ದಕ್ಷಿಣ ಕನ್ನಡ ಜನರ ಕೈ ಕೊಯ್ದರೆ ರಕ್ತ ಕೆಂಪಿರಲ್ಲ, ಕೇಸರಿ ಇರುತ್ತೆ: ಮಾಳವಿಕ ಅವಿನಾಶ

Date:

ದಿನದಿಂದ ದಿನಕ್ಕೆ ಚುನಾವಣೆ ಬಿಸಿ ಏರಿಕೆಯಾಗುತ್ತಿದೆ. ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದು ಎರಡು ಪಕ್ಷಗಳು ತೀವ್ರ ಸೆಣಸಾಟ ನಡೆಸಿವೆ. ಅಬ್ಬರದ ಪ್ರಚಾರ ನಡೆಸಿವೆ. ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದ ನಾರಿಶಕ್ತಿ ಮಹಿಳಾ ಸಮಾವೇಶದಲ್ಲಿ ಭಾಷಣ ಮಾಡಿದ ಬಿಜೆಪಿ ನಾಯಕಿ ಮಾಳವಿಕ ಅವಿನಾಶ, “ಇಲ್ಲಿಯ ಜನರ ರಕ್ತದ ಬಣ್ಣ ಕೆಂಪು ಅಲ್ಲ, ಕುಯ್ದರೇ ಕೇಸರಿ ರಕ್ತ ಬರುತ್ತೆ. ಇದು ನಮಗೆಲ್ಲ ಗೊತ್ತಿದೆ” ಎಂದು ಹೇಳಿದ್ದಾರೆ.

- Advertisement -

“ನಾನು ಇಲ್ಲಿ ಬಿಜೆಪಿ ಬಗ್ಗೆ, ಹಿಂದುತ್ವದ ಪಾಠ ಹೇಳಲು ಬಂದಿಲ್ಲ. ಆದರೆ, ಎಪ್ರಿಲ್ 26ರಂದು ಮದುವೆ ಇದೆ. ಮೋದಿ ಗೆಲ್ಲುತ್ತಾರೆ ಎಂದು ನಿರ್ಲಕ್ಷ್ಯ ಮಾಡಬೇಡಿ. ಮೋದಿಯವರು ಈ ದೇಶದ ಮಹಿಳೆಯರಿಗೆ ಶಕ್ತಿ ಕೊಟ್ಟಿದ್ದಾರೆ. ಮಹಿಳೆಯರ ಸಬಲೀಕರಣಕ್ಕಾಗಿ ಎಷ್ಟೆಲ್ಲ ಯೋಜನೆ ಮಾಡಿದ್ದಾರೆ. ಅದಕ್ಕಾಗಿ ನಾವು ಹಿಂತಿರುಗಿ ಕೊಡೋದು, ಒಂದು ಮತವಷ್ಟೇ. ಅದನ್ನು ತಪ್ಪದೆ ಮಾಡಬೇಕು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಮೋದಿಜಿ ಮತ್ತೊಮ್ಮೆ ಪ್ರಧಾನಿ ಆಗುವುದರಲ್ಲಿ ಸಂಶಯವಿಲ್ಲ. ಇನ್ನು ಬ್ರಿಜೇಶ್ ಚೌಟ ಅಭ್ಯರ್ಥಿ ಅಲ್ಲ, ನನ್ನ ಲೆಕ್ಕದಲ್ಲಿ ಅವರು ಲೋಕಸಭಾ ಸದಸ್ಯ. ಅವರನ್ನ ಎಷ್ಟು ಅಂತರದಲ್ಲಿ ಗೆಲ್ಲಿಸುತ್ತೇವೆ ಎಂಬ ಸವಾಲು ನಮ್ಮ ಮುಂದಿದೆ” ಎಂದಿದ್ದಾರೆ.

“ಗರೀಬಿ ಹಠಾವೋ ಎಂದು ನಾವು ಹುಟ್ಟುವ ಮೊದಲೇ ಇಂದಿರಾ ಗಾಂಧಿ ಹೇಳಿದ್ದರು. ಆದರೆ, ಗರೀಬಿ ಹಠಾವೋ ಆಗಿಲ್ಲ. ಅದನ್ನು ಮಾಡಲು ಮೋದಿಯೇ ಬರಬೇಕಾಯಿತು. ಈಗ ಕಾಂಗ್ರೆಸ್ ಹಠಾವೋ ಮಾಡಲು ಶುರು ಮಾಡಿದ್ದಾರೆ. ಆ ಮೂಲಕ ಕಾಂಗ್ರೆಸಿಗರ ಭ್ರಷ್ಟಾಚಾರವನ್ನೂ ತೊಲಗಿಸುವ ಸಂಕಲ್ಪ ಮಾಡಿದ್ದಾರೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ದ್ವಿತೀಯ ಪಿಯುಸಿ | ಪರೀಕ್ಷೆಯಲ್ಲಿ ಶೇ. 78 ರಷ್ಟು ಫಲಿತಾಂಶ ಗಳಿಸಿದ ಬಿಬಿಎಂಪಿ ಕಾಲೇಜುಗಳು

“ಮೋದಿ ಈ ದೇಶಕ್ಕೆ ಕೊಟ್ಟಿದ್ದೇನು ಅನ್ನೋದು ನಮ್ಮೆಲ್ಲರ ಮನಸ್ಸಿನಲ್ಲಿರಬೇಕು. ದಿನಪೂರ್ತಿ ಎಚ್ಚರದಲ್ಲಿದ್ದು, ಈ ದೇಶದ ಒಳಿತಿಗಾಗಿ ದುಡಿಯುತ್ತಿದ್ದಾರೆ. ದೇಶದ ಅಭ್ಯುದಯವೇ ಅವರ ಗುರಿ. ಇಡೀ ದೇಶದ ಜನರು, ಪ್ರತಿ ಗ್ರಾಮವೂ ಅಭಿವೃದ್ಧಿಯಲ್ಲಿ ಜೋಡಣೆಯಾಗಬೇಕು ಅನ್ನುವ ದೃಷ್ಟಿಯಲ್ಲಿ ಕೆಲಸ ಮಾಡುತ್ತಿದ್ದಾರೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಬದಲು SSR! ಪ್ರತಿಭಟನೆ, ಉಳಿದಿಬ್ಬರು ಚುನಾವಣಾ ಆಯುಕ್ತರ ತಕರಾರುಗಳಿಗೆ ಕಡೆಗೂ ಮಣಿಯಿತೇ ಗ್ಯಾನೇಶ್- ಮೋದಿ- ಶಾ ತ್ರಿವಳಿ?

ತೀವ್ರ ವಿರೋಧ, ಪ್ರತಿಭಟನೆ, ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾದ ಬಳಿಕ...

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...