ಅನುಮತಿ ಪಡೆಯದೆ ಅಕ್ರಮವಾಗಿ ಖಾಸಗಿ ಜಮೀನಿನಲ್ಲಿ ಅಕ್ರಮವಾಗಿ ಗಣಿಗಾರಿಕೆ ಆರೋಪದ ಮೇರೆಗೆ ರಾಜರಾಜೇಶ್ವರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ದ ಎಫ್‌ಐಆರ್ ದಾಖಲಾಗಿದೆ.
ಯಲಹಂಕ ತಹಶೀಲ್ದಾರ್ ಅನಿಲ್ ಅರಳೋಕರ್ ದೂರಿನ ಹಿನ್ನೆಲೆಯಲ್ಲಿ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅನುಮತಿ ಪಡೆಯದೇ ಅಕ್ರಮವಾಗಿ ಜಿಲೆಟಿನ್ ಬಳಸಿ ಬ್ಲಾಸ್ಟಿಂಗ್ ಮಾಡಿದ್ದ ಆರೋಪ ಇವರ ಮೇಲೆ ಹೊರಿಸಲಾಗಿದೆ.
ಬೆಂಗಳೂರು ಉತ್ತರ ತಾಲೂಕಿನ ಹುಣಸಮಾರನಹಳ್ಳಿಯ ಜಮೀನಿನಲ್ಲಿ ಕಳೆದ ಸೋಮವಾರ ಬ್ಲಾಸ್ಟಿಂಗ್ ಮಾಡಿ ಗಣಿಗಾರಿಕೆ ಮಾಡ್ತಿದ್ದಾರೆ ಅಂತ ಧರಣಿ ಸ್ಥಳೀಯರು ನಡೆಸಿದ್ದರು. ಪ್ರತಿಭಟನಾ ಧರಣಿ ಹಿನ್ನೆಲೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ, ಯಲಹಂಕ ತಹಶೀಲ್ದಾರ್ ಅನಿಲ್ ದೂರು ದಾಖಲಿಸಿದ್ದಾರೆ..
ಈ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ದ ಎಫ್‌ಐಆರ್ ದಾಖಲಾಗಿದೆ.