ಬಿಗ್ ಬ್ರೇಕಿಂಗ್ ನ್ಯೂಸ್‌ | ಅಕ್ರಮ ಡಿನೋಟಿಫಿಕೇಷನ್ ಹಗರಣ: ಲೋಕಾಯುಕ್ತ ಮುಂದೆ ವಿಚಾರಣೆಗೆ ಹಾಜರಾದ ಎಚ್‌ಡಿಕೆ

Date:

ಬೆಂಗಳೂರಿನ ಗಂಗಾನಗರದಲ್ಲಿ 1.11 ಎಕರೆ ಭೂಮಿಯನ್ನು ಸತ್ತವರ ಹೆಸರಿನಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿಸಿ, ತಮ್ಮ ಬಾಮೈದ ಹೆಸರಿಗೆ ನೋಂದಣಿ ಮಾಡಿಸಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಎದುರು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಹಾಜರಾಗಿದ್ದಾರೆ. ಲೋಕಾಯುಕ್ತ ತನಿಖಾಧಿಕಾರಿಗಳು ಕುಮಾರಸ್ವಾಮಿ ಅವರನ್ನು ತೀವ್ರ ವಿಚಾರಣೆ ನಡೆಸಿದ್ದಾರೆ.

- Advertisement -

2007 ಮತ್ತು 2010ರ ನಡುವೆ ಮುಖ್ಯಮಂತ್ರಿಯಾಗಿದ್ದ ಎಚ್‌.ಡಿ ಕುಮಾರಸ್ವಾಮಿ ಹಾಗೂ ಬಿ.ಎಸ್‌ ಯಡಿಯೂರಪ್ಪ ಅವರು ಗಂಗಾನಗರದ ಭೂಮಿಯನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿಸಿದ್ದರು. ಆ ಭೂಮಿಯನ್ನು ಡಿನೋಟಿಫೈ ಮಾಡಲು ರಾಜಶೇಖರಯ್ಯ ಎಂಬವರ ಹೆಸರಿನಲ್ಲಿ 2007ರಲ್ಲಿ ಬೇನಾಮಿ ಅರ್ಜಿ ಸಲ್ಲಿಕೆಯಾಗಿತ್ತು. ಅಗ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದರು. ಕುಮಾರಸ್ವಾಮಿ ಅವರೇ ಬೇನಾಮಿ ಅರ್ಜಿ ಪಡೆದಿದ್ದರು ಎಂದೂ ಹೇಳಲಾಗಿದೆ. ಜೊತೆಗೆ, ತಮ್ಮ ಅತ್ತೆ ವಿಮಲಾ ಹೆಸರಿನಲ್ಲಿ ಜಿಪಿಎ ಮಾಡಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಆ ನಂತರ, ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ, 2010ರಲ್ಲಿ ಆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿ, ಅದೇಶ ಹೊರಡಿಸಿದ್ದರು. ಡಿನೋಟಿಫೈ ಆದ ಭೂಮಿಯನ್ನು ಕುಮಾರಸ್ವಾಮಿ ಅವರು ಬಾಬೈದ ಟಿ.ಎಸ್ ಚನ್ನಪ್ಪ ಹೆಸರಿಗೆ ನೋಂದಣಿ ಮಾಡಿಕೊಡಲಾಗಿತ್ತು.

ಈ ಅಕ್ರಮ ಡಿನೋಟಿಫಿಕೇಷನ್ ಹಗರಣದಲ್ಲಿ ಯಡಿಯೂರಪ್ಪ ಎ1 ಆರೋಪಿಯಾಗಿದ್ದರೆ, ಕುಮಾರಸ್ವಾಮಿ ಅವರು ಎ2 ಆರೋಪಿಯಾಗಿದ್ದಾರೆ. ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಲೋಕಾಯುಕ್ತ, ಸೆಪ್ಟೆಂಬರ್ 21ರಂದು ಯಡಿಯೂರಪ್ಪ ಅವರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಒಳಪಡಿಸಿತ್ತು. ಅಲ್ಲದೆ, 2007ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅವರ ಪ್ರಧಾನ ಕಾರ್ಯದರ್ಶಿಯಾಗಿದ್ದ ನಿವೃತ್ತ ಐಎಎಸ್‌ ಅಧಿಕಾರಿ ರಾಕೇಶ್‌ ಸಿಂಗ್ ಅವರಿಂದ ನಿಯಮ 164ರ ಅಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮ್ಯಾಜಿಸ್ಟ್ರೇಟ್‌ ಮುಂದೆ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

 ಇದೀಗ, ಇಂದು (ಶುಕ್ರವಾರ) ಕುಮಾರಸ್ವಾಮಿ ಅವರನ್ನೂ ಲೋಕಾಯುಕ್ತ ಕಚೇರಿಗೆ ಕರೆಸಿಕೊಂಡು ವಿಚಾರಣೆಗೆ ಒಳಪಡಿಸಲಾಗಿದೆ. ಕುಮಾರಸ್ವಾಮಿ ಅವರನ್ನು ಲೋಕಾಯುಕ್ತ ಎಡಿಜಿಪಿ ಮನೀಶ್ ಕರ್ಬೇಕರ್, ಐಜಿ ಸುಬ್ರಮಣ್ಯೇಶ್ವರ ರಾವ್ ನೇತೃತ್ವದಲ್ಲಿ ತನಿಖಾಧಿಕಾರಿ ಬಸವರಾಜ್ ಮಗದುಂ ಅವರು ತೀವ್ರ ವಿಚಾರಣೆ ನಡೆಸಿದ್ದಾರೆ.

ಬೆಂಗಳೂರಿನ ಗಂಗಾನಗರದಲ್ಲಿ 1 ಎಕರೆ 11 ಗುಂಟೆ ಭೂಮಿಯನ್ನು ಸತ್ತವರ ಹೆಸರಿನಲ್ಲಿ ಅಕ್ರಮವಾಗಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಜಂಟಿಯಾಗಿ ಡಿನೋಟಿಫಿಕೇಷನ್ ಮಾಡಿಸಿದ್ದರು. ಎಲ್ಲರೂ ಮರೆತು ಹೋಗಿದ್ದ ಈ ಹಗರಣವನ್ನು ದಾಖಲೆಗಳ ಸಮೇತ ಈದಿನ.ಕಾಮ್ ಬಯಲಿಗೆಳಿದಿದೆ. ಈ ಬೆನ್ನಲ್ಲೇ, ಹಗರಣದ ತನಿಖೆಯನ್ನು ಲೋಕಾಯುಕ್ತ ಅಧಿಕಾರಿಗಳು ಚುರುಕುಗೊಳಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...