋತ್ಪಾದನಾ ಚಟುವಟಿಕೆ ಹೆಚ್ಚಾಗಿದೆ” ಎಂದು ಆರೋಪಿಸಿದರು.

“ಹಿಂದೂಗಳು ಕರ್ನಾಟಕದಲ್ಲಿ ಭಯದಿಂದ ಬದುಕುವ ವಾತಾವರಣ ಸೃಷ್ಟಿಯಾಗಿದೆ. ಚಿಕ್ಕಪೇಟೆಯಲ್ಲಿ ಅಂಗಡಿ ಮಾಲೀಕರೊಬ್ಬರು ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ. ನಿಮ್ಮನ್ನು ರಕ್ಷಣೆ ಮಾಡುತ್ತೇವೆ ಎಂದು ಕಾಂಗ್ರೆಸ್‌ ಸರ್ಕಾರ ಮೂಲಭೂತವಾದಿಗಳಿಗೆ ತಿಳಿಸಿದ್ದಾರೆ. ಆದ್ದರಿಂದಲೇ ಹಿಂದೂಗಳನ್ನು ಬಹಿರಂಗವಾಗಿ ಬೆದರಿಸಲಾಗುತ್ತಿದೆ. ಬಹುಸಂಖ್ಯಾತರನ್ನು ಸರ್ಕಾರ ಕಡೆಗಣಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಈ ರೀತಿ ಬೆದರಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಕಾಟಾಚಾರಕ್ಕೆ ಪ್ರಕರಣ ದಾಖಲಿಸಿ ನಂತರ ಬಿಡುಗಡೆ ಮಾಡಲಾಗುತ್ತಿದೆ. ಮತಬ್ಯಾಂಕ್‌ಗಾಗಿ ಇಂಥವರನ್ನು ಕಾಪಾಡುವುದು ಮುಂದಿನ ದಿನಗಳಲ್ಲಿ ದೊಡ್ಡ ಅಪಾಯವಾಗಿ ಪರಿಣಮಿಸಲಿದೆ. ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿ ಇರಬೇಕೆಂದೇ ನಾವು ಬಯಸುತ್ತೇವೆ” ಎಂದರು.

ರಾಜ್ಯಕ್ಕೆ ದರಿದ್ರ ಬಂದಿದೆ

“ಸಿಎಂ ಸಿದ್ದರಾಮಯ್ಯ ಬಿಜೆಪಿ ಸಂಸದರ ಬಗ್ಗೆ ಮಾತನಾಡುತ್ತಾರೆ. ಆದರೆ ಡಿ.ಕೆ.ಸುರೇಶ್‌ ಮತ್ತು ಮಲ್ಲಿಕಾರ್ಜುನ ಖರ್ಗೆ ಸಂಸತ್ತಿನಲ್ಲಿ ರಾಜ್ಯದ ಪರವಾಗಿ ಏನು ಮಾತಾಡಿದ್ದಾರೆ ಎಂದು ನೋಡಲಿ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ದರಿದ್ರ ಬಂದಿದೆ. ಮೂರು ತಿಂಗಳಿಂದ ಗ್ಯಾರಂಟಿ ಹಣ ಕೊಟ್ಟಿಲ್ಲ, ಆರು ತಿಂಗಳಿಂದ ವಿದ್ಯಾರ್ಥಿವೇತನ ಕೊಟ್ಟಿಲ್ಲ, ಜೂನ್‌ ನಂತರ ಸಂಬಳ ಕೊಡಲೂ ಸರ್ಕಾರದಲ್ಲಿ ದುಡ್ಡಿಲ್ಲ” ಎಂದು ದೂರಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಜ್ವಲ್‌ನನ್ನು ಕುಮಾರಸ್ವಾಮಿ ಮಗ ಎಂದಿದ್ದಾರೆ, ನೂಲಿನಂತೆ ಸೀರೆ ಇರುತ್ತೆ: ಡಿ ಕೆ ಶಿವಕುಮಾರ್‌ ತಿರುಗೇಟು

ಕುಮಾರಸ್ವಾಮಿಗೆ ಮತ್ತು ಅವರ ಕುಟುಂಬಕ್ಕೆ ನನ್ನ ನೆನಸಿಕೊಳ್ಳದೆ ಸ್ಪೂರ್ತಿ ಇರಲ್ಲ. ಕುಮಾರಸ್ವಾಮಿ...

ಪ್ರಜ್ವಲ್‌ ಪ್ರಕರಣ | ಕಾಂಗ್ರೆಸ್‌ನ ಮಹಾನ್ ನಾಯಕನ ಕೈವಾಡದಿಂದ ಪೆನ್‌ಡ್ರೈವ್ ಬಹಿರಂಗ: ಕುಮಾರಸ್ವಾಮಿ

ಹಾಸನದ ಸಂಸದ ಪ್ರಜ್ವಲ್ ರೇವಣ್ಣನವರ ಅಶ್ಲೀಲ ವಿಡಿಯೋ ಸಂಗ್ರಹದ ಪೆನ್ ಡ್ರೈವ್...

ಬೆಂಗಳೂರು | ಟ್ಯಾನರಿ ರಸ್ತೆಯಲ್ಲಿ ಹೊಸ ಕೆಳಸೇತುವೆ ನಿರ್ಮಾಣ: ಟ್ರಾಫಿಕ್ ಸಮಸ್ಯೆಗೆ ಕಡಿವಾಣ

ಬೆಂಗಳೂರಿನ ಟ್ಯಾನರಿ ರಸ್ತೆಯಲ್ಲಿ ಹೊಸ ಕೆಳಸೇತುವೆ ಮುಂದಿನ ತಿಂಗಳೊಳಗೆ ಕಾರ್ಯಾರಂಭ ಮಾಡಲಿದ್ದು,...