ಹಣ ತೆಗೆದುಕೊಳ್ಳಿ, ‘ಹರಾಮ್’ ಎನಿಸಿದರೆ ಶೌಚಾಲಯ ನಿರ್ಮಾಣಕ್ಕೆ ಬಳಸಿ: ಮಹಾರಾಷ್ಟ್ರ ಮತದಾರರಿಗೆ ಓವೈಸಿ ಸಲಹೆ

Date:

ಚುನಾವಣೆಯ ಸಮಯದಲ್ಲಿ ರಾಜಕಾರಣಿಗಳು ವಿತರಿಸುವ ಹಣವನ್ನು ಮತದಾರರು ಸ್ವೀಕರಿಸಿ. ಒಂದು ವೇಳೆ ಆ ಹಣವು ‘ಹರಾಮ್’ (ಅಕ್ರಮವಾಗಿ ಸಂಪಾದಿಸಿದ ಹಣ) ಎಂದೆನಿಸಿದರೆ ಆ ಹಣವನ್ನು ಶೌಚಾಲಯಗಳನ್ನು ನಿರ್ಮಿಸಲು ಬಳಸಬಹುದು ಎಂದು ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಮಂಗಳವಾರ ಹೇಳಿದ್ದಾರೆ.

- Advertisement -

ಜನವರಿ 15 ರಂದು ಲಾತೂರ್ ಮಹಾನಗರ ಪಾಲಿಕೆಗೆ ಚುನಾವಣೆ ನಿಗದಿಯಾಗಿದೆ. ಇದಕ್ಕೂ ಮುನ್ನ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಓವೈಸಿ, “ಎಐಎಂಐಎಂ ಕಣಕ್ಕೆ ಇಳಿದ ನಂತರವೇ ಪ್ರತಿಸ್ಪರ್ಧಿ ರಾಜಕೀಯ ಪಕ್ಷಗಳು ಮತದಾರರಲ್ಲಿ ಹಣವನ್ನು ವಿತರಿಸಲು ಪ್ರಾರಂಭಿಸಿದವು. ನಾವು ಅಭ್ಯರ್ಥಿಗಳನ್ನು ಕಣಕ್ಕಿಳಿಸದಿದ್ದರೆ, ಹಣ ವಿತರಿಸುತ್ತಿರಲಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಬಿಹಾರ ಚುನಾವಣೆ | ‘ನಮಗೆ ನಮಕ್ ಹರಾಮ್‌ಗಳ ಮತ ಬೇಡ’: ಮುಸ್ಲಿಮರ ವಿರುದ್ಧ ನಾಲಿಗೆ ಹರಿಬಿಟ್ಟ ಕೇಂದ್ರ ಸಚಿವ

ಅಲ್ಪಸಂಖ್ಯಾತರನ್ನು ಹೊರತುಪಡಿಸಿ ಪ್ರತಿಯೊಂದು ಸಮುದಾಯಕ್ಕೂ ರಾಜಕೀಯ ಶಕ್ತಿ ಇದೆ. ಬಲವಾದ ರಾಜಕೀಯ ನಾಯಕತ್ವವನ್ನು ನಿರ್ಮಿಸಿ ಎಂದು ಓವೈಸಿ ಮುಸ್ಲಿಮರಿಗೆ ಕರೆ ನೀಡಿದರು. ಹಾಗೆಯೇ ದಲಿತರು ಮತ್ತು ಮುಸ್ಲಿಮರು ಬಡ ಜನಸಂಖ್ಯೆಯ ದೊಡ್ಡ ಭಾಗವಾಗಿದ್ದಾರೆ. ಅಭಿವೃದ್ಧಿ ಅವರು ಇರುವ ಪ್ರದೇಶಗಳನ್ನು ತಲುಪಿಲ್ಲ ಎಂದು ಹೇಳಿದರು.

“ಬಿಜೆಪಿ ರಾಷ್ಟ್ರೀಯತೆಯ ಬಗ್ಗೆ ಮಾತನಾಡುತ್ತದೆ, ಆದರೆ ರೈತರು ಸಾಯುತ್ತಿದ್ದಾರೆ, ಯುವಕರು ನಿರುದ್ಯೋಗಿಗಳಾಗಿದ್ದಾರೆ, ಮತ್ತು ಅವರು ಮಾತನಾಡುತ್ತಿರುವುದು ಲವ್ ಜಿಹಾದ್ ಬಗ್ಗೆ ಮಾತ್ರ. ನನ್ನನ್ನು ಮೆಚ್ಚಿಸಲು ಮೋದಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂದು ವಿಮಾನದಲ್ಲಿ ಹೇಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಮೌನವಾಗಿವೆ” ಎಂದು ಆರೋಪಿಸಿದರು.

ಇನ್ನು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಟೀಕಿಸಿದ ಓವೈಸಿ, “ಅಜಿತ್ ಅವರು ತಮ್ಮ ಚಿಕ್ಕಪ್ಪ ಮತ್ತು ರಾಜಕೀಯ ಮಾರ್ಗದರ್ಶಕ ಶರದ್ ಪವಾರ್ ಅವರಿಗೆ ನಿಷ್ಠರಾಗಿ ಉಳಿದಿಲ್ಲ. ಅಂತಹ ವ್ಯಕ್ತಿ ಜನರಿಗೆ ಹೇಗೆ ನಿಷ್ಠರಾಗಿರಲು ಸಾಧ್ಯ” ಎಂದು ಪ್ರಶ್ನಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...