‘ಮೋದಿ, ಯೋಗಿಗಿಂತ ದೊಡ್ಡವರಿದ್ದಾರೆ ಎನ್ನುವವರು ದೇಶದ್ರೋಹಿ; ಬಿಜೆಪಿ ಅಭ್ಯರ್ಥಿ ಮಹೇಶ್‌ ಶರ್ಮಾ ವಿವಾದಾತ್ಮಕ ಹೇಳಿಕೆ

Date:

“ಪ್ರಧಾನಿ ಮೋದಿ-ಸಿಎಂ ಯೋಗಿಯನ್ನು ತಮ್ಮವರು ಎಂದು ಯಾರು ಪರಿಗಣಿಸುವುದಿಲ್ಲವೋ ಅವರು ತಮ್ಮ ತಂದೆಯನ್ನೂ ತಮ್ಮವರು ಎನ್ನುವುದಿಲ್ಲ. ಮೋದಿ-ಯೋಗಿಗಿಂತ ದೊಡ್ಡವರು ಇದ್ದಾರೆ ಎನ್ನುವವರು ದೇಶದ್ರೋಹಿಗಳು” ಎಂದು ಉತ್ತರ ಪ್ರದೇಶದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಮಹೇಶ್‌ ಶರ್ಮಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಉತ್ತರ ಪ್ರದೇಶದ ನೋಯ್ಡಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಶರ್ಮಾ, ನೋಯ್ಡಾದ ಬುಲಂದ್‌ಶಹರ್‌ನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿರು. “ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗಿಂತ ದೊಡ್ಡವರು ಯಾರಾದರೂ ಇದ್ದಾರೆ ಎಂದು ಯಾರಾದರೂ ನಂಬಿದ್ದರೆ, ಅವರು ದೇಶದ್ರೋಹಿಗಳು” ಎಂದು ಹೇಳಿದ್ದಾರೆ.

“ಮೋದಿ ಮತ್ತು ಯೋಗಿಯನ್ನು ತಮ್ಮವರೆಂದು ಪರಿಗಣಿಸದವರು ತಮ್ಮ ತಂದೆಯನ್ನು ತಮ್ಮವರೆಂದು ಪರಿಗಣಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅವರ ಭಾಷಣದ ವೀಡಿಯೊ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲವಾರು ನೆಟ್ಟಿಗರು ಶರ್ಮಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಮತ್ತು ವ್ಯಂಗ್ಯವಾಡಿದ್ದಾರೆ.

ವಿಡಿಯೋವನ್ನು ಹಂಚಿಕೊಂಡಿರುವ ಅರುಣ್‌ ಖಾನ್ ಎಂಬವರು, “ಸಾರ್ವತ್ರಿಕ ಚುನಾವಣೆ ಸಮಯದಲ್ಲಿ ಇಂತಹ ಹೇಳಿಕೆಯನ್ನು ನೀಡಲು ಅನುಮತಿ ಇದೆಯೇ” ಎಂದು ಪ್ರಶ್ನಿಸಿದ್ದಾರೆ. ತಮ್ಮ ಪೋಸ್ಟ್‌ನಲ್ಲಿ ಚುನಾವಣಾ ಆಯೋಗವನ್ನು ಟ್ಯಾಗ್‌ ಮಾಡಿದ್ದಾರೆ.

 

“ಮೋದಿ ಮತ್ತು ಯೋಗಿಗಿಂತ ದೊಡ್ಡ ಹಿತೈಷಿಗಳಿದ್ದಾರೆ ಎಂದು ಯಾರಾದರೂ ನಂಬಿದರೆ ಅವರು ದೇಶದ್ರೋಹಿ ಎಂದು ಬಿಜೆಪಿಯ ನೋಯ್ಡಾ ಸಂಸದ ಮಹೇಶ್ ಶರ್ಮಾ ಚುನಾವಣಾ ಪ್ರಚಾರದಲ್ಲಿ ಹೇಳಿದ್ದಾರೆ. ಹಲೋ ಚುನಾವಣಾ ಆಯೋಗ ಇಂತಹ ಭಾಷಣವನ್ನು ಅನುಮತಿಸುವಿರೇ?” ಎಂದು ಅವರು ಕೇಳಿದ್ದಾರೆ.

ಮತ್ತೊಬ್ಬ ನೆಟ್ಟಿಗ ದಿಗ್ಯಾಂಶು ಎಂಬವರು ಶರ್ಮಾ ಅವರನ್ನು ‘ಮೋಟರ್‌ಮೌತ್’ ಎಂದು ಕರೆದಿದ್ದಾರೆ. “ನಾನು ಪ್ರಧಾನಿ ಮತ್ತು ನಮ್ಮ ಮುಖ್ಯಮಂತ್ರಿಯನ್ನು ಗೌರವಿಸುತ್ತೇನೆ. ಆದರೆ, ಅವರು ನನ್ನ ದಿವಂಗತ ತಂದೆಯ ಸ್ಥಾನ ಪಡೆಯಲು ಸಾಧ್ಯವಿಲ್ಲ. ಮಹೇಶ್ ಶರ್ಮಾ ಅವರ ಹೇಳಿಕೆಯಿಂದ ತೀವ್ರ ನಿರಾಶೆಗೊಂಡಿದ್ದೇನೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೆಮಲ್ ಚಂಡಮಾರುತ| ಬಂಗಾಳದಲ್ಲಿ ಭೂಕುಸಿತ ಸಾಧ್ಯತೆ; ವಿಮಾನ, ರೈಲುಗಳು ರದ್ದು

ರೆಮಲ್ ಚಂಡಮಾರುತ ಇಂದು (ಮೇ 26) ರಾತ್ರಿ ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಲಿದ್ದು,...

ಅನುಮಾನಗಳನ್ನು ಹುಟ್ಟುಹಾಕುವುದೇ ಕೆಲವರ ಕೆಲಸ: ಮುಖ್ಯ ಚುನಾವಣಾ ಆಯುಕ್ತ

ಅನುಮಾನಗಳನ್ನು ಹುಟ್ಟುಹಾಕುವುದೇ ಕೆಲವರ ಕೆಲಸ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್...

ಉತ್ತರ ಪ್ರದೇಶದಲ್ಲಿ ಅಪಘಾತ: 11 ಮಂದಿ ಸಾವು, 10 ಜನರಿಗೆ ಗಾಯ

ಉತ್ತರ ಪ್ರದೇಶ ಶಹಜಹಾನ್‌ಪುರದಲ್ಲಿ ಬಸ್‌ ಹಾಗೂ ಟ್ರಕ್ ನಡುವೆ  ಸಂಭವಿಸಿದ ಭೀಕರ...

ಬಾಂಗ್ಲಾದೇಶ ಸಂಸದನ ಹತ್ಯೆ ಪ್ರಕರಣ: ತನಿಖೆಗಾಗಿ ಢಾಕಾ ಪೊಲೀಸರ ತಂಡ ಕೋಲ್ಕತ್ತಾಗೆ ಭೇಟಿ

ಕೋಲ್ಕತ್ತಾದಲ್ಲಿ ಈ ವಾರದ ಆರಂಭದಲ್ಲಿ ನಡೆದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಮ್...